ಭಾರತದಲ್ಲಿಂದು 1.20 ಹೊಸ ಕೊರೊನಾ ಸೋಂಕಿನ ಕೇಸ್​​ಗಳು ದಾಖಲು; ಚೇತರಿಕೆಯ ಪ್ರಮಾಣ ಶೇ. 93.08ಕ್ಕೆ ಏರಿಕೆ

| Updated By: Lakshmi Hegde

Updated on: Jun 05, 2021 | 1:12 PM

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಇಳಿದಿದೆ. ಅಂದರೆ ಒಟ್ಟಾರೆ ಸೋಂಕಿತರ ಸಂಖ್ಯೆಗಿಂತ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 5.73ರಷ್ಟು ಕಡಿಮೆಯಾಗಿದೆ.

ಭಾರತದಲ್ಲಿಂದು 1.20 ಹೊಸ ಕೊರೊನಾ ಸೋಂಕಿನ ಕೇಸ್​​ಗಳು ದಾಖಲು; ಚೇತರಿಕೆಯ ಪ್ರಮಾಣ ಶೇ. 93.08ಕ್ಕೆ ಏರಿಕೆ
ಕೋವಿಡ್​-19 ಟೆಸ್ಟಿಂಗ್
Follow us on

ಭಾರತದಲ್ಲಿ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ. ಆದರೆ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಕಸಿಮೆಯಾಗುತ್ತಿಲ್ಲ. ಕಳೆದ 24ಗಂಟೆಯಲ್ಲಿ 1,20,529 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3380 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಹಾಗೇ ಒಂದು ದಿನದಲ್ಲಿ 1,97,894 ಮಂದಿ ಚೇತರಿಸಿಕೊಂಡು ಡಿಸ್​ಚಾರ್ಜ್​ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಇದುವರೆಗೆ 3,44,082 ಮಂದಿ ಮೃತಪಟ್ಟಿದ್ದಾರೆ. ಹಾಗೇ ಗುಣಮುಖರಾದವರು 2,67,95,549 ಮಂದಿ ಎಂದು ಆರೋಗ್ಯ ಇಲಾಖೆಯ ಡಾಟಾ ಉಲ್ಲೇಖಿಸಿದೆ.

ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿನ ಪ್ರಕರಣಗಳಿಗಿಂತ, ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗುವವರ ಸಂಖ್ಯೆಯೇ ಹೆಚ್ಚಾಗಿದೆ. ಸದ್ಯ ದೇಶದಲ್ಲಿ ಸಾವಿನ ಪ್ರಮಾಣ ಶೇ.1.19ರಷ್ಟಿದೆ. ಪಾಸಿಟಿವಿಟಿ ದರ ಶೇ.6.89ಕ್ಕೆ ಕುಸಿತಗೊಂಡಿದ್ದು, ಕಳೆದ 58 ದಿನಗಳಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಹೊಸ ಕೇಸ್​​ಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರದವರೆಗೆ ಒಟ್ಟು 22,78,60,317 ಜನರಿಗೆ ಲಸಿಕೆ ಕೊಟ್ಟು ಮುಗಿದಿದೆ ಎಂದು ತಿಳಿಸಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಇಳಿದಿದೆ. ಅಂದರೆ ಒಟ್ಟಾರೆ ಸೋಂಕಿತರ ಸಂಖ್ಯೆಗಿಂತ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 5.73ರಷ್ಟು ಕಡಿಮೆಯಾಗಿದೆ. ಚೇತರಿಕೆಯ ಪ್ರಮಾಣ ಶೇ. 93.08ಕ್ಕೆ ಏರಿಕೆಯಾಗಿದೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೊರೊನಾ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಭೆ ನಡೆದಿದೆ. ಲಸಿಕೆ ಅಭಿಯಾನದ ಬಗ್ಗೆಯೂ ಅವರು ಮಾಹಿತಿ ಪಡೆದಿದ್ದಾರೆ. ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಿಸಲು ಕೈಗೊಂಡ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪ್ರಧಾನಿ ಮೋದಿ ವರದಿ ಪಡೆದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ರವಿಚಂದ್ರನ್​ ಸಿನಿಮಾ ನಾಯಕಿ? ಕೇಳಿಬರ್ತಿದೆ ಸ್ಟಾರ್ ನಟಿ ಹೆಸರು