AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ: ಲಾಲೂ ಪ್ರಸಾದ್ ಆಪ್ತ ಸುಭಾಷ್​ ಯಾದವ್​ಗೆ ಮಾರ್ಚ್​ 22ರವರೆಗೆ ನ್ಯಾಯಾಂಗ ಬಂಧನ

ಅಕ್ರಮ ಮರಳು ಗಣಿಗಾರಿಕೆ ಆರೋಪದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕ ಸುಭಾಷ್ ಯಾದವ್ ಅವರನ್ನು ಈಗಾಗಲೇ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಪಾಟ್ನಾ ವಿಶೇಷ ನ್ಯಾಯಾಲಯ ಮಾರ್ಚ್​ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಕ್ರಮ ಮರಳು ಗಣಿಗಾರಿಕೆ:  ಲಾಲೂ ಪ್ರಸಾದ್ ಆಪ್ತ ಸುಭಾಷ್​ ಯಾದವ್​ಗೆ ಮಾರ್ಚ್​ 22ರವರೆಗೆ ನ್ಯಾಯಾಂಗ ಬಂಧನ
ಸುಭಾಷ್ ಯಾದವ್
ನಯನಾ ರಾಜೀವ್
|

Updated on: Mar 11, 2024 | 2:32 PM

Share

ಅಕ್ರಮ ಮರಳುಗಾರಿಕೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸುಭಾಷ್ ಯಾದವ್(Subhash Yadav) ಅವರನ್ನು ಮಾರ್ಚ್ 22 ರವರೆಗೆ ಪಾಟ್ನಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮಾರ್ಚ್ 9 ರಂದು ಜಾರಿ ನಿರ್ದೇಶನಾಲಯವು ಆರ್‌ಜೆಡಿ ನಾಯಕನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಶನಿವಾರ ತಡರಾತ್ರಿ ಯಾದವ್ ಅವರನ್ನು ಬಂಧಿಸಲಾಗಿದ್ದು, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕನಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಯಾದವ್ ಅವರನ್ನು ಬಂಧಿಸಿದ್ದರು.

ಶೋಧದ ವೇಳೆ ಸುಭಾಷ್ ಯಾದವ್ ಅವರನ್ನು ಬಂಧಿಸುವ ಮುನ್ನ ಇಡಿ ಅಧಿಕಾರಿಗಳು ಮರಳು ಗಣಿಗಾರಿಕೆ ಮತ್ತು ಇತರ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಕೇಂದ್ರ ಸಂಸ್ಥೆಯು ಸುಮಾರು 2.37 ಕೋಟಿ ರೂಪಾಯಿ ಮೌಲ್ಯದ ನಗದು ಪತ್ತೆಯಾಗಿದೆ.

ಮತ್ತಷ್ಟು ಓದಿ: ಲಾಲು ಬಯೋಪಿಕ್​ನಲ್ಲಿ ನಟಿಸೋಕೆ ಪಂಕಜ್ ತ್ರಿಪಾಠಿ ಸೂಕ್ತ; ಶುರುವಾಗಿದೆ ಚರ್ಚೆ

ಸುಭಾಷ್ ಯಾದವ್ ಅವರ ನಿಕಟವರ್ತಿಗಳ ಡಿಜಿಟಲ್ ಸಾಧನಗಳನ್ನು ಇಡಿ ವಶಪಡಿಸಿಕೊಂಡಿದೆ. ಸುಭಾಷ್ ಅವರು ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಮತ್ತು ಪಾಟ್ನಾದಲ್ಲಿ ಪ್ರಮುಖ ಮರಳು ವ್ಯಾಪಾರಿಯಾಗಿದ್ದಾರೆ. ಅವರು ಬ್ರಾಡ್‌ಸನ್ ಕನ್‌ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರೂ ಆಗಿದ್ದಾರೆ. ಬಿಹಾರ ಪೊಲೀಸರು ದಾಖಲಿಸಿದ ಪ್ರಥಮ ಮಾಹಿತಿ ವರದಿಯಿಂದ ಹಣ ವರ್ಗಾವಣೆ ಪ್ರಕರಣವು ಆರಂಭವಾಗಿತ್ತು.

ಸುಭಾಷ್ ಈ ಹಿಂದೆ 2019 ರ ಲೋಕಸಭೆ ಚುನಾವಣೆಯಲ್ಲಿ ಜಾರ್ಖಂಡ್‌ನ ಚತ್ರಾದಿಂದ ಸ್ಪರ್ಧಿಸಿದ್ದರು ಆದರೆ ವಿಫಲರಾಗಿದ್ದರು. ಎರಡು ವರ್ಷಗಳ ಹಿಂದೆ ಇಡಿ ಅವರ ನಿವೇಶನದ ಮೇಲೆ ದಾಳಿ ನಡೆಸಿತ್ತು ಮತ್ತು 2018 ರಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಈ ಪ್ರಕರಣದಲ್ಲಿ ಮೊದಲು, ಇಡಿ ಪಿಎಂಎಲ್‌ಎ ಅಡಿಯಲ್ಲಿ ಸಿಂಡಿಕೇಟ್ ಸದಸ್ಯ ರಾಧಾ ಚರಣ್ ಸಾಹ್, ಅವರ ಮಗ ಮತ್ತು ಬಿಎಸ್‌ಪಿಎಲ್ ನಿರ್ದೇಶಕರನ್ನು ಬಂಧಿಸಿತ್ತು. ಫೆಬ್ರವರಿಯಲ್ಲಿ, ಇಡಿ ತಾತ್ಕಾಲಿಕವಾಗಿ ರೂ ಮೌಲ್ಯದ ಎರಡು ಆಸ್ತಿಗಳನ್ನು ಜಪ್ತಿ ಮಾಡಿದೆ.

ಬ್ರಾಡ್ಸನ್ ಕಮಾಡಿಟೀಸ್ ಪ್ರೈವೇಟ್ ಮತ್ತು ಇತರರ ವಿರುದ್ಧ ಐಪಿಸಿ, 1860 ಮತ್ತು ಬಿಹಾರ ಮಿನರಲ್ (ರಿಯಾಯತಿ, ಅಕ್ರಮ ಗಣಿಗಾರಿಕೆ, ಸಾರಿಗೆ ಮತ್ತು ಸಂಗ್ರಹಣೆ) ನಿಯಮ 2019 ರ ವಿವಿಧ ವಿಭಾಗಗಳ ಅಡಿಯಲ್ಲಿ ಬಿಹಾರ ಪೊಲೀಸರು ದಾಖಲಿಸಿದ 19 ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!