AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ

Pawan Khera: ಪವನ್ ಖೇರಾ ಅವರಿಗೆ ಗುವಾಹಟಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿದೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಖೇರಾ ಅವರಿಗೆ ಬಂಧನ ಭೀತಿ ಎದುರಾಗಿದೆ. ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಖೇರಾ ಈಗ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ
ಪವನ್ ಖೇರಾ
ನಯನಾ ರಾಜೀವ್
|

Updated on:Apr 24, 2026 | 11:07 AM

Share

ಗುವಾಹಟಿ, ಏಪ್ರಿಲ್ 24: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ  ಭಾರಿ ಹಿನ್ನಡೆಯಾಗಿದೆ. ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಂಗಳವಾರ ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ಪಾರ್ಥಿವಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ಆದೇಶ ಹೊರಡಿಸಿದ ನ್ಯಾಯಾಲಯವು, ಖೇರಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ಪವನ್ ಖೇರಾ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಅಸ್ಸಾಂ ಮುಖ್ಯಮಂತ್ರಿಯವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ದೂರು ದಾಖಲಿಸಿದ್ದರು. ಸಾರ್ವಜನಿಕವಾಗಿ ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ಘನತೆಗೆ ಧಕ್ಕೆ ತರಲಾಗಿದೆ ಎಂಬುದು ರಿನಿಕಿ ಅವರ ದೂರಿನ ಸಾರಾಂಶವಾಗಿತ್ತು. ಈ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮತ್ತಷ್ಟು ಓದಿ: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಹೆಸರಿನ ಕುರಿತಾದ ಹೇಳಿಕೆಯಿಂದ ಕಾನೂನು ಹೋರಾಟ ನಡೆಸುತ್ತಿರುವ ಪವನ್ ಖೇರಾ ಅವರಿಗೆ, ಅಸ್ಸಾಂನ ಈ ಪ್ರಕರಣ ಹೊಸ ತಲೆನೋವಾಗಿ ಪರಿಣಮಿಸಿದೆ. ಹೈಕೋರ್ಟ್‌ನ ಈ ನಿರ್ಧಾರವು ಅಸ್ಸಾಂ ಸರ್ಕಾರ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರವನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆಯಿದೆ.

ಗುವಾಹಟಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ, ಪವನ್ ಖೇರಾ ಅವರು ಈಗ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಸಾಧ್ಯತೆಯಿದೆ ಅಥವಾ ಸ್ಥಳೀಯ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಎದುರಿಸಬೇಕಾಗುತ್ತದೆ. ಒಟ್ಟಾರೆಯಾಗಿ, ಕಾನೂನು ಹೋರಾಟದಲ್ಲಿ ಪವನ್ ಖೇರಾ ಅವರಿಗೆ ಸಿಗುತ್ತಿದ್ದ ‘ರಿಲೀಫ್’ ಸದ್ಯಕ್ಕೆ ಅಂತ್ಯಗೊಂಡಂತೆ ತೋರುತ್ತಿದ್ದು, ಅಸ್ಸಾಂ ಪೊಲೀಸರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Fri, 24 April 26

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ