Parliament Winter Session: ನವೆಂಬರ್ 25ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭ
ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಂದು ಆರಂಭಗೊಂಡು ಡಿಸೆಂಬರ್ 20ರಂದು ಕೊನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ನವೆಂಬರ್ 26ರಂದು ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದಿದ್ದಾರೆ.
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 20ರಂದು ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಪ್ರಕಟಿಸಿದ್ದಾರೆ. ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನವೆಂಬರ್ 26ರಂದು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳ ನಂತರ ಪ್ರಾರಂಭವಾಗುವ ಅಧಿವೇಶನದಲ್ಲಿ ಸರ್ಕಾರವು ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಉಭಯ ಸದನಗಳು ಅಂಗೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ರಾಜತಾಂತ್ರಿಕರನ್ನು ಹೆದರಿಸುವ ಹೇಡಿತನದ ಪ್ರಯತ್ನ; ಕೆನಡಾದ ಹಿಂದೂ ದೇವಾಲಯದ ದಾಳಿಗೆ ಪಿಎಂ ಮೋದಿ ಖಂಡನೆ
ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ. ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೈಲೈಟ್ ಮಾಡಿದ್ದು, ಇದರಿಂದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯಲಿದೆ.
Hon’ble President, on the recommendation of Government of India, has approved the proposal for summoning of both the Houses of Parliament for the Winter Session, 2024 from 25th November to 20th December, 2024 (subject to exigencies of parliamentary business). On 26th November,… pic.twitter.com/dV69uyvle6
— Kiren Rijiju (@KirenRijiju) November 5, 2024
ನವೆಂಬರ್ 23ರಂದು ಪ್ರಕಟವಾಗಲಿರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶಗಳ ಬಗ್ಗೆಯೂ ಉಭಯ ಸದನಗಳಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ