Parliament Special Session: ಸೆಪ್ಟೆಂಬರ್ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ
ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.

ನೂತನ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಮೂಲಗಳ ಪ್ರಕಾರ ಈ ಅಧಿವೇಶನದಲ್ಲಿ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ. ಅಮೃತ ಕಾಲದ ವೇಳೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಾಗಿ ಕಾಯುತ್ತಿದ್ದೇನೆ ಎಂದು ಪ್ರಲ್ಹಾದ್ ಜೋಶಿ ಬರೆದಿದ್ದಾರೆ.
ಪ್ರಲ್ಹಾದ್ ಜೋಶಿ ಟ್ವೀಟ್
Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament. pic.twitter.com/b3PIRngpOs
— Pralhad Joshi (@JoshiPralhad) August 31, 2023
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಿತು. ಈ ವೇಳೆ ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷವು ಸದನದಲ್ಲಿ ಕೋಲಾಹಲ ಸೃಷ್ಟಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:04 pm, Thu, 31 August 23