Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಯಾಗಿದ್ದು, ಏಕಾಏಕಿ ಕ್ಯಾಬಿನೆಟ್ ಸಚಿವರ ದರ್ಜೆ ಪಡೆದ ವಿಕೆ ಪಾಂಡಿಯನ್ ಯಾರು?

ಸೋಮವಾರದವರೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವಿಕೆ ಪಾಂಡಿಯನ್ ಇದೀಗ ಏಕಾಏಕಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಚಿವರ ದರ್ಜೆಗೇರಿದ್ದಾರೆ. ಹಾಗಾದರೆ ಈ ವಿಕೆ ಪಾಂಡಿಯನ್ ಯಾರು ಎಂಬುದರ ಕುರಿತು ಎಲ್ಲರಲ್ಲೂ ಕುತೂಹಲ ಮೂಡಿರಬಹುದು. ಇಲ್ಲಿದೆ ಮಾಹಿತಿ.

ಒಡಿಶಾ ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಯಾಗಿದ್ದು, ಏಕಾಏಕಿ ಕ್ಯಾಬಿನೆಟ್ ಸಚಿವರ ದರ್ಜೆ ಪಡೆದ ವಿಕೆ ಪಾಂಡಿಯನ್ ಯಾರು?
ವಿಕೆ ಪಾಂಡಿಯನ್Image Credit source: India Today
Follow us
ನಯನಾ ರಾಜೀವ್
|

Updated on: Oct 24, 2023 | 12:02 PM

ಸೋಮವಾರದವರೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವಿಕೆ ಪಾಂಡಿಯನ್(VK Pandian) ಇದೀಗ ಏಕಾಏಕಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಚಿವರ ದರ್ಜೆಗೇರಿದ್ದಾರೆ. ಹಾಗಾದರೆ ಈ ವಿಕೆ ಪಾಂಡಿಯನ್ ಯಾರು ಎಂಬುದರ ಕುರಿತು ಎಲ್ಲರಲ್ಲೂ ಕುತೂಹಲ ಮೂಡಿರಬಹುದು. ಇಲ್ಲಿದೆ ಮಾಹಿತಿ.

ವಿಕೆ ಪಾಂಡಿಯನ್ ಸೋಮವಾರದವರೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳವಾರ, ಅವರು ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದ ಒಂದು ದಿನದ ನಂತರ, ಪಾಂಡಿಯನ್ ಅವರಿಗೆ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರ ದರ್ಜೆಯನ್ನು ನೀಡಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಒಡಿಶಾದ ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಕಳುಹಿಸಿದೆ. ಅವರ ಸ್ವಯಂ ನಿವೃತ್ತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ. ತಮಿಳುನಾಡು ಮೂಲದ ಪಾಂಡಿಯನ್ ಅವರು 2002 ರಲ್ಲಿ ಕಲಹಂಡಿ ಜಿಲ್ಲೆಯ ಧರ್ಮಗಢದ ಉಪ ಕಲೆಕ್ಟರ್ ಆಗಿ ತಮ್ಮ ಅಧಿಕಾರಶಾಹಿ ವೃತ್ತಿಜೀವನವನ್ನು ಪ್ರಾರಂಭಿಸಿದರು.

ನಂತರ, 2005 ರಲ್ಲಿ, ಅವರು ಮಯೂರ್ಭಂಜ್ ಜಿಲ್ಲೆಯ ಕಲೆಕ್ಟರ್ ಆಗಿ ನೇಮಕಗೊಂಡರು ಮತ್ತು 2007 ರಲ್ಲಿ ಅವರನ್ನು ಗಂಜಾಂನ ಕಲೆಕ್ಟರ್ ಆಗಿ ನೇಮಿಸಲಾಯಿತು.

2011 ರಿಂದ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಪಾಂಡಿಯನ್ 2011 ರಿಂದ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕಲಹಂಡಿ ಜಿಲ್ಲೆಯ ಧರ್ಮಗಢದಲ್ಲಿ ಸಬ್ ಕಲೆಕ್ಟರ್ ಆಗಿ ತಮ್ಮ ಐಎಎಸ್ ವೃತ್ತಿಯನ್ನು ಪ್ರಾರಂಭಿಸಿದರು. ಇದರ ನಂತರ ಅವರು ಮಯೂರ್ಭಂಜ್ ಮತ್ತು ಗಂಜಾಂನಲ್ಲಿ ಕಲೆಕ್ಟರ್ ಆಗಿದ್ದರು. ಇದಾದ ಬಳಿಕ ಮುಖ್ಯಮಂತ್ರಿ ಕಚೇರಿಗೆ ಆಗಮಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಈ ಹಿಂದೆ ಟೀಕಿಸಿದ್ದವು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಸೇವಾ ನಿಯಮಗಳ ಉಲ್ಲಂಘನೆಗಾಗಿ ಪಾಂಡಿಯನ್ ಅವರನ್ನು ಗುರಿಯಾಗಿಸಿದ್ದವು. ಅಷ್ಟೇ ಅಲ್ಲ, ಪಾಂಡಿಯನ್ ಅವರು ಆಡಳಿತ ಪಕ್ಷದ ನಾಯಕರ ಟೀಕೆಯನ್ನೂ ಎದುರಿಸಬೇಕಾಯಿತು. ಬಿಜು ಜನತಾ ದಳ (ಬಿಜೆಡಿ) ಉಚ್ಚಾಟಿತ ಶಾಸಕ ಸೌಮ್ಯ ರಂಜನ್ ಪಟ್ನಾಯಕ್ ಅವರು ಹೆಲಿಕಾಪ್ಟರ್ ಪ್ರಯಾಣಕ್ಕಾಗಿ ಸರ್ಕಾರದ ಖಜಾನೆಯಿಂದ ಹಣವನ್ನು ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದೆ ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಹಿರಿಯ ಕಾಂಗ್ರೆಸ್ ಶಾಸಕ ಎಸ್ ಎಸ್ ಸಲೂಜಾ ಅವರು ಸ್ವಯಂ ನಿವೃತ್ತಿ ತೆಗೆದುಕೊಳ್ಳುವ ಪಾಂಡಿಯನ್ ಅವರ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಅವರು ಅದನ್ನು ಮೊದಲೇ ಮಾಡಬೇಕಿತ್ತು. ಅವರು ರಾಜಕೀಯಕ್ಕೆ ಸೇರುತ್ತಾರೆಯೇ ಅಥವಾ ಅವರ ರಾಜ್ಯಕ್ಕೆ ಮರಳುತ್ತಾರೆಯೇ ಎಂಬುದು ನಮಗೆ ತಿಳಿದಿಲ್ಲ ಎಂದರು.

ಬಹಿರಂಗವಾಗಿ ರಾಜಕೀಯ ಮಾಡುತ್ತಾರೆ ಏತನ್ಮಧ್ಯೆ, ಪಾಂಡಿಯನ್ ತಮ್ಮ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸಲು ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಮೋಹನ್ ಮಾಝಿ ಹೇಳಿದ್ದಾರೆ. ಈಗ ಅವರು ಅಧಿಕಾರಶಾಹಿಯ ಮುಖವಾಡ ಧರಿಸುವುದಕ್ಕಿಂತ ಬಹಿರಂಗವಾಗಿ ರಾಜಕೀಯ ಮಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಒಡಿಶಾದ ಸಾಮಾನ್ಯ ಆಡಳಿತ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆ ಹೊರಡಿಸಿದ ಆದೇಶದಲ್ಲಿ ಐಎಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರದ 5T (ಪರಿವರ್ತನೆ ಉಪಕ್ರಮಗಳು) ಮತ್ತು ನಬಿನ್ ಒಡಿಶಾ ಯೋಜನೆಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದೆ. ಅವರು ಕ್ಯಾಬಿನೆಟ್ ಸಚಿವ ಶ್ರೇಣಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?