ಗೋಲ್ಡನ್​ ಟೆಂಪಲ್​ನಲ್ಲಿ ತನ್ನ ಪ್ರಾಣ ಉಳಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಸುಖ್​ಬೀರ್​

ಗೋಲ್ಡನ್​ ಟೆಂಪಲ್​ನಲ್ಲಿ ತನ್ನ ಪ್ರಾಣ ಉಳಿಸಿದ ಪೊಲೀಸರಿಗೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್​ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಧನ್ಯವಾದ ತಿಳಿಸಿದ್ದಾರೆ. ಡಿಸೆಂಬರ್ 4ರಂದು ಗೋಲ್ಡನ್​ ಟೆಂಪಲ್ ಆವರಣದಲ್ಲಿ ಸುಖ್​ಬೀರ್​ ಮೇಲೆ ಖಲಿಸ್ತಾನಿ ಬೆಂಬಲಿಗನೊಬ್ಬ ಗುಂಡು ಹಾರಿಸಿದ್ದ, ಆ ಸಂದರ್ಭದಲ್ಲಿ ಪೊಲೀಸರು ಆರೋಪಿಯನ್ನು ತಡೆದಿದ್ದರು, ಸುಖ್​ಬೀರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೋಲ್ಡನ್​ ಟೆಂಪಲ್​ನಲ್ಲಿ ತನ್ನ ಪ್ರಾಣ ಉಳಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಸುಖ್​ಬೀರ್​
ಸುಖ್​ಬೀರ್​
Edited By:

Updated on: Dec 06, 2024 | 10:24 AM

ಗೋಲ್ಡನ್​ ಟೆಂಪಲ್​ನಲ್ಲಿ ತನ್ನ ಪ್ರಾಣ ಉಳಿಸಿದ ಪೊಲೀಸರಿಗೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್​ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಧನ್ಯವಾದ ತಿಳಿಸಿದ್ದಾರೆ. ಡಿಸೆಂಬರ್ 4ರಂದು ಗೋಲ್ಡನ್​ ಟೆಂಪಲ್ ಆವರಣದಲ್ಲಿ ಸುಖ್​ಬೀರ್​ ಮೇಲೆ ಖಲಿಸ್ತಾನಿ ಬೆಂಬಲಿಗನೊಬ್ಬ ಗುಂಡು ಹಾರಿಸಿದ್ದ, ಆ ಸಂದರ್ಭದಲ್ಲಿ ಪೊಲೀಸರು ಆರೋಪಿಯನ್ನು ತಡೆದಿದ್ದರು, ಸುಖ್​ಬೀರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆರೋಪಿಯು ನಿಧಾನವಾಗಿ ಸುಖಬೀರ್ ಸಿಂಗ್ ಬಾದಲ್ ಕಡೆಗೆ ತೆರಳಿ ಆತನ ಜೇಬಿನಿಂದ ಆಯುಧವನ್ನು ಹೊರತೆಗೆದಿದ್ದ. ಭದ್ರತಾ ಸಿಬ್ಬಂದಿ ಕೂಡಲೇ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾದಲ್ ಹತ್ಯೆಗೆ ಯತ್ನಿಸಿದ ಮಾಜಿ ಉಗ್ರಗಾಮಿ ನರೇನ್ ಸಿಂಗ್ ಚೌರಾ ಅವರನ್ನು ಗುರುವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಸ್ಥಳದಲ್ಲಿದ್ದ ಜನರು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಬಂಧಿಸಿದ್ದಾರೆ. ಧಾರ್ಮಿಕ ಶಿಕ್ಷೆಯ ಭಾಗವಾಗಿ ಸೇವೆ ಸಲ್ಲಿಸುತ್ತಿದ್ದಾಗ ಬಾದಲ್ ಮೇಲೆ ದಾಳಿ ನಡೆಸಲಾಯಿತು. ಮಾಹಿತಿ ಪ್ರಕಾರ ದಾಳಿಯಿಂದ ಬಾದಲ್ ಸ್ವಲ್ಪದರಲ್ಲೇ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ. ಏತನ್ಮಧ್ಯೆ, ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು SAD ಆರೋಪಿಸಿದೆ.

ಇದನ್ನೂ ಓದಿ: ಗೋಲ್ಡನ್​ ಟೆಂಪಲ್ ಬಳಿ ಪಂಜಾಬ್ ಮಾಜಿ ಡಿಸಿಎಂ ಸುಖ್​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ

ಇತ್ತೀಚೆಗಷ್ಟೇ, ಅಕಾಲಿ ದಳದ ನಾಯಕನಿಗೆ 2015 ರಲ್ಲಿ ಗುರು ಗ್ರಂಥ ಸಾಹಿಬ್‌ನ ತ್ಯಾಗದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರನ್ನು ಬೆಂಬಲಿಸಿದ್ದಕ್ಕಾಗಿ ಅಕಾಲ್ ತಖ್ತ್ ಶಿಕ್ಷೆಯನ್ನು ಘೋಷಿಸಿತು. ಅವರು ಪ್ರತಿದಿನ ಒಂದು ಗಂಟೆ ದೇವಸ್ಥಾನದಲ್ಲಿ ದ್ವಾರಪಾಲಕರಾಗಿ ಕೆಲಸ ಮಾಡಬೇಕಾಗುತ್ತದೆ. ಶೌಚಾಲಯ ತೊಳೆಯುವುದು, ಪಾತ್ರೆ ತೊಳೆಯುವುದು ಸೇರಿ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ ಅಕಾಲಿ ಸರ್ಕಾರದ ಅವಧಿಯಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ ಕ್ಷಮಾದಾನ ನೀಡುವಲ್ಲಿ ತಮ್ಮ ಪಾತ್ರವಿತ್ತು ಎಂದು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಸುಖ್​ಬೀರ್ ಬಾದಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಸಿಂಗ್ ಸಾಹಿಬಾನ್‌ಗಳ ಸಭೆಯು ಅಕಾಲ್ ತಖ್ತ್‌ನಲ್ಲಿ ನಡೆಯಿತು. ಎರಡು ತಿಂಗಳ ಹಿಂದೆ ಅಕಾಲ್ ತಖ್ತ್ ಅವರು ಸುಖಬೀರ್ ಸಿಂಗ್ ಬಾದಲ್ ಅವರನ್ನು ತಂಖೈಯಾ (ಧಾರ್ಮಿಕ ಅಪರಾಧಿ) ಎಂದು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Fri, 6 December 24