AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಶೀಲ್ಡ್ ಲಸಿಕೆಯ ಅಪಾಯಕಾರಿ ಅಂಶ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸುಪ್ರೀಂಗೆ ಅರ್ಜಿ

ಜನರಲ್ಲಿ ಆತಂಕ ಮೂಡಿಸಿರುವ ಕೋವಿಶೀಲ್ಡ್ ಲಸಿಕೆಯ ಅಪಾಯಕಾರಿ ಅಂಶಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಮಾಜಿ ಮುಖ್ಯ ನ್ಯಾಯಮೂರ್ತಿಗಳು ಅಧ್ಯಯನದ ಮೇಲ್ವಿಚಾರಣೆ ಮಾಡಲು ಅರ್ಜಿದಾರರು ಕೋರಿದ್ದಾರೆ. ಈ ಅರ್ಜಿಯಲ್ಲಿ ಯಾವೆಲ್ಲ ವಿಚಾರಗಳನ್ನು ತಿಳಿಸಲಾಗಿದೆ ಇಲ್ಲಿದೆ ಮಾಹಿತಿ.

ಕೋವಿಶೀಲ್ಡ್ ಲಸಿಕೆಯ ಅಪಾಯಕಾರಿ ಅಂಶ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸುಪ್ರೀಂಗೆ ಅರ್ಜಿ
ಅಕ್ಷಯ್​ ಪಲ್ಲಮಜಲು​​
|

Updated on: May 01, 2024 | 4:46 PM

Share

ಕೋವಿಶೀಲ್ಡ್ ಲಸಿಕೆಯನ್ನು (CoviShield vaccine) ಅಧ್ಯಯನ ಮಾಡಲು ಮತ್ತು ಅದರ ಅಡ್ಡಪರಿಣಾಮಗಳು, ಅಪಾಯಕಾರಿ ಅಂಶಗಳನ್ನು ಪರಿಶೀಲಿಸಲು ದೆಹಲಿಯ ಏಮ್ಸ್‌ನಿಂದ ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಾಜಿ ಮುಖ್ಯ ನ್ಯಾಯಮೂರ್ತಿಗಳು ಅಧ್ಯಯನದ ಮೇಲ್ವಿಚಾರಣೆ ಮಾಡಲು ಅರ್ಜಿದಾರರು ಕೋರಿದ್ದಾರೆ. ಕೋವಿಡ್ 19 ರ ಸಮಯದಲ್ಲಿ ನೀಡಲಾದ ವ್ಯಾಕ್ಸಿನೇಷನ್​​ನಿಂದ ಯಾರಾದರೂ ಅಂಗವಿಕಲರಾಗಿದ್ದಾರೆ ಹಾಗೂ ಇದರಿಂದ ಮರಣ ಹೊಂದಿದ್ದರೆ ಅವರಿಗೆ ಕೇಂದ್ರ ಸರ್ಕಾರ ಪರಿಹಾರವನ್ನು ನೀಡಬೇಕು ಎಂದು ಈ ಅರ್ಜಿಯಲ್ಲಿ ತಿಳಿಸಲಾಗಿದೆ. ಇದರ ಜತೆಗೆ ಕೇಂದ್ರ ಸರ್ಕಾರ ಈ ಬಗ್ಗೆ ಒಂದು ನಿರ್ದೇಶನವನ್ನು ನೀಡಬೇಕು ಎಂದು ಹೇಳಿದೆ.

ಕೋವಿಶೀಲ್ಡ್ ವಿವಾದ

ಯುಕೆ ಮೂಲದ ಫಾರ್ಮಾಸ್ಯುಟಿಕಲ್ ಕಂಪನಿ ಅಸ್ಟ್ರಾಜೆನೆಕಾ ತಾನು ತಯಾರಿಸಿದ ಕೋವಿಡ್ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಡ್ಡ ಪರಿಣಾಮಗಳು ಕಾಣಿಸಿಕೊಳ್ಳಬಹುದು. ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಇದು ಉಂಟುಮಾಡಬಹುದು ಎಂದು ಹೇಳಿ, ಇದೀಗ ಆತಂಕದ ಜತೆಗೆ ಚರ್ಚೆ ಕಾರಣವಾಗಿದೆ.

ಅಸ್ಟ್ರಾಜೆನೆಕಾ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಾಹಯದಿಂದ ಅಭಿವೃದ್ಧಿಪಡಿಸಲಾದ ಈ ಲಸಿಕೆಯು ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಉಂಟುಮಾಡಬಹುದು ಎಂದು ಲಂಡನ್ ಹೈಕೋರ್ಟ್‌ಗೆ ಸಲ್ಲಿಸಿದ ಕಾನೂನು ದಾಖಲೆಯಲ್ಲಿ ಅಸ್ಟ್ರಾಜೆನೆಕಾ ಹೇಳಿರುವುದಾಗಿ ಡೈಲಿ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ:  ಕೋವಿಶೀಲ್ಡ್ ಪಡೆದ 10 ಲಕ್ಷ ಜನರಲ್ಲಿ ಏಳೆಂಟು ಮಂದಿಗೆ ಮಾತ್ರ ಬ್ಲಡ್​ಕ್ಲಾಟಿಂಗ್ ರಿಸ್ಕ್: ಭಯ ನಿವಾರಿಸಲು ವಿಜ್ಞಾನಿ ಡಾ. ರಮಣ್ ಗಂಗಾಖೇಡ್ಕರ್ ಯತ್ನ

ಅದೇ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ತಯಾರಿಸಿದೆ. ಇದನ್ನು ಭಾರತದಲ್ಲಿ ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಇನ್ನು ಈ ಲಸಿಕೆಯನ್ನು ತೆಗೆದುಕೊಂಡು ಸಾವನ್ನಪ್ಪಿದ ಮಹಿಳೆಯ ಪೋಷಕರು SII ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ಲಸಿಕೆ ಬಹಳ ಅಪರೂಪದ ಸಂದರ್ಭಗಳಲ್ಲಿ TTS ಗೆ ಕಾರಣವಾಗಬಹುದು ಎಂದು ಒಪ್ಪಿಕೊಳ್ಳಲಾಗಿದೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಅಸ್ಟ್ರಾಜೆನೆಕಾ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಯಾರಿಗಾದರೂ ದುಃಖ ಇರುತ್ತದೆ. ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಆ ರೋಗಿಗೆ ಈ ಲಸಿಕೆ ಪರಿಣಾಮವನ್ನು ಉಂಟು ಮಾಡುತ್ತದೆ ಎಂಬ ಬಗ್ಗೆ ಆತಂಕ ಬೇಡ. ನಮ್ಮ ರೋಗಿಗಳ ಸುರಕ್ಷತೆಯು ನಮ್ಮ ಅತ್ಯುನ್ನತ ಆದ್ಯತೆಯಾಗಿದೆ ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!