Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ.

Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಜುಲೈ 3ರಂದು ಸಂಸದೀಯ ಸ್ಥಾಯಿ ಸಮಿತಿ ಸಭೆ, 31 ಸಂಸದರ ಅಭಿಪ್ರಾಯ ಸಂಗ್ರಹ
ಸಂಸತ್
Image Credit source: NDTV

Updated on: Jun 30, 2023 | 11:16 AM

ಏಕರೂಪ ನಾಗರಿಕ ಸಂಹಿತೆ (Uniform Civil Code)ಕುರಿತು ಸಂಸದರ ಅಭಿಪ್ರಾಯ ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ(Parliamentary Standing Committee) ಸಭೆ ಕರೆಯಲಾಗಿದೆ. ಜುಲೈ 3 ರಂದು ಸಭೆ ನಡೆಯಲಿದೆ. ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಮೋದಿ ನೇತೃತ್ವದ ಸಮಿತಿಯು 31 ಸದಸ್ಯ ಸಂಸದರಿಗೆ ಮಾಹಿತಿ ನೀಡಿದೆ. ಯುಸಿಸಿ ಕುರಿತು ಅವರ ಅಭಿಪ್ರಾಯಗಳನ್ನು ಸಭೆಯಲ್ಲಿ ಕೇಳಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜುಲೈನಲ್ಲಿ ನಡೆಯಲಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ(Uniform Civil Code) ಯನ್ನು ಜಾರಿಗೊಳಿಸುವ ಮಸೂದೆಯನ್ನು ಸರ್ಕಾರ ಮಂಡಿಸಬಹುದು ಎಂದು ಹೇಳಲಾಗುತ್ತಿದೆ. ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಸಂಬಂಧಿಸಿದಂತೆ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಕೇಳಿತ್ತು, ಇದಕ್ಕಾಗಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದ್ದು ಅದು ಜುಲೈ 14ಕ್ಕೆ ಕೊನೆಗೊಳ್ಳಲಿದೆ.

ಮತ್ತಷ್ಟು ಓದಿ: Uniform Civil Code: ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ಸಂಸತ್ ಮುಂಗಾರು ಅಧಿವೇಶನವು ಜುಲೈ ಕೊನೆಯ ವಾರದಲ್ಲಿ ಆರಂಭವಾಗಿ ಆಗಸ್ಟ್ 10ಕ್ಕೆ ಕೊನೆಗೊಳ್ಳಬಹುದು ಎಂದು ಅಂದಾಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಜುಲೈ 17 ಅಥವಾ 20ರಿಂದ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ.

ಬಿಜೆಪಿ ಈ ವಿಚಾರದಲ್ಲಿ ಹಿಂದೆ ಸರಿಯುವಂತೆ ಕಾಣುತ್ತಿಲ್ಲ, ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us