ಬರ್ತಡೇ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ದುರಂತ; ಫೈರಿಂಗ್​ನಲ್ಲಿ ಪಾಟ್ನಾದ ಹುಡುಗ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿಯಿಂದ ಪಾಟ್ನಾ ಹುಡುಗ ಸಾವನ್ನಪ್ಪಿದ್ದಾನೆ. ತಕ್ಷಣ ಸ್ನೇಹಿತರು ಅವನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಲಾಯಿತು. ಬರ್ತಡೇ ಪಾರ್ಟಿಯಲ್ಲಿ 16 ವರ್ಷದ ಬಾಲಕನಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ಇದೀಗ ತಲೆಮರೆಸಿಕೊಂಡಿರುವ ಆತನ ಸ್ನೇಹಿತರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬರ್ತಡೇ ಪಾರ್ಟಿಯಲ್ಲಿ ಸಂಭ್ರಮಾಚರಣೆ ವೇಳೆ ದುರಂತ; ಫೈರಿಂಗ್​ನಲ್ಲಿ ಪಾಟ್ನಾದ ಹುಡುಗ ಸಾವು
Firing
Follow us
ಸುಷ್ಮಾ ಚಕ್ರೆ
|

Updated on: Dec 25, 2024 | 5:33 PM

ಪಾಟ್ನಾ: ಪಾಟ್ನಾದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಂಭ್ರಮಾಚರಣೆಯ ವೇಳೆ ಫೈರಿಂಗ್ ಮಾಡುವಾಗ ಗಾಯಗೊಂಡಿದ್ದ 16 ವರ್ಷದ ಹುಡುಗ ಸಾವನ್ನಪ್ಪಿದ್ದಾನೆ. ಸೋಮವಾರ (ಡಿಸೆಂಬರ್ 23) ಶ್ರೀಕೃಷ್ಣಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್‌ನಲ್ಲಿ ಫೈರಿಂಗ್ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದೆ. ಮೃತ ರಿಶು ಕುಮಾರ್​ನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಆತನ ಸ್ನೇಹಿತರು ಪರಾರಿಯಾಗಿದ್ದಾರೆ.

“ನಮಗೆ ಮಧ್ಯರಾತ್ರಿಯ ಹೊತ್ತಿಗೆ ಗಾಂಧಿನಗರ ಪ್ರದೇಶದಲ್ಲಿ ಗುಂಡಿನ ದಾಳಿಯ ಬಗ್ಗೆ ಮಾಹಿತಿ ಬಂದಿತ್ತು. ಹುಟ್ಟುಹಬ್ಬದ ಪಾರ್ಟಿಯಲ್ಲಿ ಗುಂಡು ಹಾರಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದಾಗ ತಡರಾತ್ರಿ ಸುಮಾರು 5ರಿಂದ 6 ಯುವಕರು ಲಾಡ್ಜ್‌ನ ಟೆರೇಸ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಗುಂಡು ಹಾರಿಸಿದ ಪಿಸ್ತೂಲ್​ಗೆ ಲೈಸೆನ್ಸ್​ ಇರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡದ ನೈನಿತಾಲ್‌ನಲ್ಲಿ ಆಳವಾದ ಕಂದಕಕ್ಕೆ ಬಸ್ ಬಿದ್ದು 4 ಜನ ಸಾವು, 24 ಮಂದಿಗೆ ಗಾಯ

ಪಾರ್ಟಿಯಲ್ಲಿದ್ದ ಓರ್ವ ಬಾಲಕ ಗುಂಡು ಹಾರಿಸಿದ್ದು, ಈ ವೇಳೆ ರಿಶು ಕುಮಾರ್‌ ಕುತ್ತಿಗೆಗೆ ಗುಂಡು ತಗುಲಿದೆ. ಆತನ ಸ್ನೇಹಿತರು ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲರೂ ತಲೆಮರೆಸಿಕೊಂಡಿದ್ದಾರೆ. ಈ ಘಟನೆಯ ಕುರಿತು ಮೃತ ಬಾಲಕನ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬದವರ ಹೇಳಿಕೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು