Indigo Flight: ಇಂಡಿಗೋ ವಿಮಾನ ಪ್ರಯಾಣಿಕ ಅಸ್ವಸ್ಥ: ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ವಿಮಾನ ಜೋಧ್ಪುರದಲ್ಲಿ ತುರ್ತು ಭೂಸ್ಪರ್ಶ
ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮಂಗಳವಾರ ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಜೋಧ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.
ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮಂಗಳವಾರ ಜೆಡ್ಡಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಜೋಧ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನನ್ನು ಜೋಧ್‌ಪುರದ ಗೋಯಲ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಕಸ್ಟಮ್ಸ್ ಅಧಿಕಾರಿಗಳು ಈಗ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಕೆಲ ದಿನಗಳ ಹಿಂದೆ ಮಧುರೈ-ದೆಹಲಿ ಇಂಡಿಗೋ ವಿಮಾನದಲ್ಲಿ 60 ವರ್ಷದ ಪ್ರಯಾಣಿಕರೊಬ್ಬರಿಗೆ ರಕ್ತಸ್ರಾವವನ್ನು ಶುರುವಾಗಿದ್ದ ಕಾರಣ, ಕೆಲವೇ ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು, ಆದರೆ, ಸ್ಥಳೀಯ ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಯಾಣಿಕರು ನೋಯ್ಡಾ ನಿವಾಸಿ ಎಂಬುದು ತಿಳಿದುಬಂದಿತ್ತು.
ಮತ್ತಷ್ಟು ಓದಿ: Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ
ಕಳೆದ ನಾಲ್ಕು ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿತ್ತು, ಅಬುದಾಬಿಯಿಂದ ಕ್ಯಾಲಿಕಟ್‍ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿದೆ. ಯಾವುದೇ ಅಪಾಯ ಪ್ರಕರಣಗಳು ಜರುಗಿಲ್ಲದ ಕಾರಣ ಆತಂಕ ದೂರವಾಗಿತ್ತು.
ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಬುದಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಹೇಳಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ