ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ
Medical Oxygen Shortage: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು; ಕೋರ್ಟ್
ದೆಹಲಿ: ಕೊವಿಡ್ 19ರ ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್, ಜನರ ಜೀವ ಉಳಿಸುವುದು ಮುಖ್ಯ. ಯಾವುದೇ ಕಾರಣಕ್ಕೂ ಜನರು ಜೀವ ಕಳೆದುಕೊಳ್ಳಬಾರದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇತರ ದೇಶಗಳಿಂದ ಆಮದಾಗುತ್ತಿರುವ ಮೆಡಿಕಲ್ ಆಕ್ಸಿಜನ್ ಭಾತವನ್ನು ತಲುಪಿದೆಯೇ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಕೊವಿಡ್ಗೆ ಸಂಬಂಧಿಸಿದ ಸ್ವಯಂ ಪ್ರೇರಿತ ದೂರಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಹಂಚಿಕೆ ಮಾಡಬೇಕು. ಆಮ್ಲಜನಕ ಲಭ್ಯವಿದ್ದರೂ ಸಹ ಇತರ ಕಾರಣಗಳಿಂದ ಜನರು ಜೀವ ಕಳೆದುಕೊಳ್ಳಬಾರದು. ಇತರ ದೇಶಗಳಿಂದ ಆಮದಾಗುವ ಆಕ್ಸಿಜನ್ನ್ನು ಯುದ್ಧೋಪಾದಿಯಲ್ಲಿ ತರಿಸಿಕೊಂಡು ರಾಜ್ಯಗಳಿಗೆ ಹಂಚಿಕೆ ಮಾಡಿ ಎಂದು ನಿರ್ದೇಶಿಸಿದೆ.
ಇದೇ ವೇಳೆ ಸುಪ್ರೀಂಕೋರ್ಟ್ನಲ್ಲಿಯೂ ಕೊವಿಡ್ ಸಂಬಂಧಿತ ವಿಚಾರಣೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರತಿದಿನ ಅಗತ್ಯವಿರುವ 700 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ನ್ನು ಪೂರೈಸುವ ಕುರಿತು ಇಂದು ರಾತ್ರಿಯ ಒಳಗೆ ಖಚಿತಪಡಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಗಂಭೀರ ಸೂಚನೆ ನೀಡಿದೆ. ಈ ಮುಂಚಿನ 490 ಮೆಟ್ರಿಕ್ ಟನ್ ಆಮ್ಲಜನಕದ ಬೇಡಿಕೆ ಬದಲಾದ ಪರಿಸ್ಥಿತಿಯಲ್ಲಿ ಶೇ 133ರಷ್ಟು ಏರಿಕೆಯಾಗಿದೆ. ಹೀಗಾಗಿ 700 ಮೆಟ್ರಿಕ್ ಟನ್ ಆಕ್ಸಿಜನ್ನ್ನು ಪೂರೈಸುವ ಕುರಿತು ಖಚಿತಪಡಿಸಲು ಕೋರ್ಟ್ ತಿಳಿಸಿದೆ.
ಲಾಕ್ಡೌನ್ ಬಗ್ಗೆ ಗಮನಹರಿಸಲು ಸೂಚನೆ ನೀಡಿದೆ ಸುಪ್ರೀಂಕೋರ್ಟ್ ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್ ಭಾನುವಾರ ರಾತ್ರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.
ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್ಡೌನ್ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್ಡೌನ್ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿದೆ.
‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಅಭಿಪ್ರಾಯದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೊಕ್ಕ ಚುನಾವಣಾ ಆಯೋಗ
ಕೊವಿಡ್ ವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
(People should not lose leaves delhi high court to union govt)
Published On - 9:59 pm, Mon, 3 May 21