AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಸತ್ಯವಾಡದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಪ್ಯಾಸೆಂಜರ್ ರೈಲಿಗೆ ಬೆಂಕಿ

ಶಾರ್ಟ್​ ಸರ್ಕ್ಯೂಟ್​ನಿಂದಾಗಿ ರೈಲಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಆಂಧ್ರಪ್ರದೇಶದ ಸತ್ಯವಾಡದಲ್ಲಿ ನಡೆದಿದೆ. ಬುಧವಾರ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಸತ್ಯವಾಡ ರೈಲು ನಿಲ್ದಾಣಕ್ಕೆ ನಿಡಧವೋಲುನಿಂದ ಹೊರಟಿದ್ದ ನರಸಪುರಂ ಪ್ಯಾಸೆಂಜರ್ ರೈಲಿನ ಬೋಗಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ಆಂಧ್ರಪ್ರದೇಶ: ಸತ್ಯವಾಡದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಪ್ಯಾಸೆಂಜರ್ ರೈಲಿಗೆ ಬೆಂಕಿ
ರೈಲುImage Credit source: India Today
Follow us
ನಯನಾ ರಾಜೀವ್
|

Updated on: Aug 24, 2023 | 8:52 AM

ಶಾರ್ಟ್​ ಸರ್ಕ್ಯೂಟ್​ನಿಂದಾಗಿ ರೈಲಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಆಂಧ್ರಪ್ರದೇಶದ ಸತ್ಯವಾಡದಲ್ಲಿ ನಡೆದಿದೆ. ಬುಧವಾರ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಸತ್ಯವಾಡ ರೈಲು ನಿಲ್ದಾಣಕ್ಕೆ ನಿಡಧವೋಲುನಿಂದ ಹೊರಟಿದ್ದ ನರಸಪುರಂ ಪ್ಯಾಸೆಂಜರ್ ರೈಲಿನ ಬೋಗಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ಮೂಲಗಳ ಪ್ರಕಾರ ರೈಲು ನಿಡದವೋಲುವಿನಿಂದ ನರಸಾಪುರಕ್ಕೆ ಹೋಗುತ್ತಿದ್ದಾಗ ತಣುಕು ಬಳಿ ಈ ಘಟನೆ ನಡೆದಿದೆ. ರೈಲಿನ ಮೇಲ್ಭಾಗದಲ್ಲಿ (ವಿದ್ಯುತ್ ಪ್ರಸರಣ ಮಾರ್ಗ ಮತ್ತು ರೈಲು ಇನ್‌ಪುಟ್ ನಡುವೆ) ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ, ರೈಲನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಬೇಕಾಯಿತು. ನಂತರ ರೈಲನ್ನು ತಣುಕು ರೈಲು ನಿಲ್ದಾಣಕ್ಕೆ ಸ್ಥಳಾಂತರಿಸಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಮತ್ತಷ್ಟು ಓದಿ: ಬೆಂಗಳೂರು: ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರಿ ದುರಂತ

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಉದ್ಯಾನ್ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಇತ್ತೀಚೆಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಯಿತು. ಈ ರೈಲು ಮುಂಬೈನಿಂದ ಬೆಂಗಳೂರು ನಿಲ್ದಾಣದ ನಡುವೆ ಚಲಿಸುತ್ತದೆ ಮತ್ತು KSR ರೈಲು ನಿಲ್ದಾಣವು ಕೊನೆಯ ನಿಲುಗಡೆಯಾಗಿದೆ.

ಪ್ರಯಾಣಿಕರು ರೈಲಿನಿಂದ ಇಳಿದ ಎರಡು ಗಂಟೆಗಳ ನಂತರ ಬೆಂಕಿ ಅವಘಡ ಸಂಭವಿಸಿದೆ ಎಂದು ನೈಋತ್ಯ ರೈಲ್ವೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅಗ್ನಿಶಾಮಕ ದಳ ಮತ್ತು ತಜ್ಞರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್‌ನಿಂದ ಹೊರಟ ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಶನಿವಾರ (ಆಗಸ್ಟ್ 19) ಬೆಳಗ್ಗೆ 5.45 ಕ್ಕೆ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣವನ್ನು ತಲುಪಿತು. ರಾತ್ರಿ 7.10ರ ಸುಮಾರಿಗೆ ರೈಲಿನ ಬಿ-1 ಮತ್ತು ಬಿ-2 ಬೋಗಿಗಳಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್