Pee Gate Incident: ನಾನು ಅವರ ಮೇಲೆ ಮೂತ್ರ ಮಾಡಿಲ್ಲ, ಆ ಮಹಿಳೆಯೇ ಮಾಡಿಕೊಂಡು ನನ್ನ ಮೇಲೆ ಆರೋಪ ಹೊರಿಸುತ್ತಿದ್ದಾರೆ: ಶಂಕರ್ ಮಿಶ್ರಾ
ಏರ್ ಇಂಡಿಯಾದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಶಂಕರ್ ಮಿಶ್ರಾ ನಾನು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿಲ್ಲ ಆ ಮಹಿಳೆಯೇ ತನ್ನ ಸೀಟಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾಳೆ.
ದೆಹಲಿ: ಏರ್ ಇಂಡಿಯಾದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಶಂಕರ್ ಮಿಶ್ರಾ ( (Shankar Mishra), ನಾನು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿಲ್ಲ ಆ ಮಹಿಳೆಯೇ ತನ್ನ ಸೀಟಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾಳೆ, ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ದೆಹಲಿ ನ್ಯಾಯಾಲದ ಮುಂದೆ ಹೇಳಿದ್ದಾನೆ. ಮಿಶ್ರಾ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸೆಷನ್ಸ್ ನ್ಯಾಯಾಲಯವು ಮಿಶ್ರಾ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಜ್ಯೋತ್ ಸಿಂಗ್ ಭಲ್ಲಾ ಅವರು ಕಳೆದ ವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ ಆದೇಶವನ್ನು ಪರಿಷ್ಕರಿಸಲು ಕೋರಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದರು, ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದರು ಮತ್ತು ಪೊಲೀಸರ ವಶಕ್ಕೆ ನಿರಾಕರಿಸಿದರು.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಅವರು ಬುಧವಾರ ಮಿಶ್ರಾ ಅವರಿಗೆ ಜಾಮೀನು ನಿರಾಕರಿಸಿದ್ದರು ಮತ್ತು ಅವರ ಕೃತ್ಯವನ್ನು ಅಸಹ್ಯಕರ ಎಂದು ಕರೆದಿದ್ದರು. ಈ ಪ್ರಕರಣವು ಜನರ ನಾಗರಿಕ ಪ್ರಜ್ಞೆಯನ್ನು ಆಘಾತಗೊಳಿಸಿದೆ ಮತ್ತು ಅದನ್ನು ಅಸಮ್ಮತಿಸಬೇಕಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಇದನ್ನು ಓದಿ:ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನನಗೆ ಕುಟುಂಬ ಇದೆ ದೂರು ಕೊಡಬೇಡಿ ಎಂದು ಆರೋಪಿ ಬೇಡಿಕೊಂಡಿದ್ದ
ನ್ಯೂಯಾರ್ಕ್‌ನಿಂದ ನವದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಹಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಶಂಕರ್ ಮಿಶ್ರಾಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಜಾಮೀನು ನಿರಾಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿತ್ತು.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:39 pm, Fri, 13 January 23