AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ

ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಲೋಕಸಭೆಯಲ್ಲಿ ಅಂಗೀಕಾರವಾದ ನಂತರ ಮಧ್ಯಾಹ್ನ 2 ಗಂಟೆೆಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿ ಅಂಗೀಕಾರವಾಗಿದೆ.

Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ
ರಾಜ್ಯಸಭೆಯಲ್ಲಿ ಕೃಷಿ ಕಾನೂನು ರದ್ದತಿ ಮಸೂದೆ ಅಂಗೀಕಾರ
TV9 Web
| Edited By: |

Updated on:Nov 29, 2021 | 2:34 PM

Share

ದೆಹಲಿ : ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಮಂಡಿಸಿದ್ದ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ( Farm Laws Repeal Bill 2021) ಅಂಗೀಕಾರವಾದ ನಂತರ ಇಂದು (ಸೋಮವಾರ) ಮಧ್ಯಾಹ್ನ 2 ಗಂಟೆೆಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿ ಅಂಗೀಕಾರವಾಗಿದೆ. ವಿಪಕ್ಷಗಳ  ಗದ್ದಲದ ನಡುವೆಯೇ  ಮಸೂದೆ ಅಂಗೀಕಾರವಾಗಿದೆ.  ಈ ಮೊದಲು ಕಲಾಪವನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡುಚಳಿಗಾಲದ ಅಧಿವೇಶನವನ್ನು ಸಕ್ರಿಯಗೊಳಿಸಲು ‘ಪ್ರಜಾಪ್ರಭುತ್ವ ಮತ್ತು ಸಂಸದೀಯ ಸ್ಥಳ’ವನ್ನು ಬಳಸಿ ಎಂದು ಸದಸ್ಯರಲ್ಲಿ ಒತ್ತಾಯಿಸಿದರು. ಕಳೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ಘಟನೆಗಳ ಬಗ್ಗೆ ಆತ್ಮಾವಲೋಕನ ಮಾಡುವಲ್ಲಿ ಸಂಬಂಧಪಟ್ಟವರೆಲ್ಲ ವಿಫಲರಾಗಿದ್ದಾರೆ ಎಂದು ನಾಯ್ಡು ವಿಷಾದಿಸಿದರು.  ಕೃಷಿ ಕಾನೂನು ರದ್ದತಿ ಮಸೂದೆ  ಅಂಗೀಕಾರವಾದ ನಂತರ ರಾಜ್ಯಸಭೆಯನ್ನು ಅರ್ಧ ಗಂಟೆ ಮುಂದೂಡಲಾಗಿದೆ.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದನ್ನು ನಾವು ಸ್ವಾಗತಿಸುತ್ತೇವೆ. ಲಖೀಂಪುರ ಖೇರಿ ಘಟನೆ ಮತ್ತು ವಿದ್ಯುತ್ ಬಿಲ್ ಸೇರಿದಂತೆ ಆಂದೋಲನದ ಸಂದರ್ಭದಲ್ಲಿ ನಡೆದ ಹಲವಾರು ಘಟನೆಗಳ ಬಗ್ಗೆ ನಾವು ಚರ್ಚೆಗೆ ಒತ್ತಾಯಿಸಿದ್ದೇವೆ. ರೈತರು ಇನ್ನೂ ಪ್ರತಿಭಟನಾ ಸ್ಥಳದಲ್ಲಿದ್ದಾರೆ.  ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ರ ಮೇಲೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸುವುದರೊಂದಿಗೆ, ಅವರು (ಸರ್ಕಾರ) ಅವರು ರೈತರ ಪರವಾಗಿದ್ದಾರೆ ಎಂದು ಸಾಬೀತುಪಡಿಸಲು ಬಯಸುತ್ತಾರೆ  ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

3 ಕೃಷಿ ವಿರೋಧಿ ಕಾನೂನುಗಳನ್ನು ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ ಮತ್ತು ಚರ್ಚೆಯಿಲ್ಲದೆ ರದ್ದುಪಡಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ.

ಲೋಕಸಭೆ ಕಲಾಪವನ್ನು ಮಂಗಳವಾರ ಬೆಳಗ್ಗೆ 11ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ

Published On - 2:18 pm, Mon, 29 November 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ