ಭೂಪೇಂದ್ರ ಪಟೇಲ್ ಮತ್ತೆ ಸಿಎಂ ಆಗ್ತಾರೆ: ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್

| Updated By: ನಯನಾ ರಾಜೀವ್

Updated on: Oct 02, 2022 | 12:21 PM

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮುಂಬರುವ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ಮುಂದಿನ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್ ಭರವಸೆ ವ್ಯಕ್ತಪಡಿಸಿದರು.

ಭೂಪೇಂದ್ರ ಪಟೇಲ್ ಮತ್ತೆ ಸಿಎಂ ಆಗ್ತಾರೆ: ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್
Bhupendra Patel
Follow us on

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮುಂಬರುವ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ಮುಂದಿನ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್ ಭರವಸೆ ವ್ಯಕ್ತಪಡಿಸಿದರು.
ಟಿವಿ9 ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಟೀಲ್, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿ ಉಳಿಯುತ್ತದೆ ಎಂದರು.

ಈ ವರ್ಷದ ಕೊನೆಯಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಅವರು ಮತ್ತೊಂದು ಅವಧಿಗೆ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಜಯ್ ರೂಪಾನಿ ನಿರ್ಗಮಿಸಿದ ನಂತರ ಮೊದಲ ಬಾರಿಗೆ ಶಾಸಕರಾಗಿದ್ದ ಪಟೇಲ್ ಅವರು ಮುಖ್ಯಮಂತ್ರಿಯಾಗಿ ಪಕ್ಷದ ಅಚ್ಚರಿಯ ಆಯ್ಕೆಯಾಗಿದ್ದರು. ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ರೂಪಾನಿ ಅವರು ಬಿಜೆಪಿಯ ಹೈಕಮಾಂಡ್ ರಾಜೀನಾಮೆ ನೀಡುವಂತೆ ಕೇಳಿಕೊಂಡಿತ್ತು ಮತ್ತು ಕಾರಣವನ್ನು ಕೇಳಲಿಲ್ಲ ಎಂದು ಹೇಳಿದ್ದರು.

ಸಚಿವರಾದ ರಾಜೇಂದ್ರ ತ್ರಿವೇದಿ ಮತ್ತು ಪೂರ್ಣೇಶ್ ಮೋದಿ ಅವರಿಂದ ಅಧಿಕಾರವನ್ನು ಏಕೆ ಕಿತ್ತುಕೊಳ್ಳಲಾಯಿತು ಎಂದು ಕೇಳಿದಾಗ “ಚುನಾವಣೆಗಳು ಬಂದಾಗ, ಕೆಲಸಗಳು ವೇಗವಾಗಿ ನಡೆಯಬೇಕು ಅದೊಂದು ಸಮಸ್ಯೆಯಾಗಿತ್ತು ಮತ್ತು ಅದಕ್ಕಾಗಿಯೇ ಎರಡೂ ಖಾತೆಗಳನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಲಾಯಿತು. ಈ ಹಿಂದೆ ಸಂಪುಟದ ಸಚಿವರು ತಮ್ಮ ನಿರ್ಧಾರಗಳನ್ನು ಸಿಎಂ ಅನುಮೋದನೆಗೆ ಕಳುಹಿಸಿದ್ದರಿಂದ ಸಮಯ ವ್ಯರ್ಥವಾಯಿತು, ಈಗ ಈ ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಳ್ಳಲಾಗುವುದು.

ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ಅವರಿಗೆ ಕಂದಾಯ ಖಾತೆ ಹೆಚ್ಚುವರಿಯಾಗಿ ನೀಡಲಾಗಿದ್ದು, ಕೈಗಾರಿಕೆ ರಾಜ್ಯ ಸಚಿವ ಜಗದೀಶ್ ವಿಶ್ವಕರ್ಮ ಅವರಿಗೆ ರಸ್ತೆ ಮತ್ತು ಕಟ್ಟಡವನ್ನು ನೀಡಲಾಗಿದೆ. ತ್ರಿವೇದಿ ಮತ್ತು ಮೋದಿ ತಮ್ಮ ಇತರ ಖಾತೆಗಳನ್ನು ನಿರ್ವಹಿಸುವುದನ್ನು ಮುಂದುವರೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾಸ್ಟರ್ ಪ್ಲಾನಿಂಗ್ ಸೇರಿದಂತೆ ಬಿಜೆಪಿ ಬಳಿ ಕೆಲವು ಬ್ರಹ್ಮಾಸ್ತ್ರಗಳಿವೆ, ಅದು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಪಾಟೀಲ್ ಹೇಳಿದರು.

 

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 12:17 pm, Sun, 2 October 22