Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ನರೇಂದ್ರ ಮೋದಿ

Parliament Security Breach: ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ನರೇಂದ್ರ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Dec 17, 2023 | 10:12 AM

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆಯ ಗಂಭೀರತೆಯನ್ನು ಕಡೆಗಣಿಸಬಾರದು, ಹಾಗಾಗಿ ಲೋಕಸಭಾ ಸ್ಪೀಕರ್ ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘಟನೆಯ ಹಿಂದಿನ ಉದ್ದೇಶವೇನು ಎಂದು ತಿಳಿಯಲು ವಿಷಯದ ಆಳಕ್ಕೆ ಹೋಗುವುದು ಮುಖ್ಯ, ಒಟ್ಟಾಗಿ ಪರಿಹಾರ ಸಿಗಬೇಕು.

ಡಿಸೆಂಬರ್ 13 ರಂದು ಸಾಗರ್ ಹಾಗೂ ಮನೋರಂಜನ್ ಎನ್ನುವ ಇಬ್ಬರು ಸದನದೊಳಗೆ ನುಗ್ಗಿ ಹೊಗೆ ಕ್ಯಾನ್ ಎಸೆದಿದ್ದರು, ಲೋಕಸಭೆ ಪೂರ್ತಿ ಹೊಗೆ ತುಂಬಿಕೊಂಡಿದ್ದ ಕಾರಣ ಎಲ್ಲರೂ ಭಯಭೀತರಾಗಿದ್ದರು.

ಕೆಲ ಸಮಯದ ಬಳಿಕ ಅವರಿಬ್ಬರನ್ನು ಬಂಧಿಸಲಾಯಿತು, ಸಂಸತ್​ ಹೊರಗೆ ಘೋಷಣೆ ಕೂಗುತ್ತಿದ್ದ ಇನ್ನೂ ಇಬ್ಬರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೆ ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಮಹೇಶ್​ ಕುಮಾವರ್ ಹಾಗೂ ಲಲಿತ್ ಝಾ ಇಬ್ಬರು ಸೇರಿ ಎಲ್ಲಾ ಆರೋಪಿಗಳ ಮೊಬೈಲ್​ ಅನ್ನು ರಾಜಸ್ಥಾನದಲ್ಲಿ ಸುಟ್ಟು ಹಾಕಿದ್ದರು, ಅದರ ಬಿಡಿ ಭಾಗಗಳನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ