AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಭವನ ಆವರಣಕ್ಕೆ ಪೆಟ್ರೋಲ್ ಬಾಂಬ್ ಎಸೆತ; ಆರೋಪಿ ಬಂಧನ

ಇಂದು ರಾಜಭವನದ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದ್ದು, ಇದು ತಮಿಳುನಾಡಿನ ನಿಜವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಡಿಎಂಕೆ ಜನರ ಗಮನವನ್ನು ಅತ್ಯಲ್ಪ ಆಸಕ್ತಿಯ ವಿಷಯಗಳತ್ತ ತಿರುಗಿಸುವಲ್ಲಿ ನಿರತವಾಗಿದ್ದರೆ, ಅಪರಾಧಿಗಳು ಬೀದಿಗಿಳಿದಿದ್ದಾರೆ ಎಂದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ.

ತಮಿಳುನಾಡು ರಾಜಭವನ ಆವರಣಕ್ಕೆ ಪೆಟ್ರೋಲ್ ಬಾಂಬ್ ಎಸೆತ; ಆರೋಪಿ ಬಂಧನ
ಆರೋಪಿ ವಿನೋದ್
ರಶ್ಮಿ ಕಲ್ಲಕಟ್ಟ
|

Updated on:Oct 25, 2023 | 6:11 PM

Share

ಚೆನ್ನೈ ಅಕ್ಟೋಬರ್ 25: ದುಷ್ಕರ್ಮಿಯೊಬ್ಬ ಬುಧವಾರ ಮಧ್ಯಾಹ್ನ ತಮಿಳುನಾಡು (Tamil Nadu) ರಾಜಭವನದ (Raj Bhavan) ಮುಖ್ಯ ಗೇಟ್ ಬಳಿ ಪೆಟ್ರೋಲ್ ಬಾಂಬ್‌ (Petrol bomb) ಎಸೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ. ‘ಕರುಕ್ಕ’ ವಿನೋದ್‌ ಎಂಬಾತನ್ನು ತಕ್ಷಣ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಡಿಎಂಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ.

ಇಂದು ರಾಜಭವನದ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದ್ದು, ಇದು ತಮಿಳುನಾಡಿನ ನಿಜವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಡಿಎಂಕೆ ಜನರ ಗಮನವನ್ನು ಅತ್ಯಲ್ಪ ಆಸಕ್ತಿಯ ವಿಷಯಗಳತ್ತ ತಿರುಗಿಸುವಲ್ಲಿ ನಿರತವಾಗಿದ್ದರೆ, ಅಪರಾಧಿಗಳು ಬೀದಿಗಿಳಿದಿದ್ದಾರೆ. ಫೆಬ್ರವರಿ 2022 ರಲ್ಲಿ ಚೆನ್ನೈನಲ್ಲಿರುವ ತಮಿಳುನಾಡು ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿದ ಅದೇ ವ್ಯಕ್ತಿ ಇಂದು ರಾಜಭವನದ ಮೇಲಿನ ದಾಳಿಗೆ ಹೊಣೆಗಾರನಾಗಿದ್ದಾನೆ. ಈ ನಿರಂತರ ದಾಳಿಗಳು ಡಿಎಂಕೆ ಸರ್ಕಾರವು ಈ ದಾಳಿಯನ್ನು ಪ್ರಾಯೋಜಿಸುತ್ತಿದೆ ಎನ್ನುವ ಸಂದೇಹ ಹುಟ್ಟುಹಾಕಿದೆ. ಎಂಕೆ ಸ್ಟಾಲಿನ್ ಅವರು ಎಂದಿನಂತೆ ಮುಂದಿನ ತಿರುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಮಧ್ಯಾಹ್ನ 2:45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕರುಕ್ಕ ವಿನೋದ್ ಎಂದು ಗುರುತಿಸಲಾದ ವ್ಯಕ್ತಿ ರಾಜಭವನದ ಮುಖ್ಯ ಗೇಟ್‌ಗೆ ಎರಡು ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾನೆ. 2022 ರಲ್ಲಿ, ಚೆನ್ನೈನಲ್ಲಿರುವ ಬಿಜೆಪಿ ಕಚೇರಿಗೆ ಪೆಟ್ರೋಲ್ ಬಾಂಬ್ ಎಸೆದಿದ್ದಕ್ಕಾಗಿ ವಿನೋದ್  ನ್ನು ಬಂಧಿಸಲಾಗಿದ್ದು ಕೇವಲ ಮೂರು ದಿನಗಳ ಹಿಂದೆ ಬಿಡುಗಡೆ ಮಾಡಲಾಯಿತು.

ಸೈದಾಪೇಟೆ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್‌ಗಳಲ್ಲಿ ಪೆಟ್ರೋಲ್ ಕದ್ದ ವಿನೋತ್, ಬಳಿಕ ರಾಜಭವನದತ್ತ ನಡೆದುಕೊಂಡು ಹೋಗಿ ಎರಡು ಬಾಟಲಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮುಖ್ಯ ಗೇಟ್‌ಗೆ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:  ಮಂಜೇಶ್ವರ ಚುನಾವಣಾ ಲಂಚ ಪ್ರಕರಣ: ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್‌ಗೆ ಜಾಮೀನು

ಮುಖ್ಯ ಗೇಟ್‌ನಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ತಂಡವು ಎರಡು ಪೆಟ್ರೋಲ್ ಬಾಂಬ್‌ಗಳನ್ನು ಎಸೆಯುವ ಮೊದಲು ಅವರನ್ನು ತಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Wed, 25 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ