AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Winter Session: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ.

Parliament Winter Session: ಡಿಸೆಂಬರ್ 1ರಿಂದ 19ರವರೆಗೆ ಸಂಸತ್  ಚಳಿಗಾಲದ ಅಧಿವೇಶನ
ಸಂಸತ್Image Credit source: Mint
ನಯನಾ ರಾಜೀವ್
|

Updated on: Nov 08, 2025 | 1:30 PM

Share

ನವದೆಹಲಿ, ನವೆಂಬರ್ 08: ಸಂಸತ್ ಚಳಿಗಾಲದ ಅಧಿವೇಶನ(Parliament Winter Session:) ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ.

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಂಸತ್ತಿನ ಚಳಿಗಾಲದ ಅಧಿವೇಶನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಭಾರತದ ಚುನಾವಣಾ ಆಯೋಗ (ECI) ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಪ್ರಾರಂಭಿಸಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಷಯದಲ್ಲಿ ವಿರೋಧ ಪಕ್ಷಗಳು ಸರ್ಕಾರವನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ