AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Winter Session: ಡಿಸೆಂಬರ್ 4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ಚಳಿಗಾಲದ ಸಂಸತ್ ಅಧಿವೇಶನ ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

Parliament Winter Session: ಡಿಸೆಂಬರ್ 4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ
ಅಧಿವೇಶನ
ನಯನಾ ರಾಜೀವ್
|

Updated on:Nov 27, 2023 | 11:20 AM

Share

ಚಳಿಗಾಲದ ಸಂಸತ್ ಅಧಿವೇಶನ( Winter Session Of Parliament) ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದ್ದರೂ, ಡಿಸೆಂಬರ್ 3 ರಂದು ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮುಂದೂಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಮುಖ ಪ್ರಭಾವ ಬೀರುತ್ತವೆ.

ಡಿ.4ರಿಂದ 22ರವರೆಗೆ ನಡೆಯುವ ಚಳಿಗಾಲದ ಅಧಿವೇಶನದಲ್ಲಿ 15 ಸಭೆಗಳು ನಡೆಯಲಿವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಅಮೃತ ಕಾಲದ ಮಧ್ಯೆ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಚರ್ಚೆಯನ್ನು ನಿರೀಕ್ಷಿಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ವಿಧೇಯಕ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಈ ಮಸೂದೆಯ ಪ್ರಕಾರ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ಸ್ಥಾನಮಾನವನ್ನು ಕ್ಯಾಬಿನೆಟ್ ಕಾರ್ಯದರ್ಶಿಯ ಸ್ಥಾನಮಾನಕ್ಕೆ ಸಮಾನವಾಗಿಸಲು ಅವಕಾಶವಿದೆ. ಪ್ರಸ್ತುತ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಾನ ಸ್ಥಾನಮಾನವನ್ನು ಪಡೆಯುತ್ತಾರೆ. ಈ ಮಸೂದೆಯನ್ನು ವಿರೋಧಿಸಿ, ಸರ್ಕಾರವು ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಯಸುತ್ತಿದೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಈ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕುತ್ತಿದೆ.

ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ, ಆದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ತಡವಾಗಿದೆ. ಡಿಸೆಂಬರ್ 3 ರಂದು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಫಲಿತಾಂಶದ ಬಳಿಕ ಅಧಿವೇಶನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:10 am, Mon, 27 November 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ