Parliament Special Session: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ

|

Updated on: Aug 31, 2023 | 3:13 PM

ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.

Parliament Special Session: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ
ಸಂಸತ್
Follow us on

ಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.

ನೂತನ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಮೂಲಗಳ ಪ್ರಕಾರ ಈ ಅಧಿವೇಶನದಲ್ಲಿ 10ಕ್ಕೂ ಹೆಚ್ಚು ಮಹತ್ವದ ಮಸೂದೆಗಳನ್ನು ಮಂಡಿಸಲಾಗುವುದು. ಮಸೂದೆಯಿಂದಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ. ಅಮೃತ ಕಾಲದ ವೇಳೆ ಸಂಸತ್ತಿನಲ್ಲಿ ಅರ್ಥಪೂರ್ಣ ಚರ್ಚೆಗಾಗಿ ಕಾಯುತ್ತಿದ್ದೇನೆ ಎಂದು ಪ್ರಲ್ಹಾದ್ ಜೋಶಿ ಬರೆದಿದ್ದಾರೆ.

ಪ್ರಲ್ಹಾದ್ ಜೋಶಿ ಟ್ವೀಟ್​

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಿತು. ಈ ವೇಳೆ ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಯಿತು. ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷವು ಸದನದಲ್ಲಿ ಕೋಲಾಹಲ ಸೃಷ್ಟಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Thu, 31 August 23