AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arunachal Pradesh CM Swearing in Ceremony: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪೆಮಾ ಖಂಡು

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

Arunachal Pradesh  CM Swearing in Ceremony: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪೆಮಾ ಖಂಡು
ಪೆಮಾ ಖಂಡು
ನಯನಾ ರಾಜೀವ್
|

Updated on:Jun 13, 2024 | 12:07 PM

Share

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು(Pema Khandu) ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಚೌನಾ ಮೀನ್ ಅರುಣಾಚಲ ಪ್ರದೇಶ(Arunachal Pradesh)ದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇಬ್ಬರೂ ಬುಧವಾರ ಇಟಾನಗರ ತಲುಪಿದ್ದರು. ಖಂಡು 2016ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಇದಕ್ಕೂ ಮುನ್ನ ಬುಧವಾರ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಖಂಡು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಖಂಡು ಅವರೊಂದಿಗೆ 11 ಶಾಸಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಒಂದು ದಿನ ಮುಂಚಿತವಾಗಿ, ಖಂಡು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಶ್ಲಾಘಿಸಿದ ಖಂಡು, ಬಿಜೆಪಿಯಲ್ಲಿ ವಿಶ್ವಾಸವಿಟ್ಟು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ತಂದಿದ್ದಕ್ಕಾಗಿ ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದರು.

ಪೆಮಾ ಖಂಡು ಕುರಿತು ಮಾಹಿತಿ

ಪೆಮಾ ಖಂಡು ಆಗಸ್ಟ್ 21, 1979 ರಂದು ತವಾಂಗ್‌ನಲ್ಲಿ ಜನಿಸಿದರು. ಚೀನಾದ ಗಡಿಯಲ್ಲಿರುವ ತವಾಂಗ್ ಜಿಲ್ಲೆಯ ಗ್ಯಾಂಗ್‌ಖಾರ್ ಗ್ರಾಮದಿಂದ ಬಂದಿರುವ ಪೆಮಾ ಖಂಡು, ಮೊನ್ಪಾ ಬುಡಕಟ್ಟಿನಿಂದ ಬಂದವರು. ಅವರು ತವಾಂಗ್‌ನ ಬೊಂಬಾದಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಇದಾದ ನಂತರ 2000ನೇ ಇಸವಿಯಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದರು. ಉನ್ನತ ಶಿಕ್ಷಣ ಮುಗಿಸಿ ರಾಜಕೀಯಕ್ಕೆ ಕಾಲಿಟ್ಟರು.

ಅವರ ತಂದೆ ದೋರ್ಜಿ ಖಂಡು ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದರು. 2005ರಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪೇಮಾ ಖಂಡು ರಾಜಕೀಯ ಪ್ರವೇಶಿಸಿದರು. ಆದರೆ, ಅವರ ತಂದೆ ದೋರ್ಜಿ ಖಂಡು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದಾಗ ಅವರ ನಿಜವಾದ ರಾಜಕೀಯ ಪ್ರಯಾಣ ಪ್ರಾರಂಭವಾಯಿತು.

ದೋರ್ಜಿ ಖಂಡು ಅವರು 2007 ರಿಂದ 2011 ರವರೆಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಇದಾದ ನಂತರ, 2011 ರಲ್ಲಿ, ಪೆಮಾ ಖಂಡು ತನ್ನ ಸ್ವಂತ ತಂದೆಯ ವಿಧಾನಸಭಾ ಕ್ಷೇತ್ರ ಮುಕ್ತೋದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದರು. ಇದಾದ ನಂತರ ಪೆಮಾ ಖಂಡು ಅವರನ್ನು ಅರುಣಾಚಲ ಪ್ರದೇಶ ಸಚಿವ ಸಂಪುಟಕ್ಕೆ ಸೇರಿಸಲಾಯಿತು. 2014 ರಲ್ಲಿ, ಮಾಜಿ ಮುಖ್ಯಮಂತ್ರಿ ನಬಮ್ ತುಕಿ ನೇತೃತ್ವದ ಸರ್ಕಾರದಲ್ಲಿ ಪೆಮಾ ಖಂಡು ನಗರಾಭಿವೃದ್ಧಿ ಸಚಿವರಾಗಿ ನೇಮಕಗೊಂಡರು. ಇದಾದ ನಂತರ ಅವರ ರಾಜಕೀಯ ಜೀವನದಲ್ಲಿ ದೊಡ್ಡ ತಿರುವು ಸಿಕ್ಕಿತ್ತು.

ಅತ್ಯಂತ ಕಿರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದ ಖಂಡು

ಅವರು 37 ನೇ ವಯಸ್ಸಿನಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಖಂಡು ಮೊದಲು, ಅಖಿಲೇಶ್ ಯಾದವ್ ಭಾರತದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದರು. ಅಖಿಲೇಶ್ ಅವರು ತಮ್ಮ 38 ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:55 am, Thu, 13 June 24

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ