ತೆಲಂಗಾಣದಲ್ಲಿ ಸ್ಕ್ಯಾಮ್​ಗ್ರೆಸ್ ತಿರಸ್ಕರಿಸಿ: ಕಾಂಗ್ರೆಸ್ ವಿರುದ್ಧ ಕೆಟಿ ರಾಮರಾವ್ ವಾಗ್ದಾಳಿ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಖರೀದಿಸಲು ಕಾಂಗ್ರೆಸ್ ಪಕ್ಷವು ಕೋಟ್ಯಂತರ ರೂಪಾಯಿಗಳನ್ನು ತೆಲಂಗಾಣಕ್ಕೆ ಸಾಗಿಸುತ್ತಿದೆ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಆರೋಪಿಸಿದ್ದಾರೆ. ಡಿಸೆಂಬರ್ 3 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಲಿರುವ ತೆಲಂಗಾಣದಲ್ಲಿ ಮತಗಳನ್ನು ಖರೀದಿಸಲು ಬೌದ್ಧಿಕವಾಗಿ ದಿವಾಳಿಯಾದ ಕಾಂಗ್ರೆಸ್, ಕರ್ನಾಟಕದಿಂದ ಕೋಟ್ಯಂತರ ರೂಪಾಯಿಗಳನ್ನು ಪಡೆಯುತ್ತಿದೆ ಎಂದು ಆರೋಪಿಸಿದರು.

ತೆಲಂಗಾಣದಲ್ಲಿ ಸ್ಕ್ಯಾಮ್​ಗ್ರೆಸ್ ತಿರಸ್ಕರಿಸಿ: ಕಾಂಗ್ರೆಸ್ ವಿರುದ್ಧ ಕೆಟಿ ರಾಮರಾವ್ ವಾಗ್ದಾಳಿ
ಕೆಟಿ ರಾಮರಾವ್
Follow us
Rakesh Nayak Manchi
|

Updated on:Oct 14, 2023 | 2:37 PM

ಹೈದರಾಬಾದ್, ಅ.14: ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಮತ್ತು ಪತಿ ಅಂಬಿಕಾಪತಿ ಮತ್ತು ಸಂಬಂಧಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಪತ್ತೆಯಾದ 42 ಕೋಟಿ ರೂಪಾಯಿ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಳಕೆ ಮಾಡಲು ಇಟ್ಟಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ (KT Rama Rao), ತೆಲಂಗಾಣದಲ್ಲಿ “ಸ್ಕಾಮ್‌ಗ್ರೆಸ್” ಅನ್ನು ತಿರಸ್ಕರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಖರೀದಿಸಲು ಕಾಂಗ್ರೆಸ್ ಪಕ್ಷವು ಕೋಟ್ಯಂತರ ರೂಪಾಯಿಗಳನ್ನು ತೆಲಂಗಾಣಕ್ಕೆ ಸಾಗಿಸುತ್ತಿದೆ ಎಂದು ಕೆಟಿ ರಾಮರಾವ್ ಆರೋಪಿಸಿದ್ದಾರೆ. 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಬಿಜೆಪಿ ಸರ್ಕಾರವನ್ನು ಸೋಲಿಸಿದ ಕಾಂಗ್ರೆಸ್, ಎಂಟು ಕೋಟಿ ರೂ.ವನ್ನು ಟಿಪಿಸಿಸಿ ಮುಖ್ಯಸ್ಥ ಎ.ರೇವಂತ್ ರೆಡ್ಡಿಗೆ ಕಳುಹಿಸಿದ್ದು, ಉಳಿದ ನಗದನ್ನು ತೆಲಂಗಾಣಕ್ಕೆ ಮುಂದಿನ ಚುನಾವಣೆಯಲ್ಲಿ ಖರ್ಚು ಮಾಡಲು ಕಾಂಗ್ರೆಸ್‌ಗೆ ಕಳುಹಿಸಬೇಕಿತ್ತು. ಆದರೆ ಇದನ್ನು ಬೆಂಗಳೂರಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ರಾಮರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಂಡಲ್‌ಗಳಷ್ಟು ಹಣ ಯಾರದ್ದು? ಐಟಿ ರೇಡ್‌ ಬೆನ್ನಲ್ಲೇ ಹುಟ್ಟಿಕೊಂಡ ರಾಜಕೀಯ ನಂಟು!

ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿದ ರಾಮರಾವ್, ತೆಲಂಗಾಣದಲ್ಲಿ “ಸ್ಕಾಮ್‌ಗ್ರೆಸ್” ಅನ್ನು ತಿರಸ್ಕರಿಸುವಂತೆ ಜನರಲ್ಲಿ ಮನವಿ ಮಾಡಿದರು. ಡಿಸೆಂಬರ್ 3 ರಂದು ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಲಿರುವ ತೆಲಂಗಾಣದಲ್ಲಿ ಮತಗಳನ್ನು ಖರೀದಿಸಲು ಬೌದ್ಧಿಕವಾಗಿ ದಿವಾಳಿಯಾದ ಕಾಂಗ್ರೆಸ್, ಕರ್ನಾಟಕದಿಂದ ಕೋಟ್ಯಂತರ ರೂಪಾಯಿಗಳನ್ನು ಪಡೆಯುತ್ತಿದೆ ಎಂದು ಆರೋಪಿಸಿದರು.

ಪ್ರದೇಶ ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ವೋಟ್ ಫಾರ್ ನೋಟ್ ಹಗರಣ ಪ್ರಕರಣದಲ್ಲಿ ಸಿಕ್ಕಿಬಿದ್ದವನು ಮತ್ತು ಈಗ ಈ ಕ್ರಿಮಿನಲ್ ಈಗ ದರೋಡೆಕೋರರ ಗುಂಪನ್ನು ಮುನ್ನಡೆಸುತ್ತಿರುವುದರಿಂದ, ಇದು ತುಂಬಾ ನಿರೀಕ್ಷಿತವಾಗಿತ್ತು ಎಂದಿದ್ದಾರೆ.

ಅದೇ ರೀತಿ, ಬಿಜೆಪಿಯ ಹಿರಿಯ ನಾಯಕ ಪಿ.ಮುರಳೀಧರ್ ರಾವ್ ಮಾತನಾಡಿ, ತೆಲಂಗಾಣಕ್ಕೆ ಕಳುಹಿಸಲಿಟ್ಟಿದ್ದ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ ​​​ಅಶ್ವತ್ಥಮ್ಮ, ಪತಿ ಆರ್​.ಅಂಬಿಕಾಪತಿ ಮತ್ತು ​ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಕಂತೆ ಕಂತೆ ಹಣ ಪತ್ತೆಯಾಗಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sat, 14 October 23

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು