Parliament Winter Session 2021 ಲಖಿಂಪುರ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಸಚಿವರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ಸಚಿವ (ಗೃಹ) ಅಜಯ್ ಮಿಶ್ರಾ ಅವರನ್ನು ಪದಚ್ಯುತಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಕರೆ ನೀಡಿದರು.

Parliament Winter Session 2021 ಲಖಿಂಪುರ ಖೇರಿಯಲ್ಲಿ ರೈತರನ್ನು ಹತ್ಯೆ ಮಾಡಿದ ಸಚಿವರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 16, 2021 | 12:15 PM

ದೆಹಲಿ:ಗುರುವಾರ ಸದನಕ್ಕೆ ಹಾಜರಾಗುವಂತೆ ಕಾಂಗ್ರೆಸ್ ತನ್ನ ರಾಜ್ಯಸಭಾ  (Rajya Sabha)ಸದಸ್ಯರಿಗೆ ಬುಧವಾರ ವಿಪ್ ಜಾರಿ ಮಾಡಿದೆ. “ನಾಳೆ ರಾಜ್ಯಸಭೆಯಲ್ಲಿ ಬಹಳ ಮುಖ್ಯವಾದ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು” ಎಂದು ಪಕ್ಷದ ಮುಖ್ಯ ವಿಪ್ ಜೈರಾಮ್ ರಮೇಶ್ (Jairam Ramesh) ಹೇಳಿದ್ದಾರೆ.ಲೋಕಸಭೆಯಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ, 2021 (National Anti-Doping Bill, 2021)ಮತ್ತು ವನ್ಯಜೀವಿ (ರಕ್ಷಣೆ) ತಿದ್ದುಪಡಿ ಮಸೂದೆಯನ್ನು(Wildlife (Protection) Amendment Bill) ಇಂದು (ಗುರುವಾರ) ಮಂಡಿಸಲಾಗುವುದು. ಏತನ್ಮಧ್ಯೆ, ರಾಜ್ಯಸಭೆ ಕೊರೊನಾವೈರಸ್ ನ ಒಮಿಕ್ರಾನ್ ರೂಪಾಂತರದ ಬಗ್ಗೆ ತನ್ನ ಚರ್ಚೆಯನ್ನು ಮುಂದುವರಿಸಲು ಸಿದ್ಧವಾಗಿದೆ. ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ (Lakhimpur Kheri) ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಜ್ಯ ಸಚಿವ (ಗೃಹ) ಅಜಯ್ ಮಿಶ್ರಾ (Ajay Mishra) ಅವರನ್ನು ಪದಚ್ಯುತಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಕರೆ ನೀಡಿದರು. “ಲಖಿಂಪುರ ಖೇರಿಯಲ್ಲಿ ನಡೆದ ಕೊಲೆಯ ಬಗ್ಗೆ ಮಾತನಾಡಲು ನಮಗೆ ಅವಕಾಶ ನೀಡಬೇಕು. ಸಚಿವರ ಕೈವಾಡವಿದೆ. ಅದರ ಬಗ್ಗೆ ಇದು ಪಿತೂರಿ ಎಂದು ಹೇಳಲಾಗಿದೆ. ರೈತರನ್ನು ಕೊಂದ ಸಚಿವರು ರಾಜೀನಾಮೆ ನೀಡಿ ಶಿಕ್ಷೆಗೆ ಗುರಿಪಡಿಸಬೇಕು’ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆಗ್ರಹಿಸಿದರು. ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ನಡುವೆಯೇ ಕಲಾಪ ಆರಂಭವಾದ ಒಂಬತ್ತು ನಿಮಿಷಗಳಲ್ಲಿ ರಾಜ್ಯಸಭೆಯನ್ನು ಮುಂದೂಡಲಾಯಿತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಲೋಕಸಭೆಯಲ್ಲಿ “ತುರ್ತು ಪ್ರಾಮುಖ್ಯತೆಯ ನಿರ್ದಿಷ್ಟ ವಿಷಯವನ್ನು” ಚರ್ಚಿಸಲು ವ್ಯವಹಾರವನ್ನು ಮುಂದೂಡುವಂತೆ ನೋಟಿಸ್ ನೀಡಿದರು. ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು “ತಕ್ಷಣ ವಜಾಗೊಳಿಸಬೇಕು” ಮತ್ತು “ಸಂತ್ರಸ್ತರ ಕುಟುಂಬಗಳಿಗೆ ನ್ಯಾಯವನ್ನು ತಲುಪಿಸುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು  ರಾಹುಲ್ ಗಾಂಧಿ ಹೇಳಿದರು.

ರಾಜ್ಯಸಭೆ ಮಧ್ಯಾಹ್ನ 2 ಗಂಟೆಗೆ ಮಂದೂಡಿಕೆ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸದನವನ್ನು ಮಧ್ಯಾಹ್ನ 2:00 ಗಂಟೆಗೆ ಮುಂದೂಡಿದರು.

ಲೋಕಸಭೆಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಸಂತಾಪ ಕೂನೂರಿನಲ್ಲಿ ನಡೆದ ಐಎಎಫ್ ವಿಮಾನ ಅಪಘಾತದಲ್ಲಿ ತೀವ್ರ ಗಾಯಗೊಂಡು ನಿಧನರಾದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಸಂತಾಪ ಸೂಚಿಸಿ ಲೋಕಸಭೆ ಒಂದು ಕ್ಷಣ ಮೌನ ಆಚರಿಸಿತು.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರು ಮುಂದೂಡಿಕೆ ಸೂಚನೆ ನೀಡಿದರು “ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು (ಪಿಎಸ್‌ಬಿ) ದುರ್ಬಲಗೊಳಿಸುವ ಸರ್ಕಾರದ ಪ್ರಯತ್ನಗಳ” ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಲೋಕಸಭೆಯಲ್ಲಿ ಮುಂದೂಡಿಕೆ ಸೂಚನೆ ನೀಡಿದರು. ಏತನ್ಮಧ್ಯೆ, ಲಖಿಂಪುರ ಖೇರಿ ಘಟನೆ, ಎಸ್‌ಐಟಿ ವರದಿ ಮತ್ತು ಸಚಿವ ಅಜಯ್ ಕುಮಾರ್ ಟೆನಿ ಅವರನ್ನು ತಕ್ಷಣ ವಜಾಗೊಳಿಸಬೇಕೆಂಬ ಬೇಡಿಕೆಯ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಲೋಕಸಭೆಯಲ್ಲಿ ಮುಂದೂಡಿಕೆ ಸೂಚನೆ ನೀಡಿದರು.

ಇದನ್ನೂ ಓದಿ: Gender neutral uniforms ಕೇರಳದಲ್ಲಿ ಶಾಲಾಮಕ್ಕಳಿಗೆ ಜೆಂಡರ್ ನ್ಯೂಟ್ರಲ್ ಸಮವಸ್ತ್ರ, ವಿರೋಧವೇಕೆ?

Published On - 12:03 pm, Thu, 16 December 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್