ಸಂಸತ್ ಕೆಲಸವನ್ನು ರಾಜಕೀಯಗೊಳಿಸಬೇಡಿ: ಸೋನಿಯಾ ಗಾಂಧಿ ಪತ್ರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಎಲ್ಲಾ ಸ್ಥಾಪಿತ ಕಾರ್ಯವಿಧಾನಗಳನ್ನು ಅನುಸರಿಸಿ ಸೆಪ್ಟೆಂಬರ್ 18 ರಿಂದ ಸಂಸತ್ತಿನ ಅಧಿವೇಶನವನ್ನು ಕರೆಯಲಾಗಿದೆ. ರಾಜಕೀಯ ಪಕ್ಷಗಳನ್ನು ಎಂದಿಗೂ ಮುಂಚಿತವಾಗಿ ಸಮಾಲೋಚಿಸುವುದಿಲ್ಲ. ಪ್ರತಿಯೊಂದು ವಿಷಯದಲ್ಲೂ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ ನೀವು ಹೇಳಿದ ವಿಷಯಗಳ ಬಗ್ಗೆ ಈಗಾಗಲೇ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆ ಚರ್ಚೆಯಲ್ಲಿ ಚರ್ಚಿಸಿ ಆಗಿದೆ ಎಂದ ಪ್ರಲ್ಹಾದ್ ಜೋಶಿ

ಸಂಸತ್ ಕೆಲಸವನ್ನು ರಾಜಕೀಯಗೊಳಿಸಬೇಡಿ: ಸೋನಿಯಾ ಗಾಂಧಿ ಪತ್ರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಪ್ರಲ್ಹಾದ್ ಜೋಶಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 06, 2023 | 7:50 PM

ದೆಹಲಿ ಸೆಪ್ಟೆಂಬರ್ 06: ಸಂಸತ್​​ನ ವಿಶೇಷ ಅಧಿವೇಶನವನ್ನು(Parliament Session) ಕರೆಯುವ ಮೊದಲು ಸರ್ಕಾರವು  ಇತರ ಪಕ್ಷಗಳ ಜತೆ ಸಮಾಲೋಚನೆ ನಡೆಸಿಲ್ಲ ಎಂಬ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ (Sonia Gandhi) ಆರೋಪಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದಾರೆ.ವಿಶೇಷ ಸಂಸತ್ ಅಧಿವೇಶನಕ್ಕೆ ಯಾವುದೇ ಕಾರ್ಯಸೂಚಿಯನ್ನು ನೀಡಿಲ್ಲ ಎಂದು ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ನಂತರ ಪ್ರಲ್ಹಾಜ್ ಜೋಶಿಯವರ ಈ ಪ್ರತಿಕ್ರಿಯೆ ಬಂದಿದೆ. ನಮ್ಮ ಸಂಸತ್​​ನ ಕೆಲಸವನ್ನು ನೀವು ರಾಜಕೀಯಗೊಳಿಸುತ್ತಿರುವುದು, ಯಾವುದೇ ವಿವಾದವಿಲ್ಲದಿರುವಾಗ, ನೀವು ಅನಗತ್ಯವಾಗಿ ಅದನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಜೋಶಿ ಹೇಳಿದ್ದಾರೆ.

ನಿಗದಿತ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಅಧಿವೇಶನವನ್ನು ಕರೆಯಲಾಗಿದೆ ಬಹುಶಃ ನೀವು ಸಂಪ್ರದಾಯಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಅಧಿವೇಶನವನ್ನು ಕರೆಯುವ ಮೊದಲು, ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆಗಳನ್ನು ಎಂದಿಗೂ ಮಾಡಲಾಗುವುದಿಲ್ಲ ಮತ್ತು ನಾವು ಸಮಸ್ಯೆಗಳನ್ನು ಚರ್ಚಿಸುವುದಿಲ್ಲ. ಅಧ್ಯಕ್ಷರು ಹೊಸ ಅಧಿವೇಶನದ ದಿನಾಂಕವನ್ನು ಘೋಷಿಸಿದ ನಂತರ ನಾವು ಎಲ್ಲಾ ಪಕ್ಷಗಳ ನಾಯಕರನ್ನು ಸಭೆಗೆ ಕರೆಯುತ್ತೇವೆ. ಇದರಲ್ಲಿ ನಾವು ಸಮಸ್ಯೆಗಳು ಮತ್ತು ವ್ಯವಹಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದಿದ್ದಾರೆ.

ಎಲ್ಲಾ ಸ್ಥಾಪಿತ ಕಾರ್ಯವಿಧಾನಗಳನ್ನು ಅನುಸರಿಸಿ ಸೆಪ್ಟೆಂಬರ್ 18 ರಿಂದ ಸಂಸತ್ತಿನ ಅಧಿವೇಶನವನ್ನು ಕರೆಯಲಾಗಿದೆ. ರಾಜಕೀಯ ಪಕ್ಷಗಳನ್ನು ಎಂದಿಗೂ ಮುಂಚಿತವಾಗಿ ಸಮಾಲೋಚಿಸುವುದಿಲ್ಲ. ಪ್ರತಿಯೊಂದು ವಿಷಯದಲ್ಲೂ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ ನೀವು ಹೇಳಿದ ವಿಷಯಗಳ ಬಗ್ಗೆ ಈಗಾಗಲೇ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆ ಚರ್ಚೆಯಲ್ಲಿ ಚರ್ಚಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಸ್ಥಾಪಿತ ಅಭ್ಯಾಸದ ಪ್ರಕಾರ ಅಜೆಂಡಾವನ್ನು ಸರಿಯಾದ ಸಮಯದಲ್ಲಿ ಘೋಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶ ಸೆಪ್ಟೆಂಬರ್ 18 ರಿಂದ ಸೆಪ್ಟೆಂಬರ್ 22 ರವರೆಗೆ ನಡೆಯಲಿದೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲೇನಿದೆ?

ಮಣಿಪುರದಲ್ಲಿನ ಪರಿಸ್ಥಿತಿ, ದೇಶದ ಒಕ್ಕೂಟ ರಚನೆಯ ಮೇಲೆ ಆಪಾದಿತ ದಾಳಿ, ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪಗಳು, ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ, ದೇಶದ ವಿವಿಧ ಭಾಗಗಳಲ್ಲಿ ಕೋಮು ಉದ್ವಿಗ್ನತೆಯ ಘಟನೆಗಳ ಬಗ್ಗೆ ಚರ್ಚೆ ನಡೆಸಬೇಕೆಂದು ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತಾವು ಪ್ರಸ್ತಾಪಿಸಲು ಬಯಸುವ ವಿಷಯಗಳ ಬಗ್ಗೆ ಚರ್ಚೆ ನಡೆಸಿದ ನಂತರ ಸೋನಿಯಾ ಗಾಂಧಿ ಇಂದು ಬೆಳಿಗ್ಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಆಗಸ್ಟ್ 31 ರಂದು ಘೋಷಿಸಲಾದ ಅಧಿವೇಶನದ ಸರ್ಕಾರದ ಕಾರ್ಯಸೂಚಿಯಲ್ಲಿ ಪಾರದರ್ಶಕತೆಯ ಕೊರತೆಯನ್ನು ಕೂಡಾ ಸೋನಿಯಾ ಗಾಂಧಿ ಎತ್ತಿ ತೋರಿಸಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಯಾವುದೇ ಸಮಾಲೋಚನೆಯಿಲ್ಲದೆ ಈ ಅಧಿವೇಶನವನ್ನು ಕರೆಯಲಾಗಿದೆ. ವಿಶೇಷ ಅಧಿವೇಶನ ಕರೆದಾಗಲೆಲ್ಲಾ ಸರ್ಕಾರವು ಅಧಿವೇಶನದ ಕಾರ್ಯಸೂಚಿಯಲ್ಲಿ ವಿಶಾಲವಾದ ಒಮ್ಮತವನ್ನು ಮಾಡಲು ಪ್ರಯತ್ನಿಸುತ್ತದೆ. ಆದರೆ ಅಜೆಂಡಾ ಹಂಚಿಕೊಳ್ಳದೇ ಇರುವುದು ಇದೇ ಮೊದಲು. ಸದನದ ಬುಲೆಟಿನ್‌ನಲ್ಲಿ ವಿಶೇಷ ಅಧಿವೇಶನದ ಎಲ್ಲಾ ಐದು ದಿನಗಳಲ್ಲಿ ಸರ್ಕಾರಿ ವ್ಯವಹಾರ ಇರುತ್ತದೆ ಎಂದು ಅವರು ಬರೆದಿದ್ದಾರೆ. ಕಳೆದ ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಾಧ್ಯವಾಗದ ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಪರಿಸ್ಥಿತಿ ಸೇರಿದಂತೆ 9 ವಿಷಯಗಳನ್ನು ಪ್ರಸ್ತಾಪಿಸಿ ಪ್ರಧಾನಿಗೆ ಪತ್ರ ಬರೆದ ಸೋನಿಯಾ ಗಾಂಧಿ

ಯಾವುದೇ ನಿಯಮದ ಅಡಿಯಲ್ಲಿ ಈ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ಚೀನಾ ವಿಷಯದ ಬಗ್ಗೆ ಸದನದಲ್ಲಿ ನಿರ್ಣಯವನ್ನು ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಹೇಳಿದೆ. ಸೋನಿಯಾ ಅವರು ಈ ಅಧಿವೇಶನಕ್ಕಾಗಿ ಒಂಬತ್ತು ಪ್ರಮುಖ ವಿಷಯಗಳನ್ನು ಹೈಲೈಟ್ ಮಾಡಿದ್ದಾರೆ. ಮೊದಲ ಸಮಸ್ಯೆ ಬೆಲೆ ಏರಿಕೆ, ನಿರುದ್ಯೋಗ ಮತ್ತು MSME (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ವಲಯದ ಸಮಸ್ಯೆಗಳು ಸೇರಿದಂತೆ ಪ್ರಸ್ತುತ ಆರ್ಥಿಕ ಪರಿಸ್ಥಿತಿ. ಎರಡನೇ ವಿಚಾರ ರೈತರಿಗೆ ಸಂಬಂಧಿಸಿದ್ದು. ರೈತ ಸಂಘಟನೆಗಳ ಜತೆ ಸರ್ಕಾರ ಹಲವು ಸುತ್ತಿನ ಚರ್ಚೆ ನಡೆಸಿದ್ದು, ಸರ್ಕಾರ ಕೆಲವು ಭರವಸೆಗಳನ್ನು ನೀಡಿತ್ತು. ಆ ಭರವಸೆಗಳ ಪ್ರಸ್ತುತ ಸ್ಥಿತಿ ಏನು ಮತ್ತು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಖಾತರಿ ಕಾನೂನಿನ ಬಗ್ಗೆ ಸರ್ಕಾರದ ನಿಲುವು ಏನು ಎಂದು ಜೈರಾಮ್ ರಮೇಶ್ ಕೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್