ಮಧುರೈ ರೈಲಿನಲ್ಲಿ ಬೆಂಕಿಗೆ ಕಾರಣವಾಗಿದ್ದು ಅಕ್ರಮವಾಗಿ ಸಾಗಿಸಲಾಗಿದ್ದ ಗ್ಯಾಸ್ ಸಿಲಿಂಡರ್: ದಕ್ಷಿಣ ರೈಲ್ವೆ

ಶನಿವಾರ ಬೆಳಿಗ್ಗೆ 5:15 ಕ್ಕೆ ಮಧುರೈ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬೆಳಗ್ಗೆ 5.45ಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 7.15ಕ್ಕೆ ಬೆಂಕಿ ನಂದಿಸಲಾಯಿತು. ಉಳಿದ ಬೋಗಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಧುರೈ ರೈಲಿನಲ್ಲಿ ಬೆಂಕಿಗೆ ಕಾರಣವಾಗಿದ್ದು ಅಕ್ರಮವಾಗಿ ಸಾಗಿಸಲಾಗಿದ್ದ ಗ್ಯಾಸ್ ಸಿಲಿಂಡರ್: ದಕ್ಷಿಣ ರೈಲ್ವೆ
ಮಧುರೈ ರೈಲು
Follow us
ರಶ್ಮಿ ಕಲ್ಲಕಟ್ಟ
|

Updated on:Aug 26, 2023 | 2:12 PM

ಮಧುರೈ ಆಗಸ್ಟ್ 26: ಖಾಸಗಿ ಕೋಚ್/ವೈಯಕ್ತಿಕ ಕೋಚ್‌ನಲ್ಲಿದ್ದ ಪ್ರಯಾಣಿಕರು ಅಕ್ರಮವಾಗಿ ಎಲ್‌ಪಿಜಿ ಸಿಲಿಂಡರ್ (LPG) ಅನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಶನಿವಾರ ನಸುಕಿನ ವೇಳೆ ಮಧುರೈ ರೈಲು ನಿಲ್ದಾಣದ ಬಳಿ ಭಾರತ್ ಗೌರವ್ ವಿಶೇಷ ರೈಲಿಗೆ (Bharat Gaurav special train) ಬೆಂಕಿಗೆ ಕಾರಣ  ಇದೇ ಆಗಿದೆ ಎಂದು ದಕ್ಷಿಣ ರೈಲ್ವೆ (Southern Railways) ಹೇಳಿದೆ. ಮಧುರೈ ರೈಲ್ವೇ ಜಂಕ್ಷನ್ ಬಳಿ ನಿಲುಗಡೆಯಾಗಿದ್ದ ಟೂರಿಸ್ಟ್ ಕೋಚ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 3 ಮಹಿಳೆಯರು ಸೇರಿದಂತೆ 9 ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ ಎಂದು ರೈಲ್ವೇ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಶನಿವಾರ ಬೆಳಿಗ್ಗೆ 5:15 ಕ್ಕೆ ಮಧುರೈ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬೆಳಗ್ಗೆ 5.45ಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 7.15ಕ್ಕೆ ಬೆಂಕಿ ನಂದಿಸಲಾಯಿತು. ಉಳಿದ ಬೋಗಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಯೋಜಿತ ಕೋಚ್‌ನಲ್ಲಿ ಉತ್ತರ ಪ್ರದೇಶದ ಸುಮಾರು 55 ಪ್ರಯಾಣಿಕರು ಇದ್ದರು. ಅವರಲ್ಲಿ ಕೆಲವರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಅನ್ನು ಹೊತ್ತಿಸಿದರು. ಆಗ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ. 3:47 ಕ್ಕೆ ಮಧುರೈಗೆ ಆಗಮಿಸಿದ ಪುನಲೂರ್-ಮದುರೈ ಎಕ್ಸ್‌ಪ್ರೆಸ್‌ನಲ್ಲಿ ನಿನ್ನೆ ನಾಗರ್‌ಕೋಯಿಲ್ ಜಂಕ್ಷನ್‌ನಲ್ಲಿ ಪ್ರೈವೆಟ್ ಕೋಚ್/ವೈಯಕ್ತಿಕ ಕೋಚ್, ಪಾರ್ಟಿ ಕೋಚ್ ಅನ್ನು ಬೇರ್ಪಡಿಸಿ ಮಧುರೈ ಸ್ಟೇಬ್ಲಿಂಗ್ ಲೈನ್‌ನಲ್ಲಿ ಇರಿಸಲಾಗಿತ್ತು.

ಪಾರ್ಟಿ ಕೋಚ್ ಆಗಸ್ಟ್ 17 ರಂದು ಲಕ್ನೋದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿತ್ತು. ಕೊಲ್ಲಂ ಎಕ್ಸ್‌ಪ್ರೆಸ್‌ನಲ್ಲಿ ಚೆನ್ನೈಗೆ ಹಿಂತಿರುಗಲು ಮತ್ತು ಚೆನ್ನೈನಿಂದ ಲಕ್ನೋಗೆ ಹಿಂತಿರುಗಲು ನಿರ್ಧರಿಸಲಾಗಿತ್ತು. ಮೃತರ ಕುಟುಂಬ ಸದಸ್ಯರಿಗೆ ದಕ್ಷಿಣ ರೈಲ್ವೇ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಶನಿವಾರ ಮುಂಜಾನೆ 5:30 ರ ಸುಮಾರಿಗೆ ಮಧುರೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಭಾರತ್ ಗೌರವ್ ವಿಶೇಷ  ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಲ್ಲಿ ಉತ್ತರ ಪ್ರದೇಶದಿಂದ ಬಂದ ಪ್ರಯಾಣಿಕರು ಇದ್ದರು. ಕಾಫಿ ಮಾಡಲು ಗ್ಯಾಸ್ ಸ್ಟವ್ ಹೊತ್ತಿಸಿದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸದ್ಯಕ್ಕೆ ನಾವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಮಧುರೈ ಜಿಲ್ಲಾಧಿಕಾರಿ ಎಂಎಸ್ ಸಂಗೀತಾ ಹೇಳಿದ್ದಾರೆ.

ಶುಕ್ರವಾರ ನಾಗರ್‌ಕೋಯಿಲ್ ಜಂಕ್ಷನ್‌ನಲ್ಲಿ ರೈಲಿಗೆ ಖಾಸಗಿ ಕೋಚ್ ಅನ್ನು ಜೋಡಿಸಲಾಯಿತು. ಅಲ್ಲಿಂದ ರೈಲು ಮಧುರೈಗೆ ಬಂದು ನಿಂತಿದೆ. ಖಾಸಗಿ ಕೋಚ್‌ನಲ್ಲಿದ್ದ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ದಕ್ಷಿಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಗುಗನೇಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:  ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 10 ಪ್ರಯಾಣಿಕರ ಸಾವು

ಖಾಸಗಿ ಪಾರ್ಟಿ ಕೋಚ್‌ನಲ್ಲಿನ ಪ್ರಯಾಣಿಕರು ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡಿದ್ದಾರೆ. ಇದರಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್‌ನಿಂದ ಹೊರಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ನಲ್ಲಿಯೇ  ಉಳಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Sat, 26 August 23

‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್