ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವೆ: ಮೆಹಬೂಬಾ ಮುಫ್ತಿ
ಇಂದು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಸೇರಲು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವವರೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ ಎಂದ ಮುಫ್ತಿ.
ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ (Bharat Jodo Yatra) ಯಾತ್ರೆ ಕಾಶ್ಮೀರಕ್ಕೆ ಬಂದಾಗ ಅದರಲ್ಲಿ ತಾನು ಭಾಗವಹಿಸುವುದಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ (Mehbooba Mufti) ಮಂಗಳವಾರ ಹೇಳಿದ್ದಾರೆ. ಇಂದು ಕಾಶ್ಮೀರದಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆಗೆ ಸೇರಲು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವವರೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಉತ್ತಮ ಭಾರತದತ್ತ ಅವರ ನಡಿಗೆಯಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಟ್ವೀಟ್‌ನಲ್ಲಿ ಮಾಡಿದ್ದಾರೆ.ನ್ಯಾಷನಲ್ ಕಾನ್ಫರೆನ್ಸ್ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡಾ ಭಾರತ್ ಜೋಡೋ ಯಾತ್ರೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವೇಶಿಸಿದಾಗ ಅದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
Ive been formally invited to join @RahulGandhi ji for his Bharat Jodo Yatra in Kashmir today. Salute his indomitable courage & I believe it is my duty to stand with someone who has the courage to challenge fascist forces. Will be joining him in his march towards a better India.
— Mehbooba Mufti (@MehboobaMufti) December 27, 2022
ಪ್ರಜ್ಞಾ ಠಾಕೂರ್ ಹೇಳಿಕೆಯಿಂದ ಅಚ್ಚರಿಗೊಂಡಿಲ್ಲ: ಮುಫ್ತಿ
ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಯಾವುದೇ ದಾಳಿಗೆ ಪ್ರತಿಕ್ರಿಯಿಸಲು ಕನಿಷ್ಠ ಅಡುಗೆಮನೆಯ ಚಾಕುಗಳನ್ನು “ತೀಕ್ಷ್ಣವಾಗಿ” ಇಟ್ಟುಕೊಳ್ಳುವಂತೆ ಹಿಂದೂಗಳಿಗೆ ಸೂಚಿಸಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಫ್ತಿ ಇದನ್ನು ಕೇಳಿ “ಶಾಕ್ ಆಐಗ್ಲ್ಲ ” ಎಂದು ಹೇಳಿದ್ದಾರೆ.
ಭಾನುವಾರ ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತದ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಭೋಪಾಲ್‌ನ ಬಿಜೆಪಿ ಸಂಸದರು, “ನಮ್ಮ ಮನೆಗೆ ನುಸುಳುವವರಿಗೆ” ತಕ್ಕ ಉತ್ತರ ನೀಡುವಂತೆ ತಮ್ಮ ಸಭಿಕರಿಗೆ ಹೇಳಿದರು.
“ನಿಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಿ, ಏನಿಲ್ಲವೆಂದರೂ, ತರಕಾರಿಗಳನ್ನು ಕತ್ತರಿಸಲು ಬಳಸುತ್ತಿದ್ದ ಕನಿಷ್ಠ ಚಾಕುಗಳು ಹರಿತವಾದವು…ಯಾವಾಗ ಯಾವ ಪರಿಸ್ಥಿತಿ ಬರುತ್ತದೋ ಗೊತ್ತಿಲ್ಲ….ಎಲ್ಲರಿಗೂ ಆತ್ಮರಕ್ಷಣೆ ಹಕ್ಕಿದೆ.ನಮ್ಮ ಮನೆಗೆ ಯಾರಾದರೂ ನುಸುಳಿದರೆ, ನಮ್ಮ ಮೇಲೆ ದಾಳಿ ಮಾಡುತ್ತಾರೆ, ಅದಕ್ಕೆ ತಕ್ಕ ಉತ್ತರ ನೀಡುವುದು ನಮ್ಮ ಹಕ್ಕು,” ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:59 pm, Tue, 27 December 22