Pegasus Row: ಪೆಗಾಸಸ್ ಬೇಹುಗಾರಿಕೆ ವಿವಾದ; ಮುಂದಿನ ವಾರ ಸುಪ್ರೀಂಕೋರ್ಟ್​ನಿಂದ ವಿಚಾರಣೆ

| Updated By: ಸುಷ್ಮಾ ಚಕ್ರೆ

Updated on: Jul 30, 2021 | 12:41 PM

Pegasus Spyware: ಇಸ್ರೇಲ್ ಮೂಲದ ಪೆಗಾಸಸ್ ಸಾಫ್ಟ್​ವೇರ್ ಮೂಲಕ ನಡೆಸಲಾದ ಬೇಹುಗಾರಿಕೆ ಅಥವಾ ಫೋನ್ ಕದ್ದಾಲಿಕೆ ಹಗರಣದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕೆಂದು 500ಕ್ಕೂ ಹೆಚ್ಚು ಗಣ್ಯರು ಒತ್ತಾಯಿಸಿದ್ದರು.

Pegasus Row: ಪೆಗಾಸಸ್ ಬೇಹುಗಾರಿಕೆ ವಿವಾದ; ಮುಂದಿನ ವಾರ ಸುಪ್ರೀಂಕೋರ್ಟ್​ನಿಂದ ವಿಚಾರಣೆ
ಸುಪ್ರೀಂ​ ಕೋರ್ಟ್
Follow us on

ನವದೆಹಲಿ: ಭಾರತದ ವಿರೋಧಪಕ್ಷದ ನಾಯಕರು, ಪತ್ರಕರ್ತರು ಮುಂತಾದವರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಮೂಲದ ಪೆಗಾಸಸ್ ಸಾಫ್ಟ್​ವೇರ್ (Pegasus Spyware) ಮೂಲಕ ನಡೆಸಲಾದ ಬೇಹುಗಾರಿಕೆ ಅಥವಾ ಫೋನ್ ಕದ್ದಾಲಿಕೆ (Phone Tapping) ಹಗರಣದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕೆಂದು 500ಕ್ಕೂ ಹೆಚ್ಚು ಗಣ್ಯರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ವಾರ ಸುಪ್ರೀಂ ಕೋರ್ಟ್​ನಿಂದ ಪೆಗಾಸಸ್ ಹಗರಣದ ಕುರಿತು ವಿಶೇಷ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ (CJI NA Ramana) ಇಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಎಸ್​ಐಟಿ ತಂಡದಿಂದ ವಿಶೇಷ ತನಿಖೆ ನಡೆಸಬೇಕೆಂದು ಹಿರಿಯ ಪತ್ರಕರ್ತರಾದ ಎನ್​. ರಾಮ್ ಮತ್ತು ಶಶಿಕುಮಾರ್ ಅರ್ಜಿ ಸಲ್ಲಿಸಿದ್ದರು. ಅವರ ಪರವಾಗಿ ವಾದ ಮಂಡಿಸಿದ್ದ ವಕೀಲ ಕಪಿಲ್ ಸಿಬಲ್, ಮಿಲಿಟರಿ ದರ್ಜೆಯ ಬೇಹುಗಾರಿಕಾ ತಂತ್ರಜ್ಞಾನ ಬಳಸಿ ಗೂಢಚಾರಿಕೆ ನಡೆಸಿರುವುದರಿಂದ ಅನೇಕರ ಮೂಲಭೂತ ಹಕ್ಕು, ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಅವರ ಖಾಸಗಿ ಮಾಹಿತಿಗಳು ಸೋರಿಕೆಯಾಗಿವೆ ಎಂದಿದ್ದರು. ನ್ಯಾಯಮೂರ್ತಿಗಳು, ಪತ್ರಕರ್ತರು, ವಿಪಕ್ಷ ನಾಯಕರ ಫೋನ್​ಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಕಪಿಲ್ ಸಿಬಲ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಪೆಗಾಸಸ್ ಗೂಢಚಾರಿಕೆ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರಾದ ಶಶಿ ತರೂರ್, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಮಮತಾ ಬ್ಯಾನರ್ಜಿ ಮತ್ತಿತರ ರಾಜಕೀಯ ನಾಯಕರು ಒತ್ತಾಯಿಸಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನದಲ್ಲೂ ಪೆಗಾಸಸ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಕಲಾಪ ಆರಂಭವಾದ ಒಂದು ವಾರವಿಡೀ ಅಧಿವೇಶನವನ್ನು ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು.

ಇದನ್ನೂ ಓದಿ: Pegasus row ಬೇಹುಗಾರಿಕೆ ಮಾಡಲಾಗಿದೆಯೇ ಎಂಬುದರ ಬಗ್ಗೆ ಪ್ರಧಾನಿ ಮೋದಿ ಸಂಸತ್​​ನಲ್ಲಿ ಸ್ಪಷ್ಟಪಡಿಸಬೇಕು: ಪಿ.ಚಿದಂಬರಂ

Pegasus spyware ನನ್ನ ಎಲ್ಲ ಫೋನ್​​ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ

(Pegasus Spyware Row: Supreme Court to hear plea on Pegasus issue next week Chief Justice says Today)

Published On - 12:37 pm, Fri, 30 July 21