ಕುಸಿಯುತ್ತಿರುವ ಆರ್ಥಿಕತೆ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ಕಡಿತ?
ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ. ‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ […]
ಕುಸಿಯುತ್ತಿರುವ ಆರ್ಥಿಕತೆಯನ್ನ ಮೇಲೆತ್ತಲು ವೈಯಕ್ತಿಕ ಆದಾಯ ತೆರಿಗೆ ದರ ಕಡಿತಗೊಳಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ವೈಯಕ್ತಿಕ ಆದಾಯ ತೆರಿಗೆಯ ಕಡಿತ ನಾವು ನೋಡುತ್ತಿರುವ ಹಲವು ವಿಷಯಗಳಲ್ಲಿ ಒಂದು ಎಂದು ಹೇಳಿದ್ದಾರೆ. ಇದು ನಾನಾ ಅನುಮಾನಗಳನ್ನ ಹುಟ್ಟುಹಾಕಿದೆ.
‘ಶರದ್ ಬೆಂಬಲ ಇದೆ ಎಂದಿದ್ದರು’ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲ ನನಗೆ ಇದೆ ಅಂತ ಅಜಿತ್ ಪವಾರ್ ಹೇಳಿದ್ದರು. ಈ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಅಂತ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಆಸ್ಪತ್ರೆ ಧ್ವಂಸ ಮಾಡಿದ ರೋಗಿ ಸಂಬಂಧಿಕರು ಉತ್ತರಪ್ರದೇಶ ರಾಂಪುರ್‌ದ ಜಿಲ್ಲಾ ಆಸ್ಪತ್ರೆಯ ತುರ್ತು ವಾರ್ಡ್‌ನ್ನ ರೋಗಿಯ ಸಂಬಂಧಿಕರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಇದ್ರಿಂದ ರೋಗಿಯೊಬ್ಬರನ್ನ ಬೇರೆ ಆಸ್ಪತ್ರೆ ದಾಖಲಿಸಿ, ನಂತ್ರ ಬಂದ ರೋಗಿಯ ಸಂಬಂಧಿಕರು ಆಸ್ಪತ್ರೆಯನ್ನ ಧ್ವಂಸ ಮಾಡಿದ್ದಾರೆ.