ಸಂಸತ್ತಿನಲ್ಲಿ ಭದ್ರತಾ ಲೋಪ: ಪ್ರತಿಭಟಿಸಿದ ಪ್ರತಿಪಕ್ಷಗಳ 13​ ಸಂಸದರು ಲೋಕಸಭೆಯಿಂದ ಅಮಾನತು

|

Updated on: Dec 14, 2023 | 3:38 PM

ಲೋಕಸಭೆ( Lok Sabha)ಯಿಂದ ಪ್ರತಿಪಕ್ಷಗಳ 13 ​ ಸಂಸದರನ್ನು ಅಮಾನತುಗೊಳಿಸಲಾಗಿದೆ. ಲೋಕ ಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಐವರು ಕಾಂಗ್ರೆಸ್​ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಸಂಸತ್ ಭವನದ ಒಳಗೆ ಭದ್ರತಾ ಲೋಪಗಳ ಕುರಿತು ಪ್ರತಿಪಕ್ಷಗಳು ಸದನದಲ್ಲಿ ಗದ್ದಲ ಸೃಷ್ಟಿಸುತ್ತಲೇ ಇವೆ. ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

ಸಂಸತ್ತಿನಲ್ಲಿ ಭದ್ರತಾ ಲೋಪ: ಪ್ರತಿಭಟಿಸಿದ ಪ್ರತಿಪಕ್ಷಗಳ 13​ ಸಂಸದರು ಲೋಕಸಭೆಯಿಂದ ಅಮಾನತು
ಸಂಸತ್ತು
Follow us on

ಲೋಕಸಭೆ( Lok Sabha)ಯಿಂದ ಪ್ರತಿಪಕ್ಷಗಳ 13 ​ ಸಂಸದರನ್ನು ಅಮಾನತುಗೊಳಿಸಲಾಗಿದೆ. ಲೋಕಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಸದನದ ಬಾವಿಗಿಳಿದು ಪ್ರತಿಭಟಿಸಿದ್ದ 9 ಕಾಂಗ್ರೆಸ್​ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಸಂಸತ್ ಭವನದ ಒಳಗೆ ಭದ್ರತಾ ಲೋಪಗಳ ಕುರಿತು ಪ್ರತಿಪಕ್ಷಗಳು ಸದನದಲ್ಲಿ ಗದ್ದಲ ಸೃಷ್ಟಿಸುತ್ತಲೇ ಇವೆ. ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಟಿಎನ್ ಪ್ರತಾಪನ್, ಹೈಬಿ ಈಡನ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಅಮಾನತುಗೊಳಿಸಲಾಗಿದೆ.
ಈ ವಿಚಾರದಲ್ಲಿ ಯಾವುದೇ ಸದಸ್ಯರಿಂದ ರಾಜಕೀಯ ನಿರೀಕ್ಷಿಸುವುದಿಲ್ಲ, ಪಕ್ಷ ರಾಜಕಾರಣ ಮೀರಿ ಕೆಲಸ ಮಾಡಬೇಕು ಎಂದು ಸ್ಪೀಕರ್ ಹೇಳಿದ್ದಾರೆ.
ಈ ಹಿಂದೆಯೂ ಸಂಸತ್ತಿನಲ್ಲಿ ಇಂತಹ ಭದ್ರತಾ ಲೋಪದ ಘಟನೆಗಳು ನಡೆದಿದ್ದು, ಅಂದಿನ ಲೋಕಸಭಾ ಸ್ಪೀಕರ್‌ಗಳ ಸೂಚನೆಯಂತೆ ಕಲಾಪ ನಡೆಸಲಾಗಿದೆ.

ಕಾಂಗ್ರೆಸ್​ನ 9 ಸಂಸದರು, ಡಿಎಂಕೆಯ ಇಬ್ಬರು ಸಂಸದರು, ಸಿಪಿಎಂನ ಇಬ್ಬರು ಸಂಸದರು, ಸಿಪಿಐನ ಓರ್ವ, ಟಿಎಂಸಿಯ ಓರ್ವ ಸಂಸದರು ಅಮಾನತುಗೊಂಡಿದ್ದಾರೆ.

ಇದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅವರ ಅಮಾನತು ಕುರಿತು ವಿರೋಧ ಪಕ್ಷಗಳ ಸಂಸದರು ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದರು. ಇದಾದ ಬಳಿಕ ರಾಜ್ಯಸಭೆಯ ಕಲಾಪವನ್ನು 3 ಗಂಟೆಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಬುಧವಾರ ಗದ್ದಲ ಉಂಟಾಗಿತ್ತು, ಪ್ರೇಕ್ಷಕರ ಗ್ಯಾಲರಿಯಿಂದ ಸಂಸದರಿರುವ ಕಡೆಗೆ ಇಬ್ಬರು ನುಗ್ಗಿದ್ದರು, ಅಷ್ಟೇ ಅಲ್ಲದೇ ಸ್ಮೋಕ್​ ಬಾಂಬ್ ಸಿಡಿಸಿದ್ದರು. ಈ ಕುರಿತು ಕಾಂಗ್ರೆಸ್​ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸಂಸದರ ಅಶಿಸ್ತಿನ ವರ್ತನೆಗಾಗಿ ಐವರು ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಬೆಳಗ್ಗೆಯಷ್ಟೇ ಟಿಎಂಸಿಯ ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಇದೇ ಕಾರಣಗಳಿಂದಾಗಿ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯಲ್ಲಿ 9 ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಮತ್ತಷ್ಟು ಓದಿ: ಭದ್ರತಾ ಲೋಪ, ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ​ ಅಮಾನತು

ಸದನದ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿಗಳು ಜಿಗಿದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಸಂಸತ್ತಿನ ಭದ್ರತೆಯನ್ನು ಪರಿಶೀಲಿಸುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆಯಬಹುದು ಎನ್ನಲಾಗಿದೆ.

ಸರ್ವಪಕ್ಷ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಸಂಸದ ಮಹುವಾ ಮೊಯಿತ್ರಾ ಅವರ ಉಚ್ಚಾಟನೆಯನ್ನು ಉಲ್ಲೇಖಿಸಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:24 pm, Thu, 14 December 23