AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ನೋಡಿ

Petrol Price | Diesel Price, 12.05.2022: ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ.

Petrol Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 12, 2022 | 9:08 AM

Share

Petrol Diesel Price Today: ದೇಶದಲ್ಲಿ ಈಗಾಗಲೇ ಇಂಧನ ದರ (Fuel Price) ಏರಿಕೆಯಾಗಿದೆ. ಇದಕ್ಕೆ ಪ್ರಮುಖ ಕಾರಣ ಉಕ್ರೇನ್- ರಷ್ಯಾ ನಡುವಿನ ಯುದ್ಧ. ಯುದ್ಧದ ಪರಿಣಾಮ ಮಾರ್ಚ್ 22ರಿಂದ ನಿರಂತರವಾಗಿ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಸದ್ಯ ಹೆಚ್ಚು ಕಡಿಮೆ 1 ತಿಂಗಳಿನಿಂದ ಪೆಟ್ರೋಲ್ (Petrol Price), ಡೀಸೆಲ್ (Diesel Price) ದರ ಸ್ಥಿರವಾಗಿದೆ. ಇಂದು (ಗುರುವಾರ, ಮೇ 12, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ನಾಪತ್ತೆಯಾಗಿರುವ ಪಿಎಸ್​ಐ ಅಭ್ಯರ್ಥಿಗಳಿಗಾಗಿ ಸಿಐಡಿ ಶೋಧ: ಕಳೆದ 1ತಿಂಗಳಿಂದ ಅಭ್ಯರ್ಥಿ ಶಾಂತಿಬಾಯಿ ನಾಪತ್ತೆ

Published On - 9:07 am, Thu, 12 May 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ