
ನವದೆಹಲಿ, ನವೆಂಬರ್ 08: ಸಂಸತ್ ಚಳಿಗಾಲದ ಅಧಿವೇಶನ(Parliament Winter Session:) ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
The Hon’ble President of India Smt. Droupadi Murmu ji has approved the proposal of the Government to convene the #WinterSession of #Parliament from 1st December 2025 to 19th December, 2025 (subject to exigencies of Parliamentary business).
Looking forward to a constructive &… pic.twitter.com/QtGZn3elvT
— Kiren Rijiju (@KirenRijiju) November 8, 2025
ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಂಸತ್ತಿನ ಚಳಿಗಾಲದ ಅಧಿವೇಶನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಭಾರತದ ಚುನಾವಣಾ ಆಯೋಗ (ECI) ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಪ್ರಾರಂಭಿಸಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಷಯದಲ್ಲಿ ವಿರೋಧ ಪಕ್ಷಗಳು ಸರ್ಕಾರವನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಹೇಳಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ