AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ

ಇಂದಿನಿಂದ (ಏಪ್ರಿಲ್ 16) 18 ರವರೆಗೆ ಮೂರು ದಿನಗಳ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು, ಕೇಂದ್ರ ಸರ್ಕಾರವು ಸಂವಿಧಾನ (131 ನೇ ತಿದ್ದುಪಡಿ) ಮಸೂದೆ, ಕೇಂದ್ರ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ ಮತ್ತು ಸೀಮಾ ನಿರ್ಣಯ ಮಸೂದೆಯೊಂದಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದೆ. 3 ಪ್ರಮುಖ ಮಸೂದೆಗಳ ಮೇಲಿನ ಮತದಾನ ನಾಳೆ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರ ಭಾಷಣದ ಹೈಲೈಟ್ಸ್ ಇಲ್ಲಿದೆ.

ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ
Pm Modi In Parliament Session
ಸುಷ್ಮಾ ಚಕ್ರೆ
|

Updated on:Apr 16, 2026 | 5:22 PM

Share

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ (Women’s Reservation Bill) ಬಗ್ಗೆ ಇಂದಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಸೂದೆಯನ್ನು ಮಹಿಳಾ ಸಬಲೀಕರಣದ “ಐತಿಹಾಸಿಕ ಹೆಜ್ಜೆ” ಎಂದು ಬಣ್ಣಿಸಿದ್ದಾರೆ.’ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ’ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ.

ಸೀಮಾ ನಿರ್ಣಯ ಮಸೂದೆ ಮತ್ತು ಮಹಿಳಾ ಕೋಟಾ ಮಸೂದೆಯ ಕುರಿತು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಒಂದು ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳನ್ನು ನಾನು ಭೇಟಿಯಾದೆ. ಯಾರೂ ಮಹಿಳಾ ಮೀಸಲಾತಿ ಮಸೂದೆಯನ್ನು ತಾತ್ವಿಕವಾಗಿ ವಿರೋಧಿಸಲಿಲ್ಲ. ಆದರೆ ಅದಾದ ನಂತರ ಒಂದು ರಾಜಕೀಯ ದೃಷ್ಟಿಕೋನವನ್ನು ಇಟ್ಟುಕೊಂಡು ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ ನಾನು ಅಂತಹ ಜನರಿಗೆ ಸ್ನೇಹಿತನಂತೆ ಒಂದು ಸಲಹೆ ನೀಡಲು ಬಯಸುತ್ತೇನೆ. ನಾವೆಲ್ಲರೂ ಒಟ್ಟಿಗೆ ಇದನ್ನು ಜಾರಿಗೊಳಿಸಿದರೆ ದೇಶಕ್ಕೆ ಮಾಡಿದ ಸೇವೆಗಾಗಿ ಇತಿಹಾಸವು ನಮ್ಮನ್ನು ನೆನಪಿಸಿಕೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಮಸೂದೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ನಾವು ಭಾರತೀಯರು ರಾಷ್ಟ್ರಕ್ಕೆ ಹೊಸ ದಿಕ್ಕು ನೀಡಲು ಒಗ್ಗೂಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ಭಾರತ ಪ್ರಜಾಪ್ರಭುತ್ವದ ತಾಯಿ. ಈ ಅಭಿವೃದ್ಧಿಯ ಪ್ರಯಾಣದಲ್ಲಿ ಹೊಸ ಆಯಾಮವನ್ನು ಸೇರಿಸಲು ನಮಗೆ ಪವಿತ್ರವಾದ ಅವಕಾಶ ನೀಡಲಾಗಿದೆ. ರಾಷ್ಟ್ರ ನಿರ್ಮಾಣದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ದೇಶದ ಅರ್ಧದಷ್ಟು ಜನಸಂಖ್ಯೆಯಾದ ಮಹಿಳೆಯರನ್ನು ಸೇರಿಸಿಕೊಳ್ಳುವ ಅವಕಾಶ ನಮಗೆ ಸಿಕ್ಕಿರುವುದು ನಮ್ಮ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಸೇರಿ ಮೂರು ಮಸೂದೆಗಳ ಕುರಿತು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

“ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೆ, ಇದು ಎಲ್ಲರಿಗೂ, ಇಡೀ ರಾಷ್ಟ್ರಕ್ಕೆ ಸಾಮೂಹಿಕ ಯಶಸ್ಸು. ಇದು ಯಾವುದೇ ಒಂದು ಪಕ್ಷಕ್ಕೆ ಸಿಕ್ಕ ವಿಜಯವಾಗಿರುವುದಿಲ್ಲ. ಹೀಗಾಗಿ ಈ ಮಸೂದೆಗೆ ರಾಜಕೀಯ ಬಣ್ಣ ನೀಡುವ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Thu, 16 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ