AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price | ಎಂಟನೇ ದಿನ ಪೆಟ್ರೋಲ್​, ಡೀಸೆಲ್​ ದರದಲ್ಲಿ ವ್ಯತ್ಯಾಸವಿಲ್ಲ.. ಹಾಗಾದರೆ ಇಂಧನ ದರ ಇಳಿಕೆಯತ್ತ ಸಾಗುತ್ತಾ?

Petrol price in Bangalore: ಇಂದು ಇಂಧನ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕಳೆದ ವಾರ ದರ ಏರಿಕೆ ಕಂಡ ನಂತರ, ಅದೇ ದರದಲ್ಲಿ ಇಂಧನ ಸ್ಥಿರತೆ ಕಾಪಾಡಿಕೊಂಡಿದೆ. ಸದ್ಯ ದರ ಏರಿಕೆಯತ್ತ ಮುಖ ಮಾಡದಿದ್ದರೆ ಸಾಕಪ್ಪಾ! ಎಂಬುದು ಗ್ರಾಹಕರ ಆಶಯ.

Petrol Diesel Price | ಎಂಟನೇ ದಿನ ಪೆಟ್ರೋಲ್​, ಡೀಸೆಲ್​ ದರದಲ್ಲಿ ವ್ಯತ್ಯಾಸವಿಲ್ಲ.. ಹಾಗಾದರೆ ಇಂಧನ ದರ ಇಳಿಕೆಯತ್ತ ಸಾಗುತ್ತಾ?
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Mar 07, 2021 | 9:22 AM

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಆಕಾಶ ಮುಟ್ಟುವಂತಿತ್ತು. ಮತ್ತು ನಿರಂತರವಾಗಿ ಹೆಚ್ಚುತ್ತಲೇ ಇತ್ತು. ಸದ್ಯ ಈಗ ಸತತ ಎಂಟು ದಿನಗಳಿಂದ ಇಂಧನ ದರ ತಟಸ್ಥವಾಗಿದ್ದು ಗ್ರಾಹಕರಿಗೆ ಸಮಾಧಾನ ಸಿಕ್ಕಂತಾಗಿದೆ. ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಳನ್ನು ತಲುಪಿದೆ. ವಾಸ್ತವವಾಗಿ, ತೈಲ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ನೀಡಲಾಗುತ್ತದೆ. ಇಂದು ಭಾನುವಾರ ಇಂಧನ ಬೆಲೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಕಚ್ಚಾ ತೈಲದ ಬೆಲೆ ಆಧಾರದ ಮೇಲೆ ಪೆಟ್ರೋಲ್‌ನ ಮೂಲ ಬೆಲೆಯನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಪ್ರತಿ ಲೀಟರಿಗೆ 94.22 ರೂಪಾಯಿಗೆ ಮಾರಾಟವಾಗುತ್ತಿದೆ. 

ಕಳೆದ ವಾರ, 25 ಪೈಸೆ ಇಂಧನ ಹೆಚ್ಚಾಗಿದೆ. ಅಂದಿನಿಂದ ಇಂದಿನವರೆಗೆ ಏರುತ್ತಿರುವ ಬೆಲೆಗಳಿಗೆ ವಿರಾಮ ಕಾಣಬಹುದು. ಇಂಧನ ದರದ ಹೆಚ್ಚಳದ ನಂತರದಲ್ಲಿ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂ. ಹಾಗೂ ಡೀಸೆಲ್ ಬೆಲೆ ಲೀಟರಿಗೆ 81.47 ರೂ.ಗಳಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆಯನ್ನು 13 ಪೈಸೆ ಹೆಚ್ಚಿಸಲಾಗಿದೆ. ತದ ನಂತರದಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 97.57 ರೂ. ಡೀಸೆಲ್ ಪ್ರತಿ ಲೀಟರಿಗೆ 88.60 ರೂ. ಹಾಗೂ ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 91.35 ಲೀಟರ್ ಆಗಿದೆ. ಡೀಸೆಲ್ ಪ್ರತಿ ಲೀಟರಿಗೆ 84.35 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 22 ಪೈಸೆ ಹೆಚ್ಚಾದ ನಂತರ ಪೆಟ್ರೋಲ್ ಪ್ರತಿ ಲೀಟರಿಗೆ 93.11 ರೂ.ಗೆ ಮಾರಾಟವಾಗುತ್ತಿದೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 91.17 ರೂಪಾಯಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.57 ರೂಪಾಯಿ ಕೋಲ್ಕತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 91.35 ರೂಪಾಯಿ ಚೆನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.11 ರೂಪಾಯಿ ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ ಬೆಲೆ 89.38 ರೂಪಾಯಿ

ಪ್ರಮುಖ ನಗರಗಳಲ್ಲಿ ಡೀಸೆಲ್ ಬೆಲೆ ದೆಹಲಿಯಲ್ಲಿ ಪ್ರತಿ ಲೀಟರ್​ ಡೀಸೆಲ್ ಬೆಲೆ 81.47 ರೂಪಾಯಿ ಮುಂಬೈನಲ್ಲಿ ಪ್ರತಿ ಲೀಟರ್​ ಡೀಸೆಲ್​ ಬೆಲೆ 88.60 ರೂಪಾಯಿ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಡೀಸೆಲ್​ ಬೆಲೆ 84.35 ರೂಪಾಯಿ ಚೆನ್ನೈನಲ್ಲಿ ಪ್ರತಿ ಲೀಟರ್​ ಡೀಸೆಲ್ 86.455 ರೂಪಾಯಿ ನೋಯ್ಡಾದಲ್ಲಿ ಪ್ರತಿ ಲೀಟರ್‌ ಡೀಸೆಲ್ ಬೆಲೆ 81.91 ರೂಪಾಯಿ

ಪೆಟ್ರೋಲ್ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪ್ರಶ್ನೆ ಎಲ್ಲರಿಗೂ ಮೂಡುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ, ರೂಪಾಯಿ ಮತ್ತು ಡಾಲರ್ ವ್ಯತ್ಯಾಸವನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲದ ಬೆಲೆಯ ಮೇಲೆ ಪೆಟ್ರೋಲ್‌ನ ಮೂಲ ಬೆಲೆಯನ್ನು ನಿಗದಿಪಡಿಸಲಾಗಿದೆ.

ಸರ್ಕಾರದ ಆದಾಯ ಸಂಗ್ರಹದ ಗುರಿಗೆ ಪೆಟ್ಟು ಬೀಳದ ರೀತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಪ್ರತಿ ಲೀಟರ್​ಗೆ 8.5 ರೂಪಾಯಿ ಇಳಿಕೆ ಮಾಡಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಿಂಟ್ ವರದಿ ಮಾಡಿದೆ. ಕಳೆದ ಒಂಬತ್ತು ತಿಂಗಳಿಂದ ನಿರಂತರವಾಗಿ ಪೆಟ್ರೋಲ್- ಡೀಸೆಲ್ ದರದಲ್ಲಿ ಏರಿಕೆ ಆಗುತ್ತಲೇ ಇದ್ದು, ಸದ್ಯಕ್ಕೆ ಐತಿಹಾಸಿಕ ಗರಿಷ್ಠ ಮಟ್ಟದಲ್ಲಿದೆ. ಗ್ರಾಹಕರ ಮೇಲಿನ ಹೊರೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಬೇಕು ಎಂದು ವಿರೋಧ ಪಕ್ಷಗಳೂ ಸೇರಿದಂತೆ ವಿವಿಧ ವರ್ಗದವರು ಒತ್ತಾಯ ಮಾಡುತ್ತಲೇ ಇದ್ದಾರೆ.ಇಲ್ಲಿವರೆಗೆ ಅಬಕಾರಿ ಸುಂಕ ಹೆಚ್ಚಳದ ಕುರಿತಾಗಿ ಗಮನಿಸಿದಾಗ, 2014ರ ನವೆಂಬರ್​ನಿಂದ 2016ರ ಜನವರಿ ಮಧ್ಯೆ ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಒಂಬತ್ತು ಬಾರಿ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ.

ಇದನ್ನೂ ಓದಿ: ಮಂದಿರಕ್ಕೆ ದೇಣಿಗೆ ಸಂಗ್ರಹ, ಟೂಲ್ ಕಿಟ್, ಪೆಟ್ರೋಲ್​ ದರ ಏರಿಕೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಇದನ್ನೂ ಓದಿ: Petrol Diesel Price | ಆರು ದಿನಗಳ ಕಾಲ ಸ್ಥಿರತೆ ಕಾಪಾಡಿಕೊಂಡ ಪೆಟ್ರೋಲ್​ ದರ; ಜಿಎಸ್​ಟಿ ವ್ಯಾಪ್ತಿಗೆ ತಂದರೆ ಇಂಧನ ದರ ಇಳಿಕೆ!

Published On - 9:04 am, Sun, 7 March 21

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ