Parliament Security Breach: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ, ಗೋಡೆ ಹಾರಿ ಆವರಣ ಪ್ರವೇಶಿಸಿದ ವ್ಯಕ್ತಿ

ನವದೆಹಲಿಯ ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯವಾಗಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6. 30 ಕ್ಕೆ ನಡೆದಿದ್ದು, ಆತ ರೈಲು ಭವನದಿಂದ ಗರುಡ ದ್ವಾರ ತಲುಪಿದ್ದಾನೆ. ಒಳನುಗ್ಗಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನವು ಹಲವು ಗದ್ದಲಗಳ ನಡುವೆ ಮುಕ್ತಾಯಗೊಂಡಿದ್ದು, ಇದಾಗ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.

Parliament Security Breach: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ, ಗೋಡೆ ಹಾರಿ ಆವರಣ ಪ್ರವೇಶಿಸಿದ ವ್ಯಕ್ತಿ
ಸಂಸತ್ ಭವನ

Updated on: Aug 22, 2025 | 11:43 AM

ನವದೆಹಲಿ, ಆಗಸ್ಟ್​ 22: ನವದೆಹಲಿಯ ಸಂಸತ್ ಭವನ(Parliament) ದಲ್ಲಿ ಭದ್ರತಾ ವೈಫಲ್ಯವಾಗಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6. 30 ಕ್ಕೆ ನಡೆದಿದ್ದು, ಆತ ರೈಲು ಭವನದಿಂದ ಗರುಡ ದ್ವಾರ ತಲುಪಿದ್ದಾನೆ. ಒಳನುಗ್ಗಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನವು ಹಲವು ಗದ್ದಲಗಳ ನಡುವೆ ಮುಕ್ತಾಯಗೊಂಡಿದ್ದು, ಇದಾಗ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.

ಕಳೆದ ವರ್ಷವೂ ಇದೇ ರೀತಿಯ ಭದ್ರತಾ ವೈಫಲ್ಯ ಸಂಭವಿಸಿದ್ದು, ವ್ಯಕ್ತಿಯೊಬ್ಬ ಸಂಸತ್ತಿನ ಗೋಡೆಯನ್ನು ಹಾರಿ ಅನೆಕ್ಸ್ ಕಟ್ಟಡದ ಆವರಣದೊಳಗೆ ಹಾರಿದ್ದ. ಘಟನೆಯ ವೀಡಿಯೊವೊಂದು ಸಹ ಕಾಣಿಸಿಕೊಂಡಿದ್ದು, ಅದರಲ್ಲಿ ಶಾರ್ಟ್ಸ್ ಮತ್ತು ಟಿ-ಶರ್ಟ್ ಧರಿಸಿದ್ದ ಶಂಕಿತನನ್ನು ಸಶಸ್ತ್ರ ಸಿಐಎಸ್ಎಫ್ ಸಿಬ್ಬಂದಿ ಹಿಡಿದಿಟ್ಟುಕೊಂಡಿರುವುದನ್ನು ಕಾಣಬಹುದು. ತಪಾಸಣೆಯ ಸಮಯದಲ್ಲಿ ಆ ವ್ಯಕ್ತಿಯ ಯಾವುದೇ ಅಪರಾಧ ಸಾಬೀತಾಗಿಲ್ಲ.

2023 ರಲ್ಲಿ 2001 ರ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕ ದಿನದಂದು ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭಾ ಕೊಠಡಿಗೆ ಹಾರಿದ್ದ. ಅದೇ ಸಮಯದಲ್ಲಿ, ಇತರ ಇಬ್ಬರು ಆರೋಪಿಗಳಾದ ಅಮೋಲ್ ಶಿಂಧೆ ಮತ್ತು ನೀಲಂ ಆಜಾದ್ ಅವರು ಸಂಸತ್ತಿನ ಆವರಣದೊಳಗೆ ಬಂದು ಸರ್ವಾಧಿಕಾರ ನಡೆಯಲು ಬಿಡುವುದಿಲ್ಲ ಎಂದು ಹೇಳಿದ್ದರು.

ಮತ್ತಷ್ಟು ಓದಿ: ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

ಮಹೇಶ್ ಕುಮಾವತ್ ಮತ್ತು ಲಲಿತ್ ಝಾ ಎಂಬ ಇನ್ನಿಬ್ಬರನ್ನು ಸಹ ಬಂಧಿಸಲಾಗಿತ್ತು. ಈ ವಾರದ ಆರಂಭದಲ್ಲಿ, ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಝಾ ಸಲ್ಲಿಸಿದ್ದ ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರ ಪ್ರತಿಕ್ರಿಯೆಯನ್ನು ಕೋರಿತ್ತು. ಇದೀಗ ಈ ವ್ಯಕ್ತಿ ಯಾವ ಕಾರಣಗಳನ್ನಿಟ್ಟುಕೊಂಡು ಸಂಸತ್ ಭವನ ಪ್ರವೇಶಿಸಿದ್ದ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 11:38 am, Fri, 22 August 25