Parliament Session: ಜೂನ್ 27ರಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ಸಂಸತ್ ಅಧಿವೇಶನ ಜೂನ್ 24ರಿಂದ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Parliament Session: ಜೂನ್ 27ರಂದು ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿ ದ್ರೌಪದಿ ಮುರ್ಮು
Follow us
|

Updated on: Jun 17, 2024 | 7:07 PM

ನವದೆಹಲಿ: ಸಂಸತ್‌ ಜಂಟಿ ಅಧಿವೇಶನಕ್ಕೆ (Parliament Session) ದಿನಾಂಕವನ್ನು ನಿಗದಿಪಡಿಸಲಾಗಿದೆ. ಜೂನ್ 24ರಿಂದ ಸಂಸತ್‌ ಜಂಟಿ ಅಧಿವೇಶನ ಆರಂಭವಾಗಲಿದೆ. ಜೂ. 27ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ (Narendra Modi) 3ನೇ ಸಲ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

ಭಾರತದಲ್ಲಿ ಲೋಕಸಭೆ ಚುನಾವಣೆ ಬಳಿಕ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸಮ್ಮಿಶ್ರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೂರನೇ ಬಾರಿಗೆ ಸರ್ಕಾರ ರಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿದ್ದಾರೆ. ಈಗ 18ನೇ ಲೋಕಸಭೆಯ ವಿಶೇಷ ಅಧಿವೇಶನ ಜೂನ್ 24ರಂದು ಪ್ರಾರಂಭವಾಗಬಹುದು. ಸಂಸತ್ತಿನ ಈ ಅಧಿವೇಶನ ಜುಲೈ 3ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27ರಂದು ಸಂಸತ್ತಿನ ಉಭಯ ಸದನಗಳನ್ನು (ಲೋಕಸಭೆ ಮತ್ತು ರಾಜ್ಯಸಭೆ) ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು, 18ನೇ ಲೋಕಸಭೆಗೆ ಚುನಾಯಿತರಾಗಿರುವ ನೂತನ ಸಂಸದರು ಜೂನ್ 24 ಮತ್ತು 25ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: Parliament Monsoon Session 2024: ಜುಲೈ 22 ರಿಂದ ಆಗಸ್ಟ್​ 9ರವರೆಗೆ ಸಂಸತ್ ಮುಂಗಾರು ಅಧಿವೇಶನ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೀಡಿದ ಮಾಹಿತಿ ಪ್ರಕಾರ, 18ನೇ ಲೋಕಸಭೆಗೆ ಚುನಾಯಿತರಾಗಿರುವ ನೂತನ ಸಂಸದರು ಜೂನ್ 24 ಮತ್ತು 25ರಂದು ಪ್ರಮಾಣ ವಚನ ಸ್ವೀಕರಿಸಬಹುದು. ಜೂನ್ 26ರಂದು ಸ್ಪೀಕರ್ ಚುನಾವಣೆ ನಡೆಯಲಿದೆ. ರಾಜ್ಯಸಭೆಯ 264ನೇ ಅಧಿವೇಶನ ಜೂನ್ 27ರಿಂದ ಆರಂಭವಾಗಲಿದ್ದು, ಜುಲೈ 3ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಇದನ್ನೂ ಓದಿ: ಜೂನ್​​ 20ಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಬಹುಮತ ಸಾಬೀತು ಸಾಧ್ಯತೆ

ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಜೂನ್ 4ರಂದು ಪ್ರಕಟಿಸಲಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದೆ. ನರೇಂದ್ರ ಮೋದಿ ಅವರು 71 ಸಚಿವರೊಂದಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ನೂತನ ಸಚಿವರಿಗೂ ಇಲಾಖೆಗಳನ್ನು ಹಂಚಲಾಗಿದೆ. ಇದಾದ ಬಳಿಕ ಸಚಿವರೆಲ್ಲರೂ ತಮ್ಮ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಂಡು ಕೆಲಸ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು