Pashupati Paras Resigns: ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ

ಲೋಕಸಭಾ ಚುನಾವಣೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ ನೀಡಿದ್ದಾರೆ.

Pashupati Paras Resigns: ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ
ಪಶುಪತಿ ಪರಾಸ್
Follow us
ನಯನಾ ರಾಜೀವ್
|

Updated on:Mar 19, 2024 | 12:03 PM

ಲೋಕಸಭಾ ಚುನಾವಣೆ(Lok Sabha Election) ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ ನೀಡಿದ್ದಾರೆ.  ಬಿಜೆಪಿಯು ಹಲವು ರಾಜ್ಯಗಳಲ್ಲಿ ಅಲ್ಲಿನ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಹಾಗೆಯೇ ಕಳೆದ ಚುನಾವಣೆಯಲ್ಲಿ ಆರ್​ಎಲ್​ಜೆಪಿ ಪಕ್ಷದ ಜತೆಗೂ ಮೈತ್ರಿ ಮಾಡಿಕೊಂಡಿತ್ತು, ಆಗ ಪಶುಪತಿ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಲಾಗಿತ್ತು. ಆದರೆ ಈ ಬಾರಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾರಣ ಪಶುಪತಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಯು 16 ಸ್ಥಾನಗಳಲ್ಲಿ ಹಾಗೂ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು 5 ಕ್ಷೇತ್ರಗಳಲ್ಲಿ, ಜಿತನ್ ಮಾಂಝಿ ಅವರ ಎಚ್​ಎಎಂ 1 ಸ್ಥಾನ ಹಾಗೂ ಉಪೇಂದ್ರ ಕುಶ್ವಾಹಾ ಅವರ ರಾಷ್ಟ್ರೀಯ ಲೋಕ ಜನತಾ ದಳ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎನ್ನುವ ವಿಚಾರ ತಿಳಿದುಬಂದಿದೆ.

ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಮ್ಮ ಪಕ್ಷಕ್ಕೆ ಸರಿಯಾದ ಆದ್ಯತೆ ನೀಡದಿದ್ದಕ್ಕಾಗಿ ಬಿಜೆಪಿ ನಾಯಕತ್ವದ ವಿರುದ್ಧ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್‌ಜೆಪಿ) ಮುಖ್ಯಸ್ಥ ಅಸಮಾಧಾನಗೊಂಡಿದ್ದಾರೆ ಮತ್ತು ಬಿಜೆಪಿ ಹೈಕಮಾಂಡ್ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು.

ಬಿಜೆಪಿಯಿಂದ ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆಯಾಗುವವರೆಗೆ ಕಾದು ನಂತರ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಸೀಟು ಹಂಚಿಕೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಎಲ್​ಜೆಪಿ(ರಾಮ್​ ವಿಲಾಸ್) 5 ಲೋಕಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುವ ಅವಕಾಶ ಪಡೆದಿದ್ದಕ್ಕಾಗಿ ಪಶುಪತಿ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ಘೋಷಣೆಗೂ ಮುನ್ನ ನಮ್ಮ ಜತೆ ಮಾತನಾಡಿಲ್ಲ ಎಂದು ಪಶುಪತಿ ಪರಾಸ್ ಹೇಳಿದ್ದಾರೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ: ಪಶುಪತಿ ಪರಾಸ್ ಬಿಟ್ಟು, ಚಿರಾಗ್​ ಪಾಸ್ವಾನ್​ ಆಯ್ಕೆ ಮಾಡಿದ ಬಿಜೆಪಿ

ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋದರ ಪಶುಪತಿ ಪಾರಸ್ ಅವರು ಹಾಜಿಪುರದ ಹಾಲಿ ಸಂಸದರಾಗಿದ್ದಾರೆ. ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 6 ಪರ್ಸೆಂಟ್ ಪಾಸ್ವಾನ್ ಮತಗಳು ಚಿರಾಗ್ ಪಾಸ್ವಾನ್‌ಗೆ ಒಲಿದಿದೆ ಎಂದು ಸ್ಪಷ್ಟಪಡಿಸಿದೆ.

ಬಿಹಾರ ಚುನಾವಣೆ ಬಿಹಾರದಲ್ಲಿ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 20, ಮೇ 25 ಹಾಗೂ ಜೂನ್​ 1 ರಂದು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಮತ ಎಣಿಕೆ ದಿನಾಂಕಗಳನ್ನು ಬದಲಾಯಿಸಿದೆ, ಅಲ್ಲಿ ಜೂನ್ 2 ರಂದು ಎಣಿಕೆ ನಡೆಯಲಿದೆ.

ಲೋಕಸಭೆ ಚುನಾವಣೆ 2024 ರ ಏಳು ಹಂತಗಳ ವಿವರವಾದ ದಿನಾಂಕಗಳು ಹಂತ 1- ಏಪ್ರಿಲ್ 19, 2024 ಹಂತ 2- 26 ಏಪ್ರಿಲ್ 2024 ಹಂತ 3-7 ಮೇ 2024 ಹಂತ 4 – 13 ಮೇ 2024 ಹಂತ 5 – 20 ಮೇ 2024 ಹಂತ 6 – 25 ಮೇ 2024 ಹಂತ 7 – 1 ಜೂನ್ 2024 ಜೂನ್ 4 ರಂದು ಎಣಿಕೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:49 am, Tue, 19 March 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ