ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ

ತಿರುಚಿರಾಪಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ
ಜೆಪಿ ನಡ್ಡಾ
Follow us
ನಯನಾ ರಾಜೀವ್
|

Updated on: Apr 07, 2024 | 2:53 PM

ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ. ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ, ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ಬಿಜೆಪಿ ಮೈತ್ರಿಕೂಟ ಹಾಗೂ ನಾಮ್ ತಮಿಳರ್ ಪಕ್ಷದ ನಡುವೆ ಚತುಚ್ಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸಿ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದರು.

2024ರ ಲೋಕಸಭೆ ಚುನಾವಣೆಗಾಗಿ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ಪಡೆಯುವುದಾಗಿ ಜೆಪಿ ನಡ್ಡಾ ಹೇಳಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡಿನ ಅರಿಯಲೂರಿನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ನಡ್ಡಾ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ದೀರ್ಘ ಪ್ರಗತಿ ಸಾಧಿಸಿದೆ ಎಂದರು.

ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ತಮಿಳುನಾಡು ಜನರಿಗೆ ನಡ್ಡಾ ಕರೆ ನೀಡಿದರು.

ಜೆಪಿ ನಡ್ಡಾ ಪತ್ನಿ ಮಲ್ಲಿಕಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ, ಇಬ್ಬರ ಬಂಧನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆಯಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿನ ಸರ್ವೀಸ್​ ಸೆಂಟರ್​ನಿಂದ ಕಾರು ಕಳುವಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿ ಬಣ್ಣದ ಫಾರ್ಚುನರ್ ಎಸ್‌ಯುವಿಯನ್ನು ಮಾರ್ಚ್ 19 ರಂದು ಸರ್ವೀಸ್ ಸೆಂಟರ್‌ಗೆ ತೆಗೆದುಕೊಂಡು ಹೋದಾಗ ಕಳ್ಳತನವಾಗಿತ್ತು.

ಮತ್ತಷ್ಟು ಓದಿ: JP Nadda in Belagavi: ಪಾಕ್ ಪರ ಘೋಷಣೆ ಕೂಗಿದವರ ಬಗ್ಗೆ ಖರ್ಗೆ, ರಾಹುಲ್ ಯಾಕೆ ಮೌನವಾಗಿದ್ದಾರೆ, ಜೆಪಿ ನಡ್ಡಾ ಪ್ರಶ್ನೆ

ಮಾರ್ಚ್ 19 ರಂದು, ಕಾರು ಚಾಲಕ ಜೋಗಿಂದರ್ ಸಿಂಗ್ ಅವರು ದೂರು ನೀಡಿದ್ದರು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನದ ಪತ್ತೆಗೆ ತನಿಖೆ ಆರಂಭಿಸಿದರು. ಇಬ್ಬರು ಬಂಧಿತ ವ್ಯಕ್ತಿಗಳನ್ನು ಶಾಹಿದ್ ಮತ್ತು ಶಿವಾಂಗ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಫರಿದಾಬಾದ್ ಬಳಿಯ ಬಧಕಲ್ ನಿವಾಸಿಗಳು.

ಈ ಇಬ್ಬರು ಕ್ರೆಟಾ ಕಾರಿನಲ್ಲಿ ಗೋವಿಂದಪುರಿಗೆ ಬಂದಿದ್ದರು, ಬಳಿಕ ಅವರು ಬಧಕಲ್​ಗೆ ಕೊಂಡೊಯ್ದು ನಂತರ ಕದ್ದ ಕಾರಿನ ನಂಬರ್​ ಪ್ಲೇಟ್​ ಬದಲಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ