
ದೆಹಲಿ: ವಿಪಕ್ಷಗಳು “ಸಮಸ್ಯೆಯಲ್ಲದ ಸಮಸ್ಯೆಯೊಂದನ್ನು” ಉಂಟು ಮಾಡುತ್ತಿವೆ. ಪೆಗಾಸಸ್ ಸ್ಪೈವೇರ್ ವಿಷಯದ ಕುರಿತು ಸದನದಲ್ಲಿ ಚರ್ಚೆಗೆ ಪ್ರತಿಭಟನೆಗಳ ನಡುವೆ ಸಂಸತ್ ಕಾರ್ಯನಿರ್ವಹಿಸಲು ಅವಕಾಶ ನೀಡಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
“ಐಟಿ (ಮಾಹಿತಿ ತಂತ್ರಜ್ಞಾನ) ಸಚಿವ ಅಶ್ವಿನಿ ವೈಷ್ಣವ್ ಅವರು ಉಭಯ ಸದನಗಳಲ್ಲಿ ವಿವರವಾದ ಹೇಳಿಕೆಯನ್ನು (ಪೆಗಾಸಸ್ ವಿಷಯದ ಬಗ್ಗೆ) ನೀಡಿದ್ದಾರೆ” ಎಂದು ಜೋಶಿ ಲೋಕಸಭೆಯಲ್ಲಿ ಹೇಳಿದರು. ಜನರಿಗೆ ಸಂಬಂಧಿಸಿದ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ.. “ಮಸೂದೆಗಳು ಸಹ ಒಂದು ಪ್ರಮುಖ ವಿಷಯವಾಗಿದೆ. ಚರ್ಚೆಯಿಲ್ಲದೆ ಅವುಗಳನ್ನು ಜಾರಿಗೊಳಿಸುವುದನ್ನು ಸರ್ಕಾರವು ಬಯಸುವುದಿಲ್ಲ … “ಅವರು ಸಮಸ್ಯೆಗಳನ್ನು ಪ್ರಸ್ತಾಪಿಸಲಿ ಮತ್ತು ಸೂಚಿಸಲಿ … ಆದರೆ ದುರದೃಷ್ಟವಶಾತ್, ಅವರು ಸಂಸತ್ ಕಲಾಪ ನಡೆಸಲು ಅನುಮತಿಸುವುದಿಲ್ಲ ಎಂದಿದ್ದಾರೆ ಜೋಷಿ.
ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರೇನ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೂಷಿಸಿದರು. ಸರ್ಕಾರ ಚರ್ಚೆಯಿಂದ ಓಡಿಹೋಗುತ್ತಿದೆ ಎಂದು ಒಬ್ರೇನ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Pegasus Row: ಪೆಗಾಸಸ್ ಬೇಹುಗಾರಿಕೆ ವಿವಾದ; ಮುಂದಿನ ವಾರ ಸುಪ್ರೀಂಕೋರ್ಟ್ನಿಂದ ವಿಚಾರಣೆ
ಇದನ್ನೂ ಓದಿ: ಪೆಗಾಸಸ್ ಬಳಸಿ ಇಬ್ಬರು ಪತ್ರಕರ್ತರ ಫೋನ್ಗಳನ್ನು ಹ್ಯಾಕ್ ಮಾಡಲಾಗಿದೆ: ಫ್ರಾನ್ಸ್ನ ಸೈಬರ್ ಸೆಕ್ಯುರಿಟಿ ಏಜೆನ್ಸಿ
(Pegasus row Opposition was making an issue out of a non-issue Says Pralhad Joshi)