New Criminal Laws: ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

Winter Session Of Parliament: ದೇಶದಲ್ಲಿ ನ್ಯಾಯ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿದೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ವಿಧೇಯಕಗಳ ಹೊಸ ಆವೃತ್ತಿಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

New Criminal Laws: ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ
ಅಮಿತ್ ಶಾ
Follow us
ನಯನಾ ರಾಜೀವ್
|

Updated on:Dec 12, 2023 | 12:19 PM

ದೇಶದಲ್ಲಿ ನ್ಯಾಯ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿದೆ. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ವಿಧೇಯಕಗಳನ್ನು ಹೊಸದಾಗಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ(Amit Shah) ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಮಂಡಿಸಿದ ಮೂರು ಕ್ರಿಮಿನಲ್‌ ತಿದ್ದುಪಡಿ ವಿಧೇಯಕಗಳಿಗೆ ಸಂಪುಟ ಅನುಮೋದನೆ ನೀಡಿತ್ತು. ಆಗಸ್ಟ್ ತಿಂಗಳಲ್ಲಿ ನಡೆದ ಮುಂಗಾರು ಅಧಿವೇಶನದ ವೇಳೆ ಮೂರು ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು, ಹೀಗಾಗಿ ಅವುಗಳನ್ನು ವಾಪಸ್ ಪಡೆದಿದ್ದ ಕೇಂದ್ರ ಸರ್ಕಾರ, ಸಂಸತ್‌ ಕಲಾಪದಲ್ಲಿ ಹೊಸದಾಗಿ ಮೂರು ವಿಧೇಯಕ ಮಂಡಿಸಲು ಸಿದ್ಧತೆ ನಡೆಸಿದೆ.

ಲೋಕಸಭೆಯಲ್ಲಿ ವಿಧೇಯಕಗಳನ್ನು ಮಂಡಿಸುವ ಸಂದರ್ಭದಲ್ಲಿ ಅಮಿತ್ ಶಾ ಅವರು, ಈ ಮಸೂದೆಗಳ ಉದ್ದೇಶವು ನ್ಯಾಯ ಒದಗಿಸುವುದು, ಶಿಕ್ಷೆಯಲ್ಲ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕಾನೂನುಗಳನ್ನು ನೋಡುವುದಾದರೆ ಬ್ರಿಟಿಷ್ ಆಡಳಿತವನ್ನು ರಕ್ಷಿಸುವುದು ಮತ್ತು ಬಲಪಡಿಸುವುದು, ಶಿಕ್ಷೆ ವಿಧಿಸುವುದು ಮತ್ತು ನ್ಯಾಯವನ್ನು ನೀಡುವುದು ಇದ್ಯಾವುದೂ ಅಲ್ಲ.

ಮತ್ತಷ್ಟು ಓದಿ:Belagavi session: ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ಮಸೂದೆ ಮಂಡಿಸಿದ ಸರ್ಕಾರ

ಅವುಗಳನ್ನು ಬದಲಿಸುವ ಮೂಲಕ, ಮೂರು ಹೊಸ ಕಾನೂನುಗಳು ಭಾರತೀಯ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮನೋಭಾವವನ್ನು ತರುತ್ತವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಎಲ್ಲಾ ಮೂರು ಕ್ರಿಮಿನಲ್ ಕಾನೂನು ತಿದ್ದುಪಡಿ ವಿಧೇಯಕವನ್ನು ಹೊಸದಾಗಿ ಪರಿಚಯಿಸುವುದಾಗಿ ಸರ್ಕಾರ ಹೇಳಿದೆ. ಮುಂಗಾರು ಅಧಿವೇಶನದಲ್ಲಿ ಸರ್ಕಾರವು ಎಲ್ಲಾ ಮೂರು ವಿಧೇಯಕಗಳನ್ನು ಸದನದಲ್ಲಿ ಮಂಡಿಸಿತ್ತು. ಇಂದು ಮತ್ತೆ ಸದನದಲ್ಲಿ ಮಂಡಿಸುವ ನಿರೀಕ್ಷೆ ಇದೆ.

ಹಳೆಯ ಬಿಲ್‌ಗಳ ಹೆಸರುಗಳು ಇಂತಿವೆ ಕ್ರಿಮಿನಲ್ ಪ್ರೊಸೀಜರ್ ಕೋಡ್- 1898 ಭಾರತೀಯ ದಂಡ ಸಂಹಿತೆ- 1860 ಇಂಡಿಯನ್ ಎವಿಡೆನ್ಸ್ ಆಕ್ಟ್- 1872

ಹೊಸ ಬಿಲ್‌ಗಳ ಹೆಸರುಗಳು ಇಂತಿವೆ ಭಾರತೀಯ ನ್ಯಾಯ ಸಂಹಿತೆ ಮಸೂದೆ ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಭಾರತೀಯ ಸಾಕ್ಷ್ಯ ಮಸೂದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:28 am, Tue, 12 December 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ