AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price: ಗ್ರಾಹಕರು ಕೊಂಚ ನಿರಾಳ.. ಪೆಟ್ರೋಲ್ ದರದಲ್ಲಿ 18 ಪೈಸೆ ಇಳಿಕೆ!

Petrol Diesel Rate Today in Bangalore: ಈ ವರ್ಷದಲ್ಲಿ ಮೊದಲ ಬಾರಿಗೆ ಪೆಟ್ರೋಲ್​, ಡೀಸೆಲ್​ ದರ ಇಳಿಕೆ ಕಂಡಿದೆ. ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ.

Petrol Diesel Price: ಗ್ರಾಹಕರು ಕೊಂಚ ನಿರಾಳ.. ಪೆಟ್ರೋಲ್ ದರದಲ್ಲಿ 18 ಪೈಸೆ ಇಳಿಕೆ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Mar 25, 2021 | 11:28 AM

Share

ಬೆಂಗಳೂರು: ಮಾರ್ಚ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲ್ಲ. ಕಳೆದ ಫೆಬ್ರವರಿ ತಿಂಗಳ 27ನೇ ತಾರೀಕು ಶನಿವಾರ ಪ್ರತಿ ಲೀಟರ್​ ಪೆಟ್ರೋಲ್​ ದರ 24 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 15 ಪೈಸೆ ಏರಿಕೆಯ ನಂತರದಲ್ಲಿ ದರ ವ್ಯತ್ಯಾಸ ಕಂಡು ಬಂದಿರಲಿಲ್ಲ. ಗರಿಷ್ಠ ದಾಖಲೆ ಕಂಡಿದ್ದ ಇಂಧನ ದರವನ್ನು ನೋಡುತ್ತಿದ್ದ ಗ್ರಾಹಕರಿಗೆ ದರ ಇಳಿಕೆಯತ್ತ ಮುಖ ಮಾಡುವುದು ಯಾವಾಗ ಎಂಬ ಪ್ರಶ್ನೆ ಎದುರಾಗಿತ್ತು.  ಈ ನಿಟ್ಟಿನಲ್ಲಿ ಗ್ರಾಹಕರಿಗೆ ಇಂದು(ಮಾರ್ಚ್ 24) ಖುಷಿ ತರುವ ಸುದ್ದಿಯೊಂದು ಎದುರಿಗಿದೆ. ಅದೇನೆಂದರೆ, ಪೆಟ್ರೋಲ್​ ದರ 18 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 17 ಪೈಸೆ ಇಳಿಕೆ ಕಂಡಿದೆ. ಇದೀಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 94.04 ರೂಪಾಯಿಗೆ ಇಳಿಕೆಯಾಗಿದೆ. ಡೀಸೆಲ್ ದರ 86.37 ರೂಪಾಯಿಗೆ ಇಳಿದಿದೆ.

ಅಂತರಾಷ್ಟ್ರೀಯ ಕಚ್ಚಾ ತೈಲ ದರ ಸತತ 15 ದಿನಗಳಿಂದ ಇಳಿಕೆಯ ಹಾದಿಯಲ್ಲಿದೆ. ಈ‌ ವರ್ಷ ಇದೇ ಮೊದಲ‌ ಬಾರಿಗೆ ‌ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯ ಕಾರಣದಿಂದ ಪೆಟ್ರೋಲ್​ ದರ ಇಳಿಕೆ ಕಂಡಿದೆ. ಕಚ್ಚಾತೈಲ ದರ ಬ್ಯಾರೆಲ್​ಗೆ 71 ರಿಂದ 63 ಡಾಲರ್​ಗೆ ಕುಸಿತ ಕಂಡಿದೆ. ಜೊತೆಗೆ ಸೌದಿ ಅರೇಬಿಯಾ ಬದಲು ಆಮೆರಿಕಾದಿಂದ ತೈಲ ಅಮದಿಗೆ ಭಾರತ ಯೋಚಿಸುತ್ತಿತ್ತು. ಪಶ್ಚಿಮದ ಬಂಗಾಳದ ಚುನಾವಣಾ ಮತದಾನ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜನರ ಆಕ್ರೋಶ ತಣಿಸಲು ಕೇಂದ್ರ ಸಣ್ಣ ಹೆಜ್ಜೆ‌ ಮುಂದಿಟ್ಟಿದೆ.

ದೆಹಲಿಯಲ್ಲಿ ಮೊದಲು ಪ್ರತಿ ಲೀಟರ್​ ಪೆಟ್ರೋಲ್​ ದರ 91.17 ರೂಪಾಯಿಗೆ ಮಾರಾಟವಾಗುತ್ತಿತ್ತು. ಇದೀಗ 18 ಪೈಸೆ ಇಳಿಕೆಯ ನಂತರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ ದರ 90.99 ರೂಪಾಯಿ ಆಗಿದೆ. ಹಾಗೆಯೇ ಡೀಸೆಲ್ ದರವನ್ನು ಗಮನಿಸಿದಾಗ ಈ ಹಿಂದೆ ಪ್ರತಿ ಲೀಟರ್​ ಡೀಸೆಲ್​ 81.47 ರೂಪಾಯಿಗೆ ಮಾರಾಟವಾಗುತ್ತಿತ್ತು. ಇದೀಗ ಡೀಸೆಲ್ ದರದಲ್ಲಿ 17 ಪೈಸೆ ಇಳಿಕೆಯ ನಂತರ 81.30 ರೂಪಾಯಿ ಆಗಿದೆ. ಹಾಗೆಯೇ ದರ ಇಳೀಕೆಯ ನಂತರ ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್, 97.40 ರೂಪಾಯಿ ಇದೆ. ಹಾಗೂ ಡೀಸೆಲ್ ಪ್ರತಿ ಲೀಟರಿಗೆ 88.42 ರೂಪಾಯಿಗೆ ಮಾರಾಟವಾಗುತ್ತಿದೆ.

ಪೆಟ್ರೋಲ್, ಡೀಸೆಲ್ ದರ ಶ್ರೀಗಂಗನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 101.84 ರೂಪಾಯಿಗೆ ಮಾರಾಟವಾಗುತ್ತಿತ್ತು. ಹಾಗೂ ಡೀಸೆಲ್ಅನ್ನು​ ಪ್ರತಿ ಲೀಟರಿಗೆ 93.77 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದರು. ಅನುಪ್ಪುರಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ 101.59 ರೂಪಾಯಿಗೆ ಮಾರಾಟವಾಗುತ್ತಿತ್ತು. ಮತ್ತು ಡೀಸೆಲ್ ಪ್ರತಿ ಲೀಟರಿಗೆ 91.97 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದರು.

ಪೆಟ್ರೋಲ್ ದರ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ವ್ಯತ್ಯಾಸವಿರುತ್ತದೆ. ಹಾಗಿದ್ದಾಗ ಯಾವ ಯಾವ ದೇಶಗಳಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಕ್ಕೆ ಮಾರಾಟವಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದೀರಿ ಎಂದಾದರೆ ಇಲ್ಲಿದೆ ವಿವರ.

ವಿವಿಧ ನಗರದ ಪೆಟ್ರೋಲ್​ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ:

https://tv9kannada.com/business/diesel-price-today.html

Published On - 10:47 am, Wed, 24 March 21

Follow Us
shruti hegde
shruti hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್