Pennaiyar River Dispute : ಕರ್ನಾಟಕ-ತಮಿಳುನಾಡು ನಡುವಿನ ಜಲ ವಿವಾದ ಬಗೆಹರಿಸಲು ನೀರು ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

| Updated By: ನಯನಾ ರಾಜೀವ್

Updated on: Dec 15, 2022 | 9:47 AM

ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಪೆನ್ನಾರ್(ದಕ್ಷಿಣ ಪಿನಾಕಿನಿ) ನದಿ ನೀರು ನ್ಯಾಯಾಧೀಕರಣವನ್ನು ಮೂರು ತಿಂಗಳೊಳಗೆ ರಚಿಸುವಂತೆ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

Pennaiyar River Dispute : ಕರ್ನಾಟಕ-ತಮಿಳುನಾಡು ನಡುವಿನ ಜಲ ವಿವಾದ ಬಗೆಹರಿಸಲು ನೀರು ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ
Supreme Court
Follow us on

ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಪೆನ್ನಾರ್(ದಕ್ಷಿಣ ಪಿನಾಕಿನಿ) ನದಿ ನೀರು ನ್ಯಾಯಾಧೀಕರಣವನ್ನು ಮೂರು ತಿಂಗಳೊಳಗೆ ರಚಿಸುವಂತೆ ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಪೆನ್ನಾರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸುತ್ತಿದೆ. ಇದರ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸುತ್ತಿರುವ ಕೋರ್ಟ್​ ವಿವಾದ ಇತ್ಯರ್ಥಪಡಿಸಲು ಕೇಂದ್ರ ಮಧ್ಯಸ್ಥಿಕೆಗೆ ಸೂಚಿಸಿದೆ.

ಪೆನ್ನಾರ್ ನದಿ ಹಾಗೂ ಅದರ ಉಪನದಿಗಳಲ್ಲಿ ರಾಜ್ಯದ ಹಕ್ಕುಗಳು ಮತ್ತು ಹಿತಾಸಕ್ತಿಗಳು ಕರ್ನಾಟಕದ ಕಾರ್ಯಕಾರಿ ಕ್ರಮದಿಂದ ಅದರ ವಿವಿಧ ಕೆಲಸಗಳಿಂದ ಪೂರ್ವಾಗ್ರಹಪೀಡಿತವಾಗಿವೆ ಎಂದು ತಮಿಳುನಾಡು ವಾದಿಸಿದೆ. ಇದು 1892 ಮತ್ತು 1933ರ ಒಪ್ಪಂದಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪೆನ್ನಾರ್ ನದಿ ನೀರಿನ ವಿಚಾರದಲ್ಲಿ ಕರ್ನಾಟಕದೊಂದಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಾಧೀಕರಣ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು.
ಕಳೆದ ವಿಚಾರಣೆ ವೇಳೆ, ಕೇಂದ್ರವು ನಾಲ್ಕು ವಾರಗಳಲ್ಲಿ ನ್ಯಾಯಾಧೀಕರಣವನ್ನು ಸ್ಥಾಪಿಸುವುದಾಗಿ ಹೇಳಿತ್ತು, ಮತ್ತು ಶೀಘ್ರದಲ್ಲೇ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿತು.

ವಿವಾದದ ಕುರಿತು ಮಾಹಿತಿ: ಕರ್ನಾಟಕವು ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆಯ ಯರಗೋಳದಲ್ಲಿ ಅಣೆ ಕಟ್ಟನ್ನು ನಿರ್ಮಿಸುತ್ತಿದೆ, ಇದಕ್ಕೆ 240 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರದಿಂದ ಅನುಮತಿ ಪಡೆದಿದೆ.

ಆದರೆ ಈ ಅಣೆಕಟ್ಟು ನಿರ್ಮಾಣ ಕುರಿತು ತಮಿಳುನಾಡು ತದಾಗೆ ತೆಗೆದಿದೆ. ಅಣೆಕಟ್ಟು ನಿರ್ಮಾಣಗೊಂಡರೆ ನದಿಯ ನೈಸರ್ಗಿಕ ಹರಿವಿಗೆ ತೊಂದರೆಯಾಗಲಿದ್ದು, ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಮೇಲೆ ಪ್ರಭಾವ ಬೀರಲಿದೆ ಎಂದು ಅರ್ಜಿಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ