ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ
ಅವರು ರಾಹುಲ್ ಗಾಂಧಿಗೆ ನೋಟಿಸ್ ಕಳುಹಿಸಲಿ ನಾವು ಉತ್ತರಿಸುತ್ತೇವೆ. ಇದು ದೊಡ್ಡ ವಿಷಯವಲ್ಲ. ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ನೋಟಿಸ್ ಗೆ ಉತ್ತರ ಕೊಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿ ನವೆಂಬರ್ 23: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ರಾಹುಲ್ ಗಾಂಧಿ (Rahul Gandhi) ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ (Election Commission) ನೋಟಿಸ್‌ಗೆ ಕಾಂಗ್ರೆಸ್ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗುರುವಾರ ಹೇಳಿದ್ದಾರೆ. ಅವರು ರಾಹುಲ್ ಗಾಂಧಿಗೆ ನೋಟಿಸ್ ಕಳುಹಿಸಲಿ ನಾವು ಉತ್ತರಿಸುತ್ತೇವೆ. ಇದು ದೊಡ್ಡ ವಿಷಯವಲ್ಲ. ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ನೋಟಿಸ್ ಗೆ ಉತ್ತರ ಕೊಡುತ್ತೇವೆ. ಚುನಾವಣೆಯಲ್ಲಿ ಹೆದರಿಸಲು ಯತ್ನಿಸುತ್ತಿರುವ ರೀತಿ ಸರಿಯಿಲ್ಲ. ಪ್ರಜಾಪ್ರಭುತ್ವ ಉಳಿಸಬೇಕಾದರೆ ಸಮವಾದ ವೇದಿಕೆ ಇರಬೇಕು. ಬದಲಾಗಿ ಇಡಿ, ಸಿಬಿಐ ಇತ್ಯಾದಿಗಳನ್ನು ಬಳಸಲಾಗುತ್ತಿದೆ ಎಂದು ಖರ್ಗೆ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಗುರುವಾರ ಚುನಾವಣಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ರಾಹುಲ್ ಗಾಂಧಿಗೆ ಶೋಕಾಸ್ ನೋಟಿಸ್ ನೀಡಿದೆ.
ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ಪ್ರಧಾನಿಯನ್ನು ಕೆಣಕಿದ್ದರು. “ಜೇಬುಗಳ್ಳ ಒಬ್ಬಂಟಿಯಾಗಿ ಬರುವುದಿಲ್ಲ, ಮೂರು ಜನರಿದ್ದಾರೆ. ಎದುರಿನಿಂದ ಒಬ್ಬರು, ಹಿಂದಿನಿಂದ ಒಬ್ಬರು ಮತ್ತು ದೂರದಿಂದ ಒಬ್ಬರು. ನಿಮ್ಮ ಗಮನವನ್ನು ಬೇರೆಡೆ ಸೆಳೆಯುವುದೇ ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ಎಂದು ಹೇಳಿದ್ದರು.
ಅವರು ಮುಂಭಾಗದಿಂದ ಟಿವಿಯಲ್ಲಿ ಬರುತ್ತಾರೆ. ಹಿಂದೂ-ಮುಸ್ಲಿಂ, ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿಷಯಗಳನ್ನು ಎತ್ತುವ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುತ್ತಾರೆ. ಅಷ್ಟರಲ್ಲಿ ಅದಾನಿ ಹಿಂದಿನಿಂದ ಬಂದು ಹಣವನ್ನು ತೆಗೆದುಕೊಂಡು ಹೋಗುತ್ತಾರೆ ಎಂದಿದ್ದರು ರಾಹುಲ್ ಗಾಂಧಿ.
ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಟೀಕೆ; ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಆ ಆರೋಪದ ಬಗ್ಗೆ ನಿಮ್ಮ ವಿವರಣೆಯನ್ನು ನೀಡಲು ಮತ್ತು ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ದಂಡದ ನಿಬಂಧನೆಗಳ ಉಲ್ಲಂಘನೆಗಾಗಿ ಸೂಕ್ತವೆಂದು ಪರಿಗಣಿಸಲಾದ ಕ್ರಮವನ್ನು ಆಯೋಗವು ಏಕೆ ಪ್ರಾರಂಭಿಸುವುದಿಲ್ಲ ಎಂಬುದಕ್ಕೆ ಕಾರಣಗಳನ್ನು ತೋರಿಸಲು ನಿಮ್ಮನ್ನು ವಿನಂತಿಸಲಾಗಿದೆ, ಎಂದು ಚುನಾವಣಾ ಸಮಿತಿಯು ತಿಳಿಸಿದೆ. ನವೆಂಬರ್ 25 ರೊಳಗೆ ತಮ್ಮ ವಿವರಣೆಯನ್ನು ನೀಡುವಂತೆ ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ