Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ

Petrol Diesel Rate: ಪೆಟ್ರೋಲ್​ ಮತ್ತು ಡೀಸೆಲ್​ ದರದಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ. ಪೆಟ್ರೋಲ್​, ಡೀಸೆಲ್​ ದರ ಎಷ್ಟಕ್ಕೆ ಮಾರಾಟವಾಗುತ್ತಿದೆ? ಭಾರತದ ವಿವಿಧ ನಗರಗಳಲ್ಲಿ ದರ ಹೇಗಿದೆ? ಎಂಬುದರ ಮಾಹಿತಿ ಇಲ್ಲಿದೆ.

Petrol Diesel Price | ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ
ಸಾಂದರ್ಭಿಕ ಚಿತ್ರ
Follow us
sandhya thejappa
| Updated By: shruti hegde

Updated on:Feb 28, 2021 | 9:57 AM

ಬೆಂಗಳೂರು: ದಿನ ಸಾಗುತ್ತಿದ್ದಂತೆ ಪೆಟ್ರೋಲ್, ಡೀಸೆಲ್ ದರವೂ ಒಂದೇ ಸಮನೆ ಏರುತ್ತಲೇ ಇದೆ. ಮೂರು ದಿನಗಳಿಂದ ಸ್ಥಿರತೆ ಕಾಪಾಡಿಕೊಂಡಿದ್ದ ಪೆಟ್ರೋಲ್, ಡೀಸೆಲ್ ದರ ನಿನ್ನೆ ಏರಿಕೆ ಕಂಡಿತ್ತು. ಪೆಟ್ರೋಲ್ ದರದಲ್ಲಿ 24 ಪೈಸೆ ಹಾಗೂ ಡೀಸೆಲ್ ದರ 15 ಪೈಸೆ ಏರಿಕೆಯಾಗಿತ್ತು. ಇದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರಿಗೆ 91.17 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರಿಗೆ 81.47 ರೂಪಾಯಿ ಏರಿಕೆ ಕಂಡಿತ್ತು. ಇಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದರ ಏರಿಕೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿ  ಹಾಗೂ ಡೀಸೆಲ್ ಪ್ರತಿ ಲೀಟರಿಗೆ 86.37 ರೂಪಾಯಿಗೆ ಮಾರಾಟವಾಗುತ್ತಿದೆ.

ಭಾರತದ ವಿವಿಧ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ: ಕೊಲ್ಕತ್ತದಲ್ಲಿ ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರ 91.35 ರೂಪಾಯಿಗೆ ಮಾರಾಟವಾಗುತ್ತಿದೆ. ನಿನ್ನೆ ಕೂಡಾ ಇದೇ ದರದಲ್ಲಿ ಪೆಟ್ರೋಲ್​ ಮಾರಾಟವಾಗಿತ್ತು. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 97.57 ರೂಪಾಯಿ, ಚೆನ್ನೈ ಪ್ರತಿ ಲೀಟರ್​ಗೆ 93.11 ರೂಪಾಯಿ, ನೋಯ್ಡಾ 89.36, ಬೆಂಗಳೂರಿನಲ್ಲಿ 94.22 ರೂಪಾಯಿ, ಪಾಟ್ನಾದಲ್ಲಿ 93,66 ರೂಪಾಯಿ, ತಿರುವಂತಪುರಂನಲ್ಲಿ 92.70 ರೂಪಾಯಿ ಹಾಗೂ ಜೈಪುರದಲ್ಲಿ 97.68 ರೂಪಾಯಿಗೆ ಪೆಟ್ರೋಲ್​ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 97.57 ಏರಿಕೆಯಾಗಿದ್ದು, ಡೀಸೆಲ್ ದರ 15 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 88.60 ರೂ. ಗೆ ಮಾರಾಟವಾಗಿತ್ತು. ಇಂದೂ ಕೂಡಾ ಅದೇ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಇದೇ ರೀತಿ ಏರಿಕೆಯತ್ತ ಪೆಟ್ರೋಲ್​ ದರ ಸಾಗಿದರೆ ಮುಂಬೈ ಕೂಡಾ ಶತಕ ಬಾರಿಸುವಲ್ಲಿ ಯಾವುದೇ ಸಂದೇಹವಿಲ್ಲ.

ಭಾರತದ ವಿವಿಧ ನಗರದಲ್ಲಿನ ಪ್ರತಿ ಲೀಟರ್ ಡೀಸೆಲ್​ ದರ: ದೆಹಲಿಯಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 81.47 ರೂಪಾಯಿ, ಕೊಲ್ಕತ್ತದಲ್ಲಿ 84.35 ರೂಪಾಯಿ, ಮುಂಬೈನಲ್ಲಿ 88.60 ರೂಪಾಯಿ, ಚೆನ್ನೈನಲ್ಲಿ 86.45 ರೂಪಾಯಿಗೆ ಮಾರಾಟವಾಗುತ್ತಿದೆ. ಹಾಗೂ ನೋಯ್ಡಾದಲ್ಲಿ ಪ್ರತಿ ಲೀಟರಿಗೆ 81.89 ರೂಪಾಯಿ, ಬೆಂಗಳೂರಿನಲ್ಲಿ 86.37 ರೂಪಾಯಿ, ಹೈದರಾಬಾದ್​ನಲ್ಲಿ 88.86 ರೂಪಾಯಿ ಜೈಪುರದಲ್ಲಿ 89.95 ರೂಪಾಯಿ, ಲಕ್ನೋದಲ್ಲಿ 81.66 ರೂಪಾಯಿ ಹಾಗೂ ತಿರುವನಂತಪುರಂನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 87.20 ರೂಪಾಯಿಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: Petrol Diesel Price | ಪೆಟ್ರೋಲ್ ದರ ನರ್ವಸ್ ನೈಂಟೀಸ್​​ನಲ್ಲಿ.. ಶತಕ ಗ್ಯಾರೆಂಟಿ ಎಂದು ಗ್ರಾಹಕರು ಕಂಗಾಲು!

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಹೆಚ್ಚಳ ಖಂಡಿಸಿ ಗದಗದಲ್ಲಿ ಕೈ ಕಾರ್ಯಕರ್ತರ ಟ್ರ್ಯಾಕ್ಟರ್ ಮೆರವಣಿಗೆ

Published On - 9:57 am, Sun, 28 February 21

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ