AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: ನೂತನ ಸಂಸತ್​ ಭವನದಲ್ಲಿ ಎರಡನೇ ದಿನದ ವಿಶೇಷ ಅಧಿವೇಶನ, ಏನೇನು ನಡೆಯುತ್ತೆ? ಇಲ್ಲಿದೆ ಮಾಹಿತಿ

ಇಂದಿನಿಂದ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಸೆಪ್ಟೆಂಬರ್ 18ರಿಂದಲೇ ಅಧಿವೇಶನ ಶುರುವಾಗಿದ್ದು, ಹಳೆಯ ಸಂಸತ್​ ಭವನದಲ್ಲಿ ನಡೆದಿತ್ತು. ಇಂದು ಎರಡನೇ ದಿನದ ಅಧಿವೇಶನವು ನೂತನ ಸಂಸತ್ ಭವನದಲ್ಲಿ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣದೊಂದಿಗೆ ಲೋಕಸಭೆ ಕಲಾಪ ಆರಂಭವಾಯಿತು. ಈ ವೇಳೆ ಸಂಸತ್ತಿಗೆ 75 ವರ್ಷ ಪೂರೈಸುವ ಕುರಿತು ಚರ್ಚೆ ನಡೆಯಿತು.

Parliament Special Session: ನೂತನ ಸಂಸತ್​ ಭವನದಲ್ಲಿ ಎರಡನೇ ದಿನದ ವಿಶೇಷ ಅಧಿವೇಶನ, ಏನೇನು ನಡೆಯುತ್ತೆ? ಇಲ್ಲಿದೆ ಮಾಹಿತಿ
ನೂತನ ಸಂಸತ್
Follow us
ನಯನಾ ರಾಜೀವ್
|

Updated on: Sep 19, 2023 | 10:21 AM

ಇಂದಿನಿಂದ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಸೆಪ್ಟೆಂಬರ್ 18ರಿಂದಲೇ ಅಧಿವೇಶನ ಶುರುವಾಗಿದ್ದು, ಹಳೆಯ ಸಂಸತ್​ ಭವನದಲ್ಲಿ ನಡೆದಿತ್ತು. ಇಂದು ಎರಡನೇ ದಿನದ ಅಧಿವೇಶನವು ನೂತನ ಸಂಸತ್ ಭವನದಲ್ಲಿ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣದೊಂದಿಗೆ ಲೋಕಸಭೆ ಕಲಾಪ ಆರಂಭವಾಯಿತು. ಈ ವೇಳೆ ಸಂಸತ್ತಿಗೆ 75 ವರ್ಷ ಪೂರೈಸುವ ಕುರಿತು ಚರ್ಚೆ ನಡೆಯಿತು.

ಈ ವೇಳೆ ಹಲವು ವಿರೋಧ ಪಕ್ಷದ ನಾಯಕರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನ ವಿಶೇಷ ಅಧಿವೇಶನದ ನಡುವೆಯೇ ಕೇಂದ್ರ ಸಚಿವ ಸಂಪುಟ ಸಭೆಯೂ ನಡೆದಿದೆ. ನೂತನ ಸಂಸತ್ ಭವನದ ಪ್ರವೇಶ ದ್ವಾರದಲ್ಲಿ ಆನೆ, ಕುದುರೆ ಮತ್ತು ಗರುಡನ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ.

ಏನೇನು ಕಾರ್ಯಕ್ರಮಗಳು ನಡೆಯಲಿವೆ -ಬೆಳಗ್ಗೆ 9.30ರಿಂದ 10.45ರವರೆಗೆ ಸಂಸತ್​ನಲ್ಲಿ ಫೋಟೊ ಸೆಷನ್. -ಬೆಳಗ್ಗೆ 11 ರಿಂದ 12.30ರವರೆಗೆ ಹಳೆಯ ಸಂಸತ್​ ಭವನದಲ್ಲಿ ಸೆಂಟ್ರಲ್​ ಹಾಲ್​ನಲ್ಲಿ ಸೇರಲಿದ್ದಾರೆ. -ಬೆಳಗ್ಗೆ 11 ರಿಂದ ಮಧ್ಯಾಹ್ನ 12.20ರವರೆಗೆ 3 ಮಂದಿ 5 ನಿಮಿಷಗಳ ಕಾಲ ಮಾತನಾಡಲಿದ್ದಾರೆ. -ಬಿಜೆಪಿ ಸಂಸದ ಮನೇಕಾ ಗಾಂಧಿ, ಜೆಎಂಎಂನ ಶಿಬು ಸೋರೆನ್, ಮನ್​ಮೋಹನ್ ಸಿಂಗ್ ಮಾತನಾಡಲಿದ್ದಾರೆ. -12.30 ರಿಂದ 1 ಗಂಟೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಳೆಯ ಸಂಸತ್ ಭವನದಿಂದ ನೂತನ ಸಂಸತ್​ ಭವನಕ್ಕೆ ತೆರಳಿದ್ದಾರೆ. -ಹಾಗೆಯೇ ಸಂಸದರು ಪ್ರಧಾನಿ ನರೇಂದ್ರ ಮೋದಿಯವರ ಹಿಂದೆಯೇ ತೆರಳಲಿದ್ದಾರೆ. -2.15ಕ್ಕೆ ರಾಜ್ಯ ಸಭೆ ಹಾಗೂ ಲೋಕಸಭೆ ಕಲಾಪಗಳು ನೂತನ ಸಂಸತ್​ ಭವನದಲ್ಲಿ ಶುರುವಾಗಲಿದೆ.

ಮತ್ತಷ್ಟು ಓದಿ: Parliament Special Session: ಇಂದು ಸಂಸತ್ ವಿಶೇಷ ಅಧಿವೇಶನ, ಲೋಕಸಭೆಯಲ್ಲಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

1. ವಕೀಲರ (ತಿದ್ದುಪಡಿ) ಮಸೂದೆ, 2023

2. ಪತ್ರಿಕಾ ಮತ್ತು ಆವರ್ತಕ ನೋಂದಣಿ ಮಸೂದೆ, 2023 ( ಇವುಗಳನ್ನು ಲೋಕಸಭೆಯಲ್ಲಿ ಪರಿಚಯಿಸಲಾಗುವುದು ಆಗಸ್ಟ್ 3 ರಂದು ರಾಜ್ಯಸಭೆಯಲ್ಲಿ ಎರಡು ಮಸೂದೆ ಅಂಗೀಕರಿಸಲಾಯಿತು)

3. ಪೋಸ್ಟ್ ಆಫೀಸ್ ಬಿಲ್, 2023

4. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅನ್ನು ರಾಜ್ಯಸಭೆಯಲ್ಲಿ ಚರ್ಚಿಸಲಾಗುವುದು (ಈ ಎರಡೂ ಮಸೂದೆಗಳನ್ನು ಆಗಸ್ಟ್ 10 ರಂದು ರಾಜ್ಯಸಭೆಯಲ್ಲಿ ಮಂಡಿಸಲಾಯಿತು)

5. ಮೊದಲ ದಿನವಾದ ಇಂದು 75 ವರ್ಷಗಳ ಸಂಸದೀಯ ಪಯಣ – ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಪಾಠಗಳ ಕುರಿತು ಚರ್ಚೆ ನಡೆಯಲಿದೆ. ಇದಲ್ಲದೆ, ಸ್ವಾತಂತ್ರ್ಯದ ಅಮರ ಅವಧಿಯ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಚಂದ್ರಯಾನ -3 ಮಿಷನ್ ಮತ್ತು ಜಿ 20 ಶೃಂಗಸಭೆಯಲ್ಲಿ ಪ್ರಸ್ತಾಪಗಳನ್ನು ತರಲಾಗುವುದು.

6. ಇವುಗಳ‌ ನಡುವೆ ಸರ್ಕಾರ ಅಚ್ಚರಿಯ ರೀತಿಯಲ್ಲಿ ವಿಶೇಷ ಮಸೂದೆ ಮಂಡಿಸುವ ಸಾಧ್ಯತೆಗಳಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ