AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noise Pollution: ಪಟಾಕಿ ಸಿಡಿಸುವ ಮುನ್ನ ಎಚ್ಚರ; ಈ ಸಿಟಿಯಲ್ಲಿ ಶಬ್ದ ಮಾಲಿನ್ಯ ಮಾಡಿದವರಿಗೆ 1 ಲಕ್ಷ ರೂ. ದಂಡ!

Delhi Noise Pollution: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಶಬ್ದಮಾಲಿನ್ಯವನ್ನು ನಿಯಂತ್ರಿಸಲು ನಿರ್ಧರಿಸಿರುವ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ದಂಡದ ಪ್ರಮಾಣವನ್ನು ಪರಿಷ್ಕರಿಸಿದೆ. ದೆಹಲಿಯಲ್ಲಿ ಶಬ್ದ ಮಾಲಿನ್ಯ ಮಾಡುವವರಿಗೆ 1 ಲಕ್ಷ ರೂ.ವರೆಗೂ ದಂಡ ವಿಧಿಸಲು ನಿರ್ಧರಿಸಲಾಗಿದೆ.

Noise Pollution: ಪಟಾಕಿ ಸಿಡಿಸುವ ಮುನ್ನ ಎಚ್ಚರ; ಈ ಸಿಟಿಯಲ್ಲಿ ಶಬ್ದ ಮಾಲಿನ್ಯ ಮಾಡಿದವರಿಗೆ 1 ಲಕ್ಷ ರೂ. ದಂಡ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 10, 2021 | 4:44 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ವಾಯುಮಾಲಿನ್ಯದ ಕಾರಣಕ್ಕೆ ಭಾರೀ ಸುದ್ದಿಯಾಗಿತ್ತು. ದೆಹಲಿಯ ವಾಯುಮಾಲಿನ್ಯದ (Air Pollution) ಪ್ರಮಾಣ ಕಡಿಮೆಯಾಗದಿದ್ದರೆ ಅಲ್ಲಿ ಬದುಕಲು ಅಸಾಧ್ಯ ಎಂಬ ವಾತಾವರಣ ಸೃಷ್ಟಿಯಾಗಿತ್ತು. ಇಂದಿಗೂ ದೆಹಲಿಯ ವಾಯು ಗುಣಮಟ್ಟದಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ಅದರ ಜೊತೆಗೆ ಶಬ್ದ ಮಾಲಿನ್ಯವೂ (Noise Pollution) ಸೇರಿಕೊಂಡಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಶಬ್ದಮಾಲಿನ್ಯವನ್ನು ನಿಯಂತ್ರಿಸಲು ನಿರ್ಧರಿಸಿರುವ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ (DPCC) ದಂಡದ ಪ್ರಮಾಣವನ್ನು ಪರಿಷ್ಕರಿಸಿದೆ. ದೆಹಲಿಯಲ್ಲಿ ಶಬ್ದ ಮಾಲಿನ್ಯ ಮಾಡುವವರಿಗೆ 1 ಲಕ್ಷ ರೂ.ವರೆಗೂ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಪರಿಷ್ಕರಿಸಲ್ಪಟ್ಟಿರುವ ಹೊಸ ದಂಡ ನೀತಿಯ ಅನುಸಾರ, ದೆಹಲಿಯಲ್ಲಿ ಯಾರಾದರೂ ವಿನಾಕಾರಣ ಶಬ್ದ ಮಾಲಿನ್ಯ ಉಂಟುಮಾಡಿದರೆ ಅವರಿಗೆ 1 ಲಕ್ಷ ರೂ.ವರೆಗೂ ದಂಡ ವಿಧಿಸಲು ಅವಕಾಶವಿದೆ. ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದು, ಜೋರಾಗಿ ಶಬ್ದ ಉಂಟುಮಾಡುವ ವಸ್ತುಗಳನ್ನು ಬಳಸುವುದು ಮುಂತಾದ ರೀತಿಯಲ್ಲಿ ಶಬ್ದ ಮಾಲಿನ್ಯ ಮಾಡುವ ವ್ಯಕ್ತಿಗೆ ಆರಂಭಿಕವಾಗಿ 1 ಸಾವಿರ ರೂ. ದಂಡ ವಿಧಿಸಲಾಗುವುದು. ನಿಶ್ಯಬ್ದವಾಗಿರುವ ವಲಯಗಳಲ್ಲಿ ಶಬ್ದ ಮಾಲಿನ್ಯ ಮಾಡಿದವರಿಗೆ ಕನಿಷ್ಟ 3,000 ರೂ. ದಂಡ ವಿಧಿಸಲಾಗುವುದು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾತ್ರವಲ್ಲದೆ ಮದುವೆ, ಧಾರ್ಮಿಕ ಸಮಾರಂಭಗಳು, ಉತ್ಸವಗಳಲ್ಲಿ ಕೂಡ ಪಟಾಕಿ ಸಿಡಿಸುವುದು ಸಾಮಾನ್ಯವಾಗಿಬಿಟ್ಟಿದೆ. ಈ ರೀತಿ ಸಮಾರಂಭಗಳಲ್ಲಿ ಪಟಾಕಿ ಸಿಡಿಸಿದರೆ ಮೊದಲ ಬಾರಿ 10ರಿಂದ 20 ಸಾವಿರ ರೂ. ದಂಡ ವಿಧಿಸಲಾಗುವುದು. ಎರಡನೇ ಬಾರಿಯೂ ಅದೇ ಪ್ರದೇಶದಲ್ಲಿ ನಿಯಮ ಉಲ್ಲಂಘನೆ ಮಾಡಿ ಶಬ್ದ ಮಾಲಿನ್ಯಕ್ಕೆ ಕಾರಣರಾದವರಿಗೆ 40 ಸಾವಿರ ರೂ. ದಂಡ ವಿಧಿಸಲಾಗುವುದು. ಎರಡು ಬಾರಿಗಿಂತ ಹೆಚ್ಚು ಸಲ ಶಬ್ದ ಮಾಲಿನ್ಯ ಮಾಡಿದವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗುವುದು. ಹಾಗೇ, ಅವರ ಏರಿಯಾವನ್ನು ಸೀಲ್ ಮಾಡಲಾಗುವುದು.

ಈ ಪ್ರಸ್ತಾವನೆಗಳಿಗೆ ಹಸಿರು ನ್ಯಾಯಾಧಿಕರಣ (National Green Tribunal) ಕೂಡ ಒಪ್ಪಿಗೆ ಸೂಚಿಸಿದೆ. ಹೀಗಾಗಿ, ಎಲ್ಲ ವಿಭಾಗಗಳಲ್ಲೂ ಈ ನಿಯಮಗಳನ್ನು ಅಳವಡಿಸಿಕೊಂಡು, ಹೊಸ ದಂಡ ನೀತಿಯನ್ನು ಅನುಸರಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:  ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT

ಇದನ್ನೂ ಓದಿ: ಬೆಂಗಳೂರಲ್ಲಿ ಹಸಿರು ಪಟಾಕಿ ಸೃಷ್ಟಿಸಿದ ವಾಯು ಮಾಲಿನ್ಯ ಪ್ರಮಾಣ ಕಡಿಮೆ | Green crackers reduced air pollution levels in Bengaluru city

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್