Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ.

Pee Gate Incident: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಏರ್ ಇಂಡಿಯಾಗೆ 10 ಲಕ್ಷ ರೂ ದಂಡ ವಿಧಿಸಿದ ಡಿಜಿಸಿಎ
ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
Follow us
|

Updated on: Jan 24, 2023 | 3:56 PM

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂ. ದಂಡ ವಿಧಿಸಿದೆ. ಈ ಘಟನೆಯನ್ನು ಡಿಜಿಸಿಎ ಗಮನಕ್ಕೆ ತಂದು ರಿಪೋರ್ಟ್​ ಮಾಡಿಲ್ಲ ಎಂಬ ಕಾರಣಕ್ಕೆ ದಂಡ ವಿಧಿಸಲಾಗಿದೆ. ಏರ್ ಇಂಡಿಯಾ ತನ್ನ ಆಂತರಿಕ ಸಮಿತಿಗೆ ವಿಷಯವನ್ನು ಉಲ್ಲೇಖಿಸಲು ವಿಳಂಬ ಮಾಡಿದೆ ಎಂದು ಆರೋಪಿಸಲಾಗಿದೆ. ಡಿಸೆಂಬರ್ 6 ರಂದು ಏರ್​ ಇಂಡಿಯಾದಲ್ಲಿ ಪ್ರಯಾಣಿಕರೊಬ್ಬರು ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಭಾರತೀಯ ವಾಯುಯಾನ ವಾಚ್‌ಡಾಗ್ ಆಗಿರುವ ಡಿಜಿಸಿಎ ಏರ್ ಇಂಡಿಯಾ ಮೂತ್ರ ವಿಸರ್ಜನೆಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈಗ ಇಂತಹ ಘಟನೆಗಳು ಜರುಗಂತೆ ನೋಡಿಕೊಳ್ಳಲು ಅದು ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಿದೆ. ವಿಮಾನದಲ್ಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾದರೆ ವಿಮಾನಯಾನ ಸಿಬ್ಬಂದಿಗೆ ಕ್ರಮ ಕೈಗೊಳ್ಳುವುದಾಗಿ ಡಿಜಿಸಿಎ ಮಾರ್ಗಸೂಚಿಗಳು ಎಚ್ಚರಿಸಿವೆ.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಸ್ವಲ್ಪ ದಿನಗಳ ಹಿಂದೆ ಇಂತಹ ಅಹಿತಕರ ಘಟನೆಗಳ ಕಡೆಗೆ ವಿಮಾನಯಾನ ಸಂಸ್ಥೆಗಳು ಕ್ರಮ ಕೈಗೊಳ್ಳದಿರುವುದು/ಅನುಚಿತ ಕ್ರಮ/ಲೋಪವು ಸಮಾಜದ ವಿವಿಧ ವಿಭಾಗಗಳಲ್ಲಿ ವಿಮಾನ ಪ್ರಯಾಣದ ಚಿತ್ರಣವನ್ನು ಕಳಂಕಗೊಳಿಸಿದೆ ಎಂದು ಅದು ಹೇಳಿದೆ.

ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಡಿಜಿಸಿಎ, ಇತ್ತೀಚೆಗೆ, ವಿಮಾನದ ಸಮಯದಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು ಅಶಿಸ್ತಿನ ವರ್ತನೆ ಮತ್ತು ಅನುಚಿತ ವರ್ತನೆಯ ಕೆಲವು ಘಟನೆಗಳನ್ನು ಡಿಜಿಸಿಎ ಗಮನಿಸಿದೆ, ಇದರಲ್ಲಿ ಪೋಸ್ಟ್ ಹೋಲ್ಡರ್‌ಗಳು, ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ