Women’s Reservation Bill: ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ

|

Updated on: Sep 21, 2023 | 9:22 AM

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ(Women's Reservation Bill)ಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ.ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹುನಿರೀಕ್ಷಿತ ನಾರಿ ಶಕ್ತಿ ವಂದನ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಬಹುತೇಕ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ್ದು, ವಿಧೇಯಕದ ಪರವಾಗಿ 454 ಸಂಸದರು ಮತ ಚಲಾಯಿಸಿದರೆ, ಇಬ್ಬರು ಸಂಸದರು ಮಾತ್ರ ಈ ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

Womens Reservation Bill: ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ
ಸಂಸತ್
Image Credit source: Indian Express
Follow us on

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ ಬೆನ್ನಲ್ಲೇ ಇಂದು ರಾಜ್ಯಸಭೆಯಲ್ಲೂ ಕೂಡ ಮಸೂದೆ ಮಂಡನೆಯಾಗಲಿದೆ.ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹುನಿರೀಕ್ಷಿತ ನಾರಿ ಶಕ್ತಿ ವಂದನ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಬಹುತೇಕ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ್ದು, ವಿಧೇಯಕದ ಪರವಾಗಿ 454 ಸಂಸದರು ಮತ ಚಲಾಯಿಸಿದರೆ, ಇಬ್ಬರು ಸಂಸದರು ಮಾತ್ರ ಈ ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲದ ಅಗತ್ಯವಿತ್ತು. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಂಕ್ತಿವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸಲಿದೆ.
ಈ ಮಸೂದೆಯ ಮೂಲಕ ಸಂವಿಧಾನದ 330 ಹಾಗೂ 332ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದ್ದು, ಈ ಮೂಲಕ ಲೋಕಸಭೆಯ 543 ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನಸಭೆಗಳಲ್ಲಿ 4,109 ಸ್ಥಾನಗಳ ಪೈಕಿ 1370 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

ಈ ಮೊದಲು ಈ ಸಂಖ್ಯೆ ಇದಕ್ಕಿಂತಲೂ ಕಡಿಮೆಯೇ ಇತ್ತು, ದೇಶದ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸಾಧ್ಯವಾಗಿದ್ದು, ಈ ಮಹಿಳಾ ಮೀಸಲಾತಿಯಿಂದಲೇ, ಲೋಕಸಭೆ ಹಾಗೂ ರಾಜ್ಯ ವಿಧಾನಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂಬುದು ಸಾಕಷ್ಟು ವರ್ಷಗಳ ಹಳೆಯ ಬೇಡಿಕೆಯಾಗಿತ್ತು.

ಮತ್ತಷ್ಟು ಓದಿ: Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ

ಈಗ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮಹಿಳಾ ಕಾರ್ಯಕರ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಕನಿಷ್ಠ 15 ರಾಜ್ಯಗಳ ಅಸೆಂಬ್ಲಿಗಳು ಇದನ್ನು ಅನುಮೋದಿಸಬೇಕು, ಆದರೆ ಇದು ಸ್ಪಷ್ಟವಾಗಿಲ್ಲ. ಇದು ಹೇಗೆ ಹೊರಹೊಮ್ಮುತ್ತದೆ ಎಂಬುದನ್ನು ನಾವು ಕಾಯಬೇಕಾಗಿದೆ ಎಂದು ಮಹಿಳಾ ಕಾರ್ಯಕರ್ತೆ ತಾರಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ