AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಸಹರ್ಸಾದಲ್ಲಿ ಪ್ರಯಾಣಿಕರ ರೈಲಿನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಸುರಕ್ಷಿತ

ಬಿಹಾರದ ಸಹರ್ಸಾದಲ್ಲಿ ಇಂದು ಬೆಳಗಿನ ಜಾವ ಪ್ರಯಾಣಿಕರ ರೈಲೊಂದರಲ್ಲಿ ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಚಲಿಸುವ ‘ರೈಲು ಸಂಖ್ಯೆ 63344 ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಬೆಳಗಿನ ಜಾವ ಸುಮಾರು 3 ಗಂಟೆಗೆ ರೈಲಿನ ಎಂಜಿನ್ ಮತ್ತು ಅದನ್ನು ಹೊಂದಿಕೊಂಡಿದ್ದ ಬೋಗಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಬಿಹಾರದ ಸಹರ್ಸಾದಲ್ಲಿ ಪ್ರಯಾಣಿಕರ ರೈಲಿನಲ್ಲಿ ಅಗ್ನಿ ಅವಘಡ, ಪ್ರಯಾಣಿಕರು ಸುರಕ್ಷಿತ
ರೈಲು
ನಯನಾ ರಾಜೀವ್
|

Updated on: Aug 03, 2026 | 10:54 AM

Share

ಸಹರ್ಸಾ, ಆಗಸ್ಟ್​ 03: ಬಿಹಾರದ ಸಹರ್ಸಾದಲ್ಲಿ ಇಂದು ಬೆಳಗಿನ ಜಾವ ಪ್ರಯಾಣಿಕರ ರೈಲೊಂದರಲ್ಲಿ ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಚಲಿಸುವ ‘ರೈಲು ಸಂಖ್ಯೆ 63344 ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಬೆಳಗಿನ ಜಾವ ಸುಮಾರು 3 ಗಂಟೆಗೆ ರೈಲಿನ ಎಂಜಿನ್ ಮತ್ತು ಅದನ್ನು ಹೊಂದಿಕೊಂಡಿದ್ದ ಬೋಗಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಆದರೆ ಬೆಂಕಿಯ ಜ್ವಾಲೆ ಮತ್ತು ಹೊಗೆಯನ್ನು ಕಂಡ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಪ್ರಯಾಣಿಕರನ್ನು ಎಚ್ಚರಿಸಿ ಹೊರತರಲು ಯಶಸ್ವಿಯಾದರು. ಬೆಂಕಿಯ ಕೆನ್ನಾಲಗೆಗೆ ಇಡೀ ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಾಗೂ ರೈಲ್ವೆ ಸುರಕ್ಷತಾ ಪಡೆ (RPF) ಸಿಬ್ಬಂದಿ ಸುಮಾರು ಎರಡೂವರೆ ಗಂಟೆಗಳ ಕಾಲ ಸತತ ಶ್ರಮಿಸಿ ಬೆಂಕಿಯನ್ನು ನಂದಿಸಿದರು. ಈ ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲವು ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಹಾನಿಗೊಳಗಾದ ಬೋಗಿಯನ್ನು ಬೇರ್ಪಡಿಸಿದ ನಂತರ, ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಮಾರ್ಗವನ್ನು ಸುಸ್ಥಿತಿಗೆ ತರಲಾಯಿತು.

ಮತ್ತಷ್ಟು ಓದಿ: ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆಗೂ ಅಧಿಕ ವನಸಂಪತ್ತು ನಾಶ

ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಕೋನದಲ್ಲಿ ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಮೆಮು’ (MEMU) ಮತ್ತು ‘ಡೆಮು’ (DEMU) ಪ್ಯಾಸೆಂಜರ್ ರೈಲುಗಳಲ್ಲಿ ಎಲೆಕ್ಟ್ರಿಕಲ್ ಶಾರ್ಟ್ ಸರ್ಕ್ಯೂಟ್‌ಗಳಿಂದ ಬೆಂಕಿ ಬೀಳುವ ಘಟನೆಗಳು ಹೆಚ್ಚುತ್ತಿದ್ದು, ಪೂರ್ವ ಮಧ್ಯ ರೈಲ್ವೆ ಆಡಳಿತ ಮಂಡಳಿಯು ಈ ಘಟನೆಯ ಜಂಟಿ ಪರಿಶೀಲನೆಗೆ ಆದೇಶಿಸಿದೆ.

ಬೆಳಗಿನ ಜಾವ ನಿಲ್ದಾಣಗಳಲ್ಲಿ ನಿಲ್ಲುವ ರೈಲುಗಳಲ್ಲಿ ತುರ್ತು ನಿರ್ಗಮನ ವ್ಯವಸ್ಥೆ ಮತ್ತು ಅಗ್ನಿಶಾಮಕ ಉಪಕರಣಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಆದೇಶಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ