Parliament Session: ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅದಾನಿ ವಿರೋಧಿ ಘೋಷಣೆ; ಉಭಯ ಸದನಗಳ ಮುಂದೂಡಿಕೆ

ಸಂಸತ್​ ಕಲಾಪಕ್ಕೂ ಮುನ್ನ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಸಹಮತ ವ್ಯಕ್ತವಾಗಲಿಲ್ಲ. ಆಪ್, ಬಿಆರ್​ಎಸ್, ಎಸ್​ಪಿ ಮತ್ತು ಆರ್​ಜೆಡಿ ನಾಯಕರು ಪ್ರತಿಭಟನೆ ತೀವ್ರಗೊಳಿಸಬೇಕೆಂದು ವಾದಿಸಿದರು.

Parliament Session: ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅದಾನಿ ವಿರೋಧಿ ಘೋಷಣೆ; ಉಭಯ ಸದನಗಳ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Feb 06, 2023 | 11:51 AM

ದೆಹಲಿ: ಅದಾನಿ ಸಮೂಹದಲ್ಲಿ (Adani Group) ಅವ್ಯವಹಾರ ನಡೆದಿರುವ ಶಂಕೆಯಿದೆ ಎನ್ನುವ ಹಿಂಡನ್​ಬರ್ಗ್​ ವರದಿಯು ಸಂಸತ್ತಿನಲ್ಲಿಯೂ ಸೋಮವಾರ (ಫೆ 6) ಪ್ರತಿಧ್ವನಿಸಿತು. ಪ್ರತಿಪಕ್ಷಗಳ ಸದಸ್ಯರು ಅದಾನಿ ವಿರೋಧಿ ಘೋಷಣೆಗಳನ್ನು ಮೊಳಗಿಸಿದ ಹಿನ್ನೆಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆನ್ನುವ ಮನವಿಗೆ ಪ್ರತಿಪಕ್ಷಗಳ ಸದಸ್ಯರು ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್ ಧನಕರ್ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು. ಲೋಕಸಭೆಯಲ್ಲಿಯೂ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.

ಅದಾನಿ ಗ್ರೂಪ್​ ಅವ್ಯವಹಾರದಿಂದ ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮ (Life Insurance Corporation of India – LIC) ಮತ್ತು ಭಾರತೀಯ ಸ್ಟೇಟ್​ ಬ್ಯಾಂಕ್​ಗೆ (State Bank of India – SBI) ಹೆಚ್ಚು ನಷ್ಟವಾಗಿದೆ. ಅವ್ಯವಹಾರದ ತನಿಖೆಗಾಗಿ ಜಂಟಿ ಸದನ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು.

ಇದನ್ನೂ ಓದಿ: Adani Row: ಮಾರುಕಟ್ಟೆ ನಿಯಂತ್ರಕಗಳು ತಮ್ಮ ಕೆಲಸ ಮಾಡಲಿವೆ; ಅದಾನಿ ಪ್ರಕರಣದ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ಸಂಸತ್​ ಕಲಾಪಕ್ಕೂ ಮುನ್ನ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಸಹಮತ ವ್ಯಕ್ತವಾಗಲಿಲ್ಲ. ಆಪ್, ಬಿಆರ್​ಎಸ್, ಎಸ್​ಪಿ ಮತ್ತು ಆರ್​ಜೆಡಿ ನಾಯಕರು ಪ್ರತಿಭಟನೆ ತೀವ್ರಗೊಳಿಸಬೇಕೆಂದು ವಾದಿಸಿದರು. ಕಾಂಗ್ರೆಸ್, ಆರ್​ಎಸ್​ಪಿ ಮತ್ತು ಸಿಪಿಎಂ ಪಕ್ಷಗಳು ಪ್ರಬಲ ಚರ್ಚೆ ನಡೆಸಬೇಕು ಎಂದು ವಾದಿಸಿದವು. ಆದರೆ ಕೊನೆಗೆ ಪ್ರತಿಭಟನೆ ತೀವ್ರಗೊಳಿಸಬೇಕೆಂಬ ಒತ್ತಡಕ್ಕೆ ಕಾಂಗ್ರೆಸ್​ ಮತ್ತಿತರ ಪಕ್ಷಗಳು ಒಪ್ಪಿದವು. ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಭೆ ನಡೆಯಿತು.

ತೆಲಂಗಾಣದ ಬಿಆರ್​ಎಸ್​ ಸಂಸದ ಕೆ.ಕೇಶವ ರಾವ್​ ರಾಜ್ಯಸಭೆಯಲ್ಲಿ ನಿಯಮ 267ರ ಅಡಿಯಲ್ಲಿ ಅದಾನಿ ಗ್ರೂಪ್ ಕುರಿತು ಹಿಂಡನ್​ಬರ್ಗ್​ ನೀಡಿರುವ ವರದಿಯ ಬಗ್ಗೆ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಮಂಡಿಸಿದರು.

ಕಲಾಪಕ್ಕೂ ಮುನ್ನ ಸಂಸತ್ ಭವನದ ಎದುರು ಇರುವ ಗಾಂಧಿ ಪ್ರತಿಮೆ ಸಮೀಪ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಅದಾನಿ ಗ್ರೂಪ್ ಅವ್ಯವಹಾರದ ಬಗ್ಗೆ ಜಂಟಿ ಸದನ ಸಮಿತಿ ರಚಿಸಬೇಕು ಅಥವಾ ಸುಪ್ರೀಂಕೋರ್ಟ್​ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:51 am, Mon, 6 February 23

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್